Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 9 ಮೇ 2020 (08:24 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಸದವಾಕಾಶಗಳು ಬಂದಾಗ ಕಣ್ಣು ಮುಚ್ಚಿ ಕೂರಬೇಡಿ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡ ಸಿಗಲಿದೆ. ವಿದ್ಯಾರ್ಥಿಗಳಿಗೆ ಯಶಸ್ಸಿಗೆ ಕಠಿಣ ಪರಿಶ್ರಮ ನಡೆಸಬೇಕಾದ ಅಗತ್ಯವಿದೆ.

ವೃಷಭ: ವ್ಯವಹಾರದಲ್ಲಿ ಹಿತಶತ್ರುಗಳ ಕಾಟವಿರುತ್ತದೆ. ಎಚ್ಚರಿಕೆಯಿಂದ ಹೆಜ್ಜೆಯಿಡಿ. ನೂತನ ದಂಪತಿಗಳಿಗೆ ಏಕಾಂತದ ಸಮಯ ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಮಿಥುನ: ನಿರುದ್ಯೋಗಿಗಳಿಗೆ ಸದ್ಯದಲ್ಲೇ ಸಂದರ್ಶನ ಕರೆ ಬರಲಿದೆ. ಕನ್ಯಾಮಣಿಗಳಿಗೆ ಶೀಘ್ರದಲ್ಲೇ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಧನಾಗಮನಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ಪ್ರೀತಿ ಪಾತ್ರರಿಗೆ ನಿಮ್ಮ ದುಡುಕಿನ ಮಾತಿನಿಂದ ನೋವಾಗಬಹುದು. ತಾಳ್ಮೆ, ಸಂಯಮದಿಂದ ವರ್ತಿಸಿ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಕೃಷಿಕರಿಗೆ ಕೈಗೆ ಸಿಕ್ಕ ತುತ್ತು ಬಾಯಿಗೆ ಬರದ ಪರಿಸ್ಥಿತಿ ಎದುರಾಗಲಿದೆ. ತಾಳ್ಮೆ ಕಳೆದುಕೊಳ್ಳಬೇಡಿ.

ಸಿಂಹ: ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾದೀತು. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ಪ್ರೀತಿ ಪಾತ್ರರಿಗೆ ಉಡುಗೊರೆ ನೀಡಲಿದ್ದೀರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ.

 
ಕನ್ಯಾ: ಉದ್ಯೋಗದಲ್ಲಿ ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿಯಿದೆ. ವಿವಾಹ ಮಾತುಕತೆಗಳು ಮುರಿದುಬೀಳಬಹುದು. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಕಾರ್ಯರಂಗದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡಲಿವೆ. ಕೆಲಸದಲ್ಲಿ ನಿರುತ್ಸಾಹವಾಗಬಹುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ವೃಶ್ಚಿಕ: ಸರಕಾರಿ ಉದ್ಯೋಗಿಗಳಿಗೆ ಹೆಚ್ಚಿನ ಕಾರ್ಯಭಾರವಿರುವುದು. ನಿಮ್ಮ ಕ್ರಿಯಾತ್ಮಕ ಕೆಲಸಗಳಿಂದ ಬರುವಂತಹ ಕಷ್ಟಗಳನ್ನು ಎದುರಿಸಲಿದ್ದೀರಿ. ಅನಿರೀಕ್ಷಿತವಾಗಿ ಬರುವ ಅತಿಥಿಗಳಿಂದ ಸಂತಸವಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ.

ಧನು: ಮನೋಕಾಮನೆಗಳನ್ನು ಪೂರೈಸಲು ಹೆಚ್ಚಿನ ಧನವ್ಯಯವಾಗುವುದು. ಭವಿಷ್ಯದ ಯೋಜನೆಗಳಿಗೆ ಇಂದೇ ಹಣ ಕೂಡಿಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯದೊತ್ತಡವಿರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಪ್ರೀತಿ ಪಾತ್ರರಿಗಾಗಿ ಕೆಲವೊಂದು ತ್ಯಾಗಗಳನ್ನು ಮಾಡಬೇಕಾಗುತ್ತದೆ. ಗೃಹೋಪಯೋಗಿ ಕೆಲಸಗಳಿಗಾಗಿ ಹೆಚ್ಚಿನ ಸಮಯ ವ್ಯಯ ಮಾಡಲಿದ್ದೀರಿ. ಆರ್ಥಿಕವಾಗಿ ಆದಾಯಕ್ಕೆ ಕೊರೆತೆಯಿರದು. ಅಂದುಕೊಂಡ ಕೆಲಸ ಕಾರ್ಯಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ.

ಕುಂಭ: ಅಧಿಕ ಚಿಂತೆಗಳು ಕೆಲಸದ ಮೇಲೆ ಏಕಾಗ್ರತೆ ಕಳೆದುಕೊಳ್ಳುವಂತೆ ಮಾಡಲಿವೆ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷಕ್ಕಿಳಿಯದೇ ಇರುವುದು ಉತ್ತಮ. ಅಧಿಕಾರಿ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ದಾಯಾದಿ ಕಲಹಗಳು ನಿವಾರಣೆಯಾಗಲಿವೆ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

ಮುಂದಿನ ಸುದ್ದಿ
Show comments