ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 12 ಮೇ 2020 (09:08 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ನಿರ್ಧಾರಗಳಲ್ಲಿ ಸ್ಥಿರತೆಯ ಕೊರತೆ ಕಂಡುಬರಲಿದೆ. ಮಾನಸಿಕವಾಗಿ ಚಿತ್ತ ಚಾಂಚಲ್ಯ ಕಾಡಲಿದೆ. ಉದ್ಯೋಗದ ಬಗ್ಗೆ ಚಿಂತೆಯಾಗಲಿದೆ. ಸಾಂಸಾರಿಕವಾಗಿ ಪರಿಸ್ಥಿತಿಯೊಂದಿಗೆ ಹೊಂದಾಣಿಕೆ ಮಾಡಲು ಕಲಿಯಬೇಕಿದೆ. ದುಂದು ವೆಚ್ಚ ಬೇಡ.

ವೃಷಭ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಹೆಚ್ಚಿನ ಧನ ಸಂಪಾದನೆಗೆ ನಾನಾ ಮಾರ್ಗಗಳನ್ನು ಯೋಚಿಸಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರುವುದು. ಕುಲದೇವರ ಪ್ರಾರ್ಥನೆಯಿಂದ ಇಷ್ಟಸಿದ್ಧಿ.

ಮಿಥುನ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ವೃತ್ತಿರಂಗದಲ್ಲಿ ಜಾಣತನ ಪ್ರದರ್ಶಿಸಿ ಬರುವಂತಹ ಸಮಸ್ಯೆಗಳಿಂದ ಪಾರಾಗುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಕರ್ಕಟಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆಬರುವುದು. ವ್ಯಾಪಾರಿಗಳಿಗೆ ಲಾಭದ ದಾರಿಗಳು ಗೋಚರವಾಗಲಿದೆ. ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಉತ್ತಮಗೊಳ್ಳಲಿದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಉನ್ನತಿಯ ಯೋಗವಿದೆ. ಅವಕಾಶಗಳನ್ನು ಬಳಸಿಕೊಳ್ಳಿ.

 
ಕನ್ಯಾ: ವೃತ್ತಿರಂಗದಲ್ಲಿ ಹೆಚ್ಚಿನ ಕಾರ್ಯಭಾರ ಹೆಗಲಿಗೇರಲಿದೆ. ಜವಾಬ್ಧಾರಿಯುತವಾಗಿ ನಡೆದುಕೊಳ್ಳಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ಸಂಗಾತಿಯ ಮನೋಭಿಲಾಷೆ ಈಡೇರಿಸಲಿದ್ದೀರಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ತುಲಾ: ಬೇಡದ ವಿಚಾರಗಳ ಬಗ್ಗೆ ಚಿಂತೆ ಮಾಡಿಕೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಅಂದುಕೊಂಡ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನೀವು ಅತಿಯಾಗಿ ನಂಬಿದ್ದವರಿಂದಲೇ ವಂಚನೆಗೊಳಗಾಗುವಿರಿ. ಪಾಲು ಬಂಡವಾಳ ವ್ಯವಹಾರದಲ್ಲಿ ಹೂಡಿಕೆ ಮಾಡಲು ಕೆಲವು ದಿನ ಕಾಯುವುದು ಉತ್ತಮ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಧನು: ಅವಿವಾಹಿತ ಕನ್ಯೆಯರಿಗೆ ಶೀಘ್ರದಲ್ಲೇ ಮನಸ್ಸಿಗೆ ಹಿಡಿಸಿದಂತಹ ವಿವಾಹ ಪ್ರಸ್ತಾಪ ಬರಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗವಿದೆ. ಇಷ್ಟ ಮಿತ್ರರ ಜತೆ ಉತ್ತಮ ಸಮಯ ಕಳೆಯಲಿದ್ದೀರಿ. ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ. ಚಿಂತೆಯಿಂದ ಕೆಲಸವಾಗದು. ತಾಳ್ಮೆ, ಸಮಾಧಾನದಿಂದ ಮುಂದುವರಿಯಿರಿ. ಸಂಗಾತಿಯ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ಕುಂಭ: ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಶುಭವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಬಹಳ ದಿನಗಳ ಬಳಿಕ ಮನಸ್ಸಿಗೆ ಇಷ್ಟವಾದವರ ಜತೆ ಮಾತನಾಡುವ ಯೋಗ. ದೇವರ ಪ್ರಾರ್ಥನೆ ಮರೆಯದಿರಿ.

ಮೀನ: ಮಹಿಳೆಯರಿಗೆ ಉದ್ಯೋಗದಲ್ಲಿ ಸ್ಥಾನ ಪಲ್ಲಟ ಭೀತಿ. ನೆರೆಹೊರೆಯವರಿಂದ ಕಷ್ಟದ ಸಮಯದಲ್ಲಿ ಸಹಾಯ ಸಿಗಲಿದೆ. ಹಿರಿಯರಿಂದ ಉಡುಗೊರೆ ನಿರೀಕ್ಷಿಸಬಹುದು. ಮಕ್ಕಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬರಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಮುಂದಿನ ಸುದ್ದಿ
Show comments