Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 1 ಮೇ 2020 (09:22 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಹಿರಿಯರ ಸಲಹೆ ಸೂಚನೆಗಳಿಗೆ ಬೆಲೆಕೊಡಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರುವುದು.

ವೃಷಭ: ವೃತ್ತಿರಂಗದಲ್ಲಿ ಹೊಸ ವಿಚಾರಗಳನ್ನು ಕಲಿಯಲು ಅವಕಾಶ ಸಿಗಲಿದೆ. ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಲ್ಲಿ ಯಶಸ್ಸು ಸಿಗಲಿದೆ. ಪಾಲು ಬಂಡವಾಳ ಹೂಡಿಕೆ ಮಾಡಲು ಕೆಲವು ದಿನ ಕಾಯುವುದು ಉತ್ತಮ. ದೇವರ ಪ್ರಾರ್ಥನೆ ಮಾಡಿ.

ಮಿಥುನ: ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಕೈಗೆ ಬಂದ ಆದಾಯ ಅದರಷ್ಟೇ ವೇಗವಾಗಿ ಖರ್ಚಾಗುತ್ತಿದೆ ಎಂಬ ಚಿಂತೆ ಕಾಡಲಿದೆ. ರಾಜಕೀಯ ವರ್ಗದವರಿಗೆ ಹೊಸ ಸವಾಲುಗಳು ಎದುರಾಗಲಿವೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಅದೃಷ್ಟದ ಬಲ ಸಿಗಲಿದೆ. ಇಷ್ಟು ದಿನ ಕಾಡುತ್ತಿದ್ದ ಸಮಸ್ಯೆಗಳ ಪರಿಹಾರಕ್ಕೆ ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ.

ಸಿಂಹ: ವೃತ್ತಿರಂಗದಲ್ಲಿ ಅದೃಷ್ಟದ ಬಲದಿಂದ ಮುನ್ನಡೆ ಸಾಧಿಸಲಿದ್ದೀರಿ. ನಿಮ್ಮ ಕ್ರಿಯಾತ್ಮಕತೆ, ಉತ್ಸಾಹದಿಂದ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಲಿದ್ದೀರಿ. ಆರ್ಥಿಕವಾಗಿ ಉಳಿತಾಯದ ಕಡೆಗೆ ಗಮನಕೊಡಬೇಕು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

 
ಕನ್ಯಾ: ಅವಿವಾಹಿತ ಕನ್ಯಾಮಣಿಗಳಿಗೆ ಕಂಕಣ ಬಲ ಕೂಡಿಬರಲಿದೆ. ಸರಕಾರಿ ನೌಕರರಿಗೆ ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ದಾನ, ಧರ್ಮಾದಿಗಳಿಂದ ಮನಸ್ಸಿಗೆ ಸಮಾಧಾನ ಸಿಗಲಿದೆ. ಯಾರಿಗೂ ಈ ದಿನ ಸಾಲ ಕೊಡಲು ಹೋಗಬೇಡಿ.

ತುಲಾ: ಇಂದು ನೀವು ಎಷ್ಟು ತಾಳ್ಮೆಯಿಂದ ಇರುತ್ತೀರೋ ಅಷ್ಟು ನಿಮಗೆ ಒಳ್ಳೆಯದು. ನಿಮ್ಮ ದುಡುಕಿನ ನಿರ್ಧಾರ, ಮಾತು ನಿಮಗೇ ತೊಂದರೆ ತಂದೊಡ್ಡಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.

ವೃಶ್ಚಿಕ: ಆರ್ಥಿಕವಾಗಿ ಖರ್ಚು ವೆಚ್ಚಗಳು ಹೆಚ್ಚಲಿವೆ. ವ್ಯಾಪಾರಿ ವರ್ಗದವರಿಗೆ ತುಸು ಸಮಾಧಾನಕರ ವಾರ್ತೆ ಸಿಗಲಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ಬೆಲೆ ಸಿಗದೇ ನಿರಾಸೆಯಾಗಬಹುದು. ತಾಳ್ಮೆ ಅಗತ್ಯ.

ಧನು: ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಆತಂಕ ಕಾಡಲಿದೆ. ಸಣ್ಣ ವ್ಯಾಪಾರಿಗಳಿಗೆ ಲಾಭ ಕಂಡುಬರುವುದು. ಸಾಮಾಜಿಕ ಕ್ಷೇತ್ರದಲ್ಲಿ ಹೆಸರು ಮಾಡುವ ಯೋಗವಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಉದ್ಯೋಗ, ವ್ಯಾಪಾರ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರಲಿದ್ದು, ತುಸು ನೆಮ್ಮದಿ ಮೂಡಲಿದೆ. ಸಾಂಸಾರಿಕವಾಗಿ ಸಂಗಾತಿ, ಮಕ್ಕಳೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಆರ್ಥಿಕವಾಗಿ ಅಭಿವೃದ್ಧಿಯಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕುಂಭ: ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಗೃಹ ಬಳಕೆ ವಸ್ತುಗಳ ಖರೀದಿ ಮಾಡಲು ಓಡಾಟ ನಡೆಸಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿ ಅಗತ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯವಿದೆ.

ಮೀನ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವ್ಯಾಪಾರಿಗಳು ಹೊಸ ವ್ಯವಹಾರಗಳಿಗೆ ಹೂಡಿಕೆ ಮಾಡಲಿದ್ದೀರಿ. ಸಾಂಸಾರಿಕವಾಗಿ ಸಂಗಾತಿಯ ಮಾತಿಗೆ ಸಹಮತ ತೋರಬೇಕಾಗುತ್ತದೆ. ಅನಿರೀಕ್ಷಿತವಾಗಿ ಧನಾಗಮನವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧನಸ್ಸು ರಾಶಿಯವರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಇದನ್ನು ದಾನ ಮಾಡಿ