Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 3 ಜೂನ್ 2020 (08:46 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೆಲಸ ಕಾರ್ಯಗಳನ್ನು ಮುಗಿಸಿಕೊಡುವ ಒತ್ತಡವಿರಲಿದೆ. ಮೇಲಧಿಕಾರಿಗಳ ಸಲಹೆ ಸೂಚನೆ ಪಥ್ಯವಾಗದೇ ಹೋಗಬಹುದು. ಕುಟುಂಬದವರ ಹಿತಾಸಕ್ತಿಗೆ ಬೆಲೆ ಕೊಡಿ. ನಿರುದ್ಯೋಗಿಳು ಪೈಪೋಟಿ ಎದುರಿಸಬೇಕಾಗುತ್ತದೆ. ವ್ಯಾಪಾರಿಗಳಿಗೆ ಮೇಲುಗೈಯಾಗಲಿದೆ.

ವೃಷಭ: ಸ್ವಂತ ವ್ಯಾಪಾರ, ವ್ಯವಹಾರ ಮಾಡುವವರಿಗೆ ಉನ್ನತಿಯ ಯೋಗವಿದೆ. ದೂರವಾಗಿದ್ದ ಸಂಬಂಧಗಳು ಮರಳಿ ಬೆಸೆಯುವುದು. ಮಕ್ಕಳಿಂದ ಸಂತಸ ನಿರೀಕ್ಷಿಸಬಹುದು. ಅವಕಾಶಗಳು ಬಂದಾಗ ಎರಡೂ ಕೈಗಳಿಂದ ಬಾಚಿಕೊಳ್ಳಿ. ದಿನದಂತ್ಯಕ್ಕೆ ಅಚ್ಚರಿಯ ವಿದ್ಯಮಾನ ನಡೆಯಲಿದೆ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಮರಳಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಆದರೆ ಯಾರಿಗೂ ಸಾಲ ಕೊಡಲು ಹೋಗಬೇಡಿ. ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಲು ಹಿರಿಯರ ಸಲಹೆ ಪಡೆಯಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಮಹಿಳೆಯರಿಗೆ ಭವಿಷ್ಯದ ಬಗ್ಗೆ ಆತಂಕ ಕಾಡಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಗೆ ಭಂಗ ತರುವ ಘಟನೆಗಳು ನಡೆಯಲಿವೆ. ದುರ್ಜನ ಸ್ನೇಹಿತರ ಸಂಗದಿಂದ ದೂರವಿರುವುದೇ ಉತ್ತಮ. ವಾಹನ ಸಂಚಾರ ಮಾಡುವಾಗ ಎಚ್ಚರಿಕೆ ಅಗತ್ಯ.

ಸಿಂಹ: ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಕಾರ್ಯರಂಗದಲ್ಲಿ ಅನಗತ್ಯ ಸಂಘರ್ಷಗಳು, ವಾಗ್ವಾದಗಳಿಂದ ದೂರವಿರುವುದೇ ಉತ್ತಮ. ಉದ್ವೇಗದಲ್ಲಿ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ.

ಕನ್ಯಾ: ಉದ್ಯೋಗದಲ್ಲಿ ಮುನ್ನಡೆಗೆ ಅವಕಾಶಗಳು ಒದಗಿಬರುವುದು. ನಿರುದ್ಯೋಗಿಗಳು ಬಯಸಿದ ಉದ್ಯೋಗ ಪಡೆಯಲು ಪರಿಶ್ರಮ ಪಡಬೇಕಾಗುತ್ತದೆ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.

ತುಲಾ: ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರೈಸಲು ಅಡೆತಡೆಗಳು ತೋರಿಬರಲಿವೆ. ರಾಜಕೀಯ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಪೋಷಕರೊಡನೆ ವಾದ-ವಿವಾದ ಬೇಡ. ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗಬಹುದು.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಸಹೋದ್ಯೋಗಿಗಳೇ ಅಸೂಯೆ ಪಡುವಂತಾಗಬಹುದು. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗವಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಧನು: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಪ್ರಗತಿ ಸಾಧಿಸಲು ಅವಕಾಶ ಸಿಗಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಎದುರಾಗಲಿದೆ. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಪಡೆಯುವಿರಾದರೂ ನಿಮ್ಮ ವಿಶ್ವಾಸದ ದುರುಪಯೋಗವೂ ಆಗಬಹುದು. ಎಚ್ಚರಿಕೆಯಿರಲಿ.

ಮಕರ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಿ ಚೇತರಿಕೆ ಕಂಡುಬರುವುದು. ಆರ್ಥಿಕವಾಗಿ ಪರಿಸ್ಥಿತಿ ಸುಧಾರಣೆಯಾಗಿಲಿದೆ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸವಾಗಲಿದೆ. ಖರ್ಚು ವೆಚ್ಚಗಳಲ್ಲಿ ಮಿತಿಯರಲಿ.

ಕುಂಭ: ಸಾಲ ಮಾಡಿಯಾದರೂ ತುಪ್ಪ ತಿನ್ನುವ ಆಸೆಯಾಗಬಹುದು. ಮನಸ್ಸಿನ ಆಸೆಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಅನವಶ್ಯಕವಾಗಿ ಋಣಾತ್ಮಕ ಚಿಂತನೆ ಬೇಡ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಕಾರ್ಯದೊತ್ತಡದಿಂದ ಪ್ರೀತಿ ಪಾತ್ರರ ಮೇಲೆ ವಿನಾಕಾರಣ ಸಿಟ್ಟು ಮಾಡಿಕೊಳ್ಳುತ್ತೀರಿ. ತಾಳ್ಮೆ, ಸಂಯಮ ಅಗತ್ಯ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಕೊಂಚ ವಿರಾಮ ಸಿಗಲಿದೆ. ಯೋಗ್ಯ ವಯಸ್ಕರಿಗೆ ವಿವಾಹ ಮಾತುಕತೆಗಳು ಫಲಪ್ರದವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ದೋಷ ಪರಿಹಾರವಾಗಲು ಈ ತಂತ್ರ ಮಾಡಿ