Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 24 ಏಪ್ರಿಲ್ 2020 (09:18 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮೇಲಧಿಕಾರಿಗಳ ಸಲಹೆ ಸೂಚನೆಗಳು ಕಿರಿ ಕಿರಿಯೆನಿಸಬಹುದು. ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಕೌಟುಂಬಿಕವಾಗಿ ತಾಳ್ಮೆ, ಸಂಯಮದಿಂದಿದ್ದಷ್ಟು ಉತ್ತಮ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಸಂಭಾವ್ಯ ಅಪಾಯ ತಪ್ಪಿ ಹೋಗಲಿದೆ. ಅವಿವಾಹಿತರಿಗೆ ವಿವಾಹ ಮಾತುಕತೆಗಳಲ್ಲಿ ಮುನ್ನಡೆ ಸಿಗಲಿದೆ. ನೂತನ ದಂಪತಿಗಳು ಮಧುರ ಕ್ಷಣ ಕಳೆಯಲಿದ್ದಾರೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಸಾಂಸಾರಿಕವಾಗಿ ಸಂಗಾತಿಯ ಬಹುದಿನಗಳ ಕನಸು ಈಡೇರಿಕೆಗೆ ಮುಂದಾಗಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಬಹುದು. ವ್ಯವಹಾರದಲ್ಲಿ ಸಣ್ಣ ಮಟ್ಟಿನ ಮುನ್ನಡೆ ಸಿಗಲಿದೆ. ಕುಲದೇವರ ಪ್ರಾರ್ಥಿಸಿ ಕಾರ್ಯಪ್ರವೃತ್ತರಾಗಿ.

ಕರ್ಕಟಕ: ಬಹುದಿನಗಳಿಂದ ಅಂದುಕೊಂಡಿದ್ದ ಯೋಜನೆಗಳಿಗೆ ಚಾಲನೆ ನೀಡಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಪ್ರೀತಿ ಪಾತ್ರರ ಜತೆ ಉತ್ತಮ ಸಮಯ ಕಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ.

ಸಿಂಹ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ಕಲಾ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಒಳಿತಾಗುವುದು. ಆರ್ಥಿಕವಾಗಿ ಚೇತರಿಕೆ ಇರುತ್ತದೆ. ಆದರೂ ದುಂದು ವೆಚ್ಚ ಬೇಡ.

ಕನ್ಯಾ: ನಿಮ್ಮ ಬಹುದಿನಗಳ ರಹಸ್ಯಗಳು ಬಹಿರಂಗವಾಗಲಿದೆ. ದೇಹಾರೋಗ್ಯದಲ್ಲಿ ಆಗಾಗ ಸಮಸ್ಯೆಗಳು ತೋರಿಬರಲಿವೆ. ನಿರ್ಧಾರ ಕೈಗೊಳ್ಳುವಾಗ ಅನಿಶ್ಚಿತತೆ ಕಾಡಬಹುದು. ಅನಪೇಕ್ಷಿತ ಅತಿಥಿಗಳನ್ನು ಎದುರುಗೊಳ್ಳಲು ಸಿದ್ಧರಾಗಬೇಕಾಗುತ್ತದೆ. ದೃಢ ನಿರ್ಧಾರ ಅಗತ್ಯ.

ತುಲಾ: ಕೌಟುಂಬಿಕವಾಗಿ ಮನಸ್ಸು ಗೊಂದಲದ ಗೂಡಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಮನಸ್ಸು ಬಯಸುವುದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ವೃಶ್ಚಿಕ: ನಿಮ್ಮ ಉದಾಸೀನ ಪ್ರವೃತ್ತಿಯಿಂದ ಕೈಗೆ ಬಂದ ಅವಕಾಶ ಬಾಯಿಗೆ ಬರದ ಸ್ಥಿತಿ ಎದುರಾಗಲಿದೆ. ಉದ್ಯೋಗಿಗಳಿಗೆ ಉದ್ಯೋಗ ಬದಲಾವಣೆಯ ಅವಕಾಶ ಸಿಗಲಿದೆ. ಸಾಂಸಾರಿಕ ಸಂಬಂಧಗಳು ಗಟ್ಟಿಯಾಗಲಿದೆ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ.

ಧನು: ಇಷ್ಟ ಮಿತ್ರರೊಂದಿಗೆ ಭೋಜನ ಮಾಡುವ ಯೋಗವಿದೆ. ಆದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಬಗ್ಗೆ ಕಾಳಜಿವಹಿಸಿ. ಗೃಹ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯವಾಗಲಿದೆ. ಸಹೋದರರೊಂದಿಗೆ ವಾದ ವಿವಾದ ಬೇಡ. ತಾಳ್ಮೆಯಿರಲಿ.

ಮಕರ: ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಾಕಷ್ಟು ಪರಾಮರ್ಶೆ ಮಾಡುವುದು ಅಗತ್ಯ. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ನಿರುದ್ಯೋಗಿಗಳಿಗೆ ಉನ್ನತ ಅವಕಾಶ ದೊರೆಯಲಿದೆ.

ಕುಂಭ: ವೃತ್ತಿರಂಗದಲ್ಲಿ ಎಲ್ಲಾ ಸರಿ ಹೋಗುತ್ತಿದೆ ಎಂದಾಗ ಅಕಸ್ಮಾತ್ತಾಗಿ ಅಡೆತಡೆಗಳು ಎದುರಾಗಲಿವೆ. ಪ್ರೀತಿ ಪಾತ್ರರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ. ದುಡುಕಿ ಮಾತನಾಡಲು ಹೋಗಬೇಡಿ. ಗೃಹಿಣಿಯರಿಗೆ ಗೃಹ ಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

ಮೀನ: ಹಿರಿಯರಿಂದ ಬಂದ ಬಳವಳಿಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರಲಿದೆ. ಮನೆಗೆ ಅನಿರೀಕ್ಷಿತವಾಗಿ ಬರುವ ವ್ಯಕ್ತಿಯಿಂದ ನಿಮ್ಮ ಸಮಸ್ಯೆ ನಿವಾರಣೆಯಾಗಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments