Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 19 ಮೇ 2020 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆ ಪ್ರದರ್ಶಿಸಲು ಸೂಕ್ತ ವೇದಿಕೆ ಸಿಗಲಿದೆ. ಅಂದುಕೊಂಡಿದ್ದು ನಡೆಯದೇ ಹೋದಾಗ ಮಾನಸಿಕವಾಗಿ ಹತಾಶೆಗೊಳಗಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ನೀವು ಮಾಡುವ ಒಂದು ಸಣ್ಣ ತಪ್ಪಿಗೂ ಭಾರೀ ಬೆಲೆ ತೆರಬೇಕಾಗುತ್ತದೆ. ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿ. ದೇಹಾರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಬೇಡ. ಕೋಪತಾಪಕ್ಕೆ ಅವಕಾಶ ಕೊಡಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ವ್ಯಾಪಾರಿ ವರ್ಗದವರಿಗೆ ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳು ಗೋಚರವಾಗಲಿದೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಇಂದು ಯಾರಿಗೂ ಸಾಲ ಕೊಡುವುದು ಸೂಕ್ತವಲ್ಲ. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ನಿಮ್ಮ ಮನಸ್ಸಿನೊಳಗಿನ ಉದ್ದೇಶ, ಬಯಕೆ ಪ್ರಕಟಗೊಳಿಸಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಹಿರಿಯರಿಗೆ ದೈವ ಕಾರ್ಯದಲ್ಲಿ ಆಸಕ್ತಿ ಮೂಡಲಿದೆ. ಕುಲದೇವರ ಪ್ರಾರ್ಥನೆಯಿಂದ ಶುಭವಾಗುವುದು.

ಸಿಂಹ: ಹಂತ ಹಂತವಾಗಿ ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದ್ದು, ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಮನೆ, ಭೂಮಿ ಖರೀದಿಗೆ ಅವಕಾಶ ಒದಗಿಬರಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

 
ಕನ್ಯಾ: ಕೋಪದ ಕೈಗೆ ಬುದ್ಧಿ ಕೊಟ್ಟು ನಿರ್ಧಾರ ಕೈಗೊಳ್ಳಲು ಹೋಗಬೇಡಿ. ತಾಳ್ಮೆ, ಸಂಯಮ ಅಗತ್ಯ. ಆರ್ಥಿಕವಾಗಿ ಲೆಕ್ಕಾಚಾರ ಮಾಡಿಯೇ ವೆಚ್ಚ ಮಾಡಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ.

ತುಲಾ: ಸ್ಥಿತಿ ಗತಿಗಳು ಸುಧಾರಣೆಯಾಗಲಿದೆ. ಮಹಿಳೆಯರಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಒದಗಿ ಬರಲಿವೆ.

ವೃಶ್ಚಿಕ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಲಭ್ಯವಾಗಲಿದ್ದು, ಪ್ರಶಂಸೆಗೊಳಗಾಗಲಿದ್ದೀರಿ. ದಾಂಪತ್ಯ ಸುಖ ಅನುಭವಿಸಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಉದ್ಯೋಗಸ್ಥರಿಗೆ ಮುನ್ನಡೆಯಿದ್ದರೂ ಆದಾಯಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ.

ಧನು: ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ನಿಮ್ಮ ಕಷ್ಟಕಾಲದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ. ಗೃಹ ಬಳಕೆ ವಸ್ತುಗಳಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮಕರ: ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಪಡೆಯಲಿದ್ದೀರಿ. ಆರ್ಥಿಕವಾಗಿ ಅಭಿವೃದ್ಧಿಯಾಗಲಿದ್ದು, ಉತ್ತಮ ಆದಾಯ ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಕುಂಭ: ಋಣಾತ್ಮಕ ಚಿಂತೆಗಳು ನಿಮ್ಮ ಮಾನಸಿಕ ನೆಮ್ಮದಿಯನ್ನು ಹಾಳು ಮಾಡಬಹುದು. ಪ್ರೀತಿ ಪಾತ್ರರೊಂದಿಗೆ ನಿಮ್ಮ ದುಃಖ ಹಂಚಿಕೊಳ್ಳಲಿದ್ದೀರಿ.  ಸರಕಾರಿ ಉದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ಸಂಚಾರ ಮಾಡಬೇಕಾಗುತ್ತದೆ. ಮಾತಿನಲ್ಲಿ ಸಂಯಮವಿರಲಿ.

ಮೀನ: ಅರ್ಧಕ್ಕೇ ನಿಂತ ಕೆಲಸಗಳಿಗೆ ಮರುಚಾಲನೆ ನೀಡಲಿದ್ದೀರಿ. ಸ್ವ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡಿದರೆ ಯಶಸ್ಸು ಸಿಗಬಹುದು. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಸಾಂಸಾರಿಕವಾಗಿ ಸಂತಸದ ದಿನ ನಿಮ್ಮದಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ