ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಮಹಿಳೆಯರಿಗೆ ಬಿಡುವಿಲ್ಲದ ಕೆಲಸಗಳಿಂದ ದೇಹ ಹೈರಾಣಾಗಬಹುದು. ದೇಹಾಯಾಸವಾಗದಂತೆ ನೋಡಿಕೊಳ್ಳಿ. ನಕಾರಾತ್ಮಕ ಯೋಚನೆಗಳು ಮನಸ್ಸನ್ನು ಘಾಸಿಗೊಳಿಸಲಿವೆ. ದೇವತಾ ಪ್ರಾರ್ಥನೆ ಮಾಡಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ವೃಷಭ: ಆರ್ಥಿಕ ಸ್ಥಿತಿಗತಿಗಳು ಸುಧಾರಿಸಲಿದ್ದು, ನೀವು ಅಂದುಕೊಂಡ ಕೆಲಸಗಳನ್ನು ನೆರವೇರಿಸಲಿದ್ದೀರಿ. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ಹಿರಿಯರ ಪ್ರೀತಿಗೆ ಭಾಜನರಾಗಲಿದ್ದೀರಿ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂಭ್ರಮವಿರಲಿದೆ.
ಮಿಥುನ: ಬೇಡದ ವಿಚಾರಗಳಿಗೆ ಅನಗತ್ಯ ಪ್ರಾಮುಖ್ಯತೆ ಕೊಟ್ಟು ನಿಮ್ಮ ನೆಮ್ಮದಿಯನ್ನು ನೀವೇ ಹಾಳು ಮಾಡಿಕೊಳ್ಳಬೇಡಿ. ವ್ಯಾಪಾರ, ವ್ಯವಹಾರಗಳಲ್ಲಿ ನಿರೀಕ್ಷಿತ ಆದಾಯ ಸಿಗಲಿದೆ. ಆದರೆ ಅನಿರೀಕ್ಷಿತ ಖರ್ಚುಗಳು ಚಿಂತೆಗೆ ಕಾರಣವಾಗಬಹುದು. ದೇವತಾ ಪ್ರಾರ್ಥನೆ ಮಾಡಿ.
ಕರ್ಕಟಕ: ಮನಸ್ಸಿಗೆ ಆಘಾತ ತರುವ ವಿಚಾರಗಳನ್ನು ಕೇಳಲಿದ್ದೀರಿ. ದೈವಾನುಕೂಲದಿಂದ ನಿರುದ್ಯೋಗಿಗಳು ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು. ಶಿಕ್ಷಕರಿಗೆ ವೃತ್ತಿಯಲ್ಲಿ ಮುನ್ನಡೆ. ನೆರೆಹೊರೆಯವರ ಕಿರಿ ಕಿರಿ ಇದ್ದೇ ಇರುತ್ತದೆ. ಚಿಂತೆ ಮಾಡಬೇಡಿ.
ಸಿಂಹ: ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ಬಾಕಿ ಹಣ ಸಂದಾಯವಾಗಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಲಿದ್ದೀರಿ.
ಕನ್ಯಾ: ಕುಟುಂಬ ವರ್ಗದವರಿಂದ ನಿಮ್ಮ ನಿರ್ಧಾರ, ಕೆಲಸಗಳಿಗೆ ಸಹಕಾರ ಸಿಗಲಿದೆ. ಮಕ್ಕಳ ವಿಚಾರದಲ್ಲಿ ಕೆಲವು ಕಠಿಣ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ತೋರಿಬರಬಹುದು. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಅಗತ್ಯ.
ತುಲಾ: ವೃತ್ತಿರಂಗದಲ್ಲಿ ಅನಗತ್ಯ ಸಮಸ್ಯೆಗಳನ್ನು ಮೈಮೇಲೆಳೆದುಕೊಳ್ಳಲಿದ್ದೀರಿ. ಇದರಿಂದ ಮಾನಸಿಕ ನೆಮ್ಮದಿ ಹಾಳಾಗಬಹುದು. ಪ್ರೀತಿ ಪಾತ್ರರೊಂದಿಗೆ ನಿಮ್ಮ ಮನಸ್ಸಿನ ಭಾವನೆ ಹಂಚಿಕೊಳ್ಳಲಿದ್ದೀರಿ. ಶುಭ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.
ವೃಶ್ಚಿಕ: ಕೆಲಸದ ನಿಮಿತ್ತ ಅನ್ಯ ಊರುಗಳಿಗೆ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಲಿದೆ. ಪ್ರಯಾಣದಲ್ಲಿ ಎಚ್ಚರಿಕೆಯಿಂದಿರಿ. ಅಪರಿಚಿತರೊಂದಿಗೆ ವ್ಯವಹರಿಸುವುದು ಬೇಡ. ಸಾಲಗಾರರಿಂದ ಮುಕ್ತಿ ಸಿಗಲಿದೆ. ಆತುರದ ನಿರ್ಧಾರ ಬೇಡ.
ಧನು: ವೃತ್ತಿರಂಗದಲ್ಲಿ ಸಮಸ್ಯೆಗಳು ಎದುರಾದರೂ ನಿಮ್ಮ ಕ್ರಿಯಾಶೀಲತೆಯಿಂದ ನಿಭಾಯಿಸುವಿರಿ. ಸ್ನೇಹಿತರೊಡನೆ ಅತಿಯಾದ ಸಲುಗೆಯೂ ಒಳ್ಳೆಯದಲ್ಲ. ನೆರೆಹೊರೆಯವರೊಂದಿಗೆ ನಿಮ್ಮ ಬಾಂಧವ್ಯ ವೃದ್ಧಿಯಾಗಲಿದೆ. ಖರ್ಚು ವೆಚ್ಚದ ಮೇಲೆ ನಿಗಾ ಇರಲಿ.
ಮಕರ: ಯೋಗ್ಯ ವಯಸ್ಕರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರಲಿವೆ. ಆರ್ಥಿಕ ಪರಿಸ್ಥಿತಿಯಲ್ಲಿ ಏರಿಳಿತಗಳಿದ್ದರೂ ನಿಮ್ಮ ಮನದಿಚ್ಛೆಯನ್ನು ಪೂರೈಸಿಕೊಳ್ಳಲು ಧನವ್ಯಯ ಮಾಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕುಂಭ: ಹೊಸ ರೀತಿಯ ಸವಾಲುಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಹೊಸ ವಿಚಾರಗಳನ್ನು ಕಲಿಯುವ ಉತ್ಸಾಹ ತೋರಿಬರಲಿದೆ. ಸಂಗಾತಿಯ ಸಹಕಾರ ಸಿಗಲಿದೆ. ಯಾವುದರ ಬಗ್ಗೆಯೂ ಅತಿಯಾದ ಆಸೆ ಬೇಡ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.
ಮೀನ: ವ್ಯವಹಾರದಲ್ಲಿ ಶತ್ರು ಕಾಟವಿದ್ದರೂ ನಿಮ್ಮ ಗುರಿ ಸಾಧನೆಗೆ ತೊಂದರೆಯಾಗದು. ನಿರುದ್ಯೋಗಿಗಳು ಸ್ವಯಂ ವೃತ್ತಿಯ ಕಡೆಗೆ ಗಮನ ಹರಿಸಲಿದ್ದಾರೆ. ಮಹಿಳೆಯರಿಗೆ ಸದ್ಯದಲ್ಲೇ ಚಿನ್ನಾಭರಣ ಖರೀದಿ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.