Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 6 ಜೂನ್ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉತ್ತಮ ಅವಕಾಶಗಳು ಬಂದಾಗ ಕಣ್ಮುಚ್ಚಿ ಕೂರಬೇಡಿ. ಯಾವುದೇ ವಿಚಾರಗಳನ್ನೂ ಹಗುರವಾಗಿ ಪರಿಗಣಿಸಿದರೆ ಮುಂದೆ ಪಶ್ಚಾತ್ತಾಪ ಪಡಬೇಕಾದೀತು. ಅವಿವಾಹಿತರಿಗೆ ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಉತ್ತಮ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಆರ್ಥಿಕ ಪರಿಸ್ಥಿತಿಯಲ್ಲಿ ಹಂತ ಹಂತವಾಗಿ ಸುಧಾರಣೆ ಕಂಡುಬರಲಿದೆ. ಹಾಗಿದ್ದರೂ ಹೊಸ ಬಂಡವಾಳ ಹೂಡಿಕೆಗೆ ಕೆಲವು ದಿನ ಕಾಯುವುದು ಉತ್ತಮ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ. ಸಂಗಾತಿಯ ಮನಸ್ಸಿಗೆ ಸಂತಸ ನೀಡಲಿದ್ದೀರಿ.

ಮಿಥುನ: ಆರ್ಥಿಕ ವಿಚಾರದಲ್ಲಿ ಕೊಂಚ ಎಚ್ಚರ ತಪ್ಪಿದರೂ ವಂಚನೆಗೊಳಗಾಗುವ ಭೀತಿಯಿದೆ. ಕೌಟುಂಬಿಕವಾಗಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಗಮನಕೊಡಿ. ನಿರುದ್ಯೋಗಿಗಳು ಉತ್ತಮ ಅವಕಾಶಕ್ಕೆ ಕೆಲವು ದಿನ ಕಾಯಬೇಕು.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಿಗಬೇಕಾದರೆ ಕಠಿಣ ಪರಿಶ್ರಮ ಪಡಲೇಬೇಕಾಗುತ್ತದೆ. ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ಬೇಸರವಾಗಬಹುದು. ತಾಳ್ಮೆ, ಸಂಯಮವಿರಲಿ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ವಾದ ವಿವಾದಗಳಿಂದ ದೂರವಿರಿ.

ಸಿಂಹ: ಶಿಕ್ಷಕ ವೃತ್ತಿಯಲ್ಲಿರುವವರಿಗೆ ವೃತ್ತಿ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ವಿದ್ಯಾರ್ಥಿಗಳು ಕ್ರಿಯಾತ್ಮಕವಾಗಿ ಯೋಚನೆಎ ಮಾಡಿ ಪೋಷಕರ ಮೆಚ್ಚುಗೆಗೆ ಪಾತ್ರರಾಗುವರು. ಸಾಂಸಾರಿಕ ಸುಖಕ್ಕೆ ಕೊರೆತೆಯಿರದು. ಮೇಲ್ವರ್ಗದ ಅಧಿಕಾರಿಗಳಿಗೆ ಒತ್ತಡ ಹೆಚ್ಚಲಿದೆ.

ಕನ್ಯಾ: ಉದ್ಯೋಗ ಸಂಬಂಧವಾಗಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ನಿಮ್ಮ ಕಾರ್ಯಕ್ಷಮತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಕುಟುಂಬ ವರ್ಗದವರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಆದರೆ ಆರ್ಥಿಕವಾಗಿ ಅನಿರೀಕ್ಷಿತ ಖರ್ಚುಗಳು ಚಿಂತೆಗೆ ಕಾರಣವಾಗಲಿದೆ.

ತುಲಾ: ಹೊಸ ವಸ್ತುಗಳ ಖರೀದಿಗಾಗಿ ಹೆಚ್ಚು ಖರ್ಚು ವೆಚ್ಚವಾಗುವುದು. ಕಾರ್ಯರಂಗದಲ್ಲಿ ಮಿಶ್ರಫಲ ಸಿಗಲಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ. ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಕಾಯ್ದುಕೊಂಡರೆ ಒಳಿತು.

ವೃಶ್ಚಿಕ: ವೃತ್ತಿರಂಗದಲ್ಲಿ ಇತರರ ಮೇಲೆ ನಿಯಂತ್ರಣ ಸಾಧಿಸಲು ಹೊರಡುವ ನಿಮ್ಮ ಗುಣ ನಿಮಗೇ ತೊಂದರೆ ನೀಡಬಹುದು. ಅನಗತ್ಯ ವಾದ-ವಿವಾದಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಧನು: ವ್ಯಾಪಾರ ವ್ಯವಹಾರದಲ್ಲಿ ನಷ್ಟದ ಭೀತಿ ಎದುರಾಗಲಿದೆ. ಹಣಕಾಸಿನ ವಿಚಾರದಲ್ಲಿ ಕಟ್ಟು ನಿಟ್ಟು ಮಾಡದಿದ್ದರೆ ಮುಂದೆ ತೊಂದರೆಯಾದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಕರ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳೇ ಅಸೂಯೆ ಪಡುವಂತೆ ಏಳಿಗೆ ಕಂಡುಬರಲಿದೆ.  ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಅನಿರೀಕ್ಷಿತ ಅವಕಾಶಗಳು ಸಿಗಲಿದ್ದು, ಸರಿಯಾಗಿ ಬಳಸಿಕೊಳ್ಳಿ. ಆರ್ಥಿಕ ವಿಚಾರದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಅಧಿಕ ಖರ್ಚು ವೆಚ್ಚಗಳಿಗೆ ಚಿಂತೆಗೀಡಾಗುವಿರಿ. ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಲಿದ್ದೀರಿ. ಗೃಹ ಸಂಬಂಧೀ ಕೆಲಸಗಳಿಗಾಗಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಸಿಗಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ನಿಮ್ಮ ಜಾಣತನದಿಂದ ಬರುವಂತಹ ಕಷ್ಟಗಳನ್ನು ಧೈರ್ಯದಿಂದ ಎದುರಿಸಲಿದ್ದೀರಿ. ಕೃಷಿಕರಿಗೆ ವ್ಯವಹಾರಗಳು ಸುಗಮವಾಗಿ ನಡೆಯಲಿವೆ. ಸರಕಾರಿ ಕೆಲಸಗಳಲ್ಲಿ ಅನಗತ್ಯ ವಿಳಂಬವಾದೀತು. ತಾಳ್ಮೆಯಿರಲಿ. ಕಿರು ಸಂಚಾರ ಮಾಡಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಕ್ಷ್ಮೀದೇವಿ ಮನೆಯಲ್ಲಿ ಸ್ಥಿರವಾಗಿ ನೆಲೆಸಲು ಈ 5 ವಸ್ತುಗಳನ್ನಿಟ್ಟುಕೊಳ್ಳಿ