ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 30 ಏಪ್ರಿಲ್ 2020 (09:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯವಹಾರದಲ್ಲಿ ನಿಮ್ಮ ಅನುಭವದ ಕೊರತೆಯಿಂದ ತೊಂದರೆ ಅನುಭವಿಸಬೇಕಾದೀತು. ಸಂಗಾತಿಯ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಇಷ್ಟ ಭೋಜನ ಮಾಡುವ ಯೋಗವಿದೆ.

ವೃಷಭ: ಮನಸ್ಸಿಲ್ಲದೇ ಇದ್ದರೂ ಪ್ರೀತಿ ಪಾತ್ರರಿಗೋಸ್ಕರ ಕೆಲವೊಂದು ಕೆಲಸ ಮಾಡಲು ಮುಂದಾಗಬೇಕಾಗುತ್ತದೆ. ಮನೆಯವರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಹೆಣ್ಣು ಮಕ್ಕಳಿಗೆ ತವರಿನಿಂದ ಉಡುಗೊರೆ ನಿರೀಕ್ಷಿಸಬಹುದು. ಆರೋಗ್ಯದ ಕಡೆಗೆ ನಿಗಾ ಇರಲಿ.

ಮಿಥುನ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶವಿದೆ. ಸಂಗಾತಿಯ ಬಹುದಿನಗಳ ಆಸೆ ನೆರವೇರಿಸಲಿದ್ದೀರಿ. ಮಹಿಳೆಯರಿಗೆ ಗೃಹ ಕೃತ್ಯಗಳಲ್ಲೇ ಕಳೆದುಹೋಗಬೇಕಾಗುತ್ತದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಮನಸ್ಸು ಮಾಡಲಿದ್ದೀರಿ.

ಕರ್ಕಟಕ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ನಿಮ್ಮ ಅನುಕೂಲಕ್ಕೆ ತಕ್ಕಂತೆ ಕೆಲವೊಂದು ವ್ಯವಸ್ಥೆ ಬದಲಾಯಿಸುವುದು ಉತ್ತಮ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನ ವೃದ್ಧಿಯಾದರೂ ಜವಾಬ್ಧಾರಿಗಳು ಹೆಚ್ಚಾಗಲಿವೆ. ಅಧಿಕ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಅನೇಕ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ.

 
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರ ವಹಿಸಿ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬರಬಹುದು. ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡಲಾಗದೇ ನಿರಾಸೆಯಾಗಬಹುದು. ಪ್ರೀತಿ ಪಾತ್ರರ ಮನಸ್ಸಿಗೆ ದುಡುಕಿ ನೋವುಂಟುಮಾಡಬೇಡಿ. ನಿಮ್ಮ ಎಚ್ಚರಿಕೆಯಲ್ಲಿ ನೀವಿರಬೇಕು.

ವೃಶ್ಚಿಕ: ಕುಟುಂಬದವರೊಂದಿಗೆ ಸಂತೋಷದಿಂದ ಕಾಲಕಳೆಯುವ ಭಾಗ್ಯ ನಿಮ್ಮದಾಗಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಕಾಡಲಿದೆ. ಹಿರಿಯರ ಮಾತುಗಳಿಗೆ ಕಿವಿಗೊಡುವುದು ಉತ್ತಮ.

ಧನು: ಮೆಚ್ಚಿನ ಮಡದಿಯ ಮನದಾಸೆ ಪೂರೈಸಲು ನಾನಾ ಕಸರತ್ತು ನಡೆಸುವಿರಿ. ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ತೋರಿಬರಲಿವೆ. ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಎಷ್ಟೋ ದಿನದಿಂದ ಭೇಟಿಯಾಗಬೇಕೆಂದುಕೊಂಡಿದ್ದ ಹಳೆಯ ಮಿತ್ರರೊಂದಿಗೆ ಮಾತುಕತೆ ನಡೆಸಿ ಮನಸ್ಸಿಗೆ ಸಂತೋಷವಾಗುವುದು. ಹಳೆಯ ಸಂಬಂಧಗಳು ಮರಳಿ ಕೂಡಲಿವೆ. ಇಷ್ಟದ ವಸ್ತು ಖರೀದಿಗೆ ಧನವ್ಯಯವಾಗಲಿದೆ. ಸಂತೋಷ, ನೆಮ್ಮದಿ ನಿಮ್ಮದಾಗುವುದು.

ಕುಂಭ: ಅಧಿಕ ಧನ ಸಂಪಾದನೆ ಮಾಡಲು ಹೋಗಿ ಅಪರಿಚತರಿಂದ ವಂಚನೆಗೊಳಗಾಗುವ ಭೀತಿಯಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕತೆಗೆ ಕೆಲಸ ಕೊಡಿ. ಮಹಿಳೆಯರಿಗೆ ಚಿನ್ನಾಭರಣಗಳನ್ನು ಕಳೆದುಕೊಳ್ಳುವ ಭಯ ಕಾಡಲಿದೆ.

ಮೀನ: ವ್ಯಾಪಾರಿಗಳಿಗೆ ಲಾಭವಾಗಲಿದೆ. ಬಂಡವಾಳ ಹೂಡಿಕೆಗೆ ಇದು ಸಕಾಲವಿಲ್ಲದಿದ್ದರೂ ಯೋಜನೆಗಳನ್ನು ರೂಪಿಸಬಹುದು.  ಮನೆ, ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗದ ಭರವಸೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ವಸ್ತುಗಳನ್ನು ಮನೆಗೆ ತರಬೇಡಿ

ದೀಪ ಹಚ್ಚುವಾಗ ಗೊತ್ತಿಲ್ಲದೆ ಈ ತಪ್ಪು ಮಾಡಬೇಡಿ, ಶ್ರೇಯಸ್ಸಲ್ಲ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಮುಂದಿನ ಸುದ್ದಿ
Show comments