Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 20 ಏಪ್ರಿಲ್ 2020 (09:19 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಮೇಲಧಿಕಾರಿಗಳ ಸಲಹೆ-ಸೂಚನೆ ಪಾಲಿಸಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಅನಗತ್ಯ ಚಿಂತೆಯಿಂದ ಅನಾರೋಗ್ಯ ಕಾಡಲಿದೆ.

ವೃಷಭ: ನಿಮ್ಮ ವ್ಯವಹಾರ ಚತುರತೆಯನ್ನು ಪ್ರದರ್ಶಿಸುವ ಕಾಲ ಬಂದಿದ್ದು, ಕ್ರಿಯಾತ್ಮಕವಾಗಿ ಯೋಚನೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ. ಕೌಟುಂಬಿಕವಾಗಿ ನಿಮ್ಮ ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ಕಾರ್ಯರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕವಾಗಿ ಭಕ್ತಿಭಾವ ಮೂಡಲಿದೆ. ಧನ ವ್ಯಯ ಮಾಡುವಾಗ ಎಚ್ಚರವಿರಲಿ.

ಕರ್ಕಟಕ: ಸಣ್ಣ ವ್ಯಾಪಾರಿಗಳಿಗೆ ಭವಿಷ್ಯದ ಯೋಚನೆ ಕಾಡುವುದು. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಇಷ್ಟ ಭೋಜನ ಮಾಡುವ ಯೋಗವಿದೆ. ಸುಲಭವಾಗಿ ಕೈಗೆ ಸಿಗುವ ವಸ್ತು ಹೆಚ್ಚು ದಿನ ಬಾಳಿಕೆ ಬರದು ಎಂಬುದನ್ನು ಅರಿಯಲಿದ್ದೀರಿ.

ಸಿಂಹ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಅಪವಾದದ ಭೀತಿಯಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಕಾರ್ಯದೊತ್ತಡ ಅನುಭವಕ್ಕೆ ಬರುವುದು. ನೂತನವಾಗಿ ಕೈಗೆತ್ತಿಕೊಂಡ ಯೋಜನೆಗಳು ಅರ್ಧಕ್ಕೇ ನಿಲ್ಲಲಿವೆ. ನಿರುದ್ಯೋಗಿಗಳು ಉತ್ತಮ ದಿನಕ್ಕಾಗಿ ಕೆಲವು ದಿನ ಕಾಯಬೇಕಾಗುತ್ತದೆ.

ಕನ್ಯಾ: ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯವಿದೆ. ವಿದೇಶ ಯಾನವನ್ನು ಕೆಲವು ದಿನ ಮುಂದೂಡುವುದು ಒಳಿತು. ಉದ್ಯೋಗಾರ್ಥಿಗಳಿಗೆ ಭವಿಷ್ಯದ ಚಿಂತೆ ಕಾಡುವುದು. ಹಿರಿಯರ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ.

ತುಲಾ: ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ದೇಹಾಯಾಸವಾಗದಂತೆ ಕಾಳಜಿ ವಹಿಸಿ. ಗೃಹ ಬಳಕೆ ವಸ್ತುಗಳ ಖರೀದಿಗೆ ಧನ ವ್ಯಯವಾಗಲಿದೆ. ಆಸ್ತಿ ಖರೀದಿ ಮಾಡಲು ಚಿಂತನೆ ನಡೆಸಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ.

ವೃಶ್ಚಿಕ: ಉದ್ಯೋಗಾರ್ಥಿಗಳಿಗೆ ಹೊಸ ಸವಾಲುಗಳು ಎದುರಾಗಲಿವೆ. ಕಾರ್ಯನಿಮಿತ್ತ ಕಿರು ಸಂಚಾರ, ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಪ್ರವೃತ್ತಿ ಕಂಡುಬರಲಿದೆ. ಅವಿವಾಹಿತರ ವಿವಾಹ ಮಾತುಕತೆ ಮುರಿದು ಬೀಳುವುದು.

ಧನು: ದೈವಾನುಗ್ರಹದಿಂದ ಇಂದು ನೀವು ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಹೊಸ ವಿಚಾರಗಳನ್ನು ಕಲಿಯಲಿದ್ದೀರಿ. ಮಕ್ಕಳ ವಿಚಾರದಲ್ಲಿ ವಿನಾಕಾರಣ ಚಿಂತೆ ಬೇಡ. ವಿದ್ಯಾರ್ಥಿಗಳಿಗೆ ಕಲಿಕೆಗೆ ಹೊಸ ದಾರಿಗಳು ಕಂಡುಬರಲಿದೆ.

ಮಕರ: ದುಡುಕಿ ಮಾತನಾಡಿ ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟು ಮಾಡಬೇಡಿ. ಕೌಟುಂಬಿಕವಾಗಿ ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ. ಆರ್ಥಿಕವಾಗಿ ಹಣಕಾಸಿಗೆ ಅಡಚಣೆಯಿರದು. ಆದರೆ ದುಂದು ವೆಚ್ಚ ಬೇಡ. ಭವಿಷ್ಯದ ಸವಾಲುಗಳಿಗೆ ಇಂದೇ ಸಿದ್ಧರಾಗಿ.

ಕುಂಭ: ಎಷ್ಟೇ ಕಷ್ಟ ಬಂದರೂ ನಿಮ್ಮ ಮಾನಸಿಕ ಸ್ಥೈರ್ಯದಿಂದಲೇ ಗೆಲುವು ಕಾಣಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಬಂಧು ಮಿತ್ರರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಗಮನಕೊಡಿ. ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ಮಹಿಳೆಯರಿಗೆ ಮನೆ ನಡೆಸುವ ಚಿಂತೆ ಕಾಡಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿದ್ದು, ಬೇಸರ ಉಂಟುಮಾಡಲಿದೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ. ಚಿಂತೆಗೆ ಕಡಿವಾಣವಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments