Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 11 ಜೂನ್ 2020 (09:04 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

ಮೇಷ: ಭವಿಷ್ಯದ ವಿಚಾರದಲ್ಲಿ ಚಿಂತೆಗೊಳಗಾಗುವಿರಿ. ಹಲವು ಅವಕಾಶಗಳು ಎದುರಾದರೂ ಅದನ್ನು ಬಳಸಿಕೊಳ್ಳಬೇಕೋ, ಬೇಡವೋ ಎಂಬ ಗೊಂದಲ ಕಾಡಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು. ಶುಭ ಮಂಗಲ ಕಾರ್ಯಗಳು ಸಾಂಗವಾಗಿ ನೆರವೇರಲಿದೆ.

ವೃಷಭ: ಧನಾಗಮನಕ್ಕೆ ನಾನಾ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ಖರ್ಚು ವೆಚ್ಚಗಳು ಮಿತಿ ಮೀರದಂತೆ ಎಚ್ಚರಿಕೆ ವಹಿಸಬೇಕು. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿವೆ.

ಮಿಥುನ: ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ವೃತ್ತಿರಂಗದಲ್ಲಿ ಮುನ್ನಡೆಗೆ ಅನುಕೂಲಕರವಾದ ವಾತಾವರಣ ಒದಗಿಬರಲಿದೆ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೊರಬೇಕಾಗುತ್ತದೆ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ.

ಕರ್ಕಟಕ: ಸುದೀರ್ಘ ಕಾಲದಿಂದ ನಿಮ್ಮನ್ನು ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯ ಸ್ಪೂರ್ತಿದಾಯಕ ಮಾತುಗಳು ನಿಮ್ಮಲ್ಲಿ ಹೊಸ ಉತ್ಸಾಹ ತರಲಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ.

ಸಿಂಹ: ನಿಮ್ಮ ದೃಢ ನಿರ್ಧಾರ ಕ್ರಿಯಾಶೀಲತೆಯಿಂದ ಹೊಸ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಸಾಂಸಾರಿಕವಾಗಿ ಸಂಬಂಧಗಳು ಗಟ್ಟಿಯಾಗಲಿವೆ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮ ಅಗತ್ಯ.

ಕನ್ಯಾ: ನಿಮ್ಮ ಜೀವನ ಶೈಲಿ ಬದಲಾಯಿಸಿಕೊಂಡರೆ ಉತ್ತಮ. ಹೊಂದಾಣಿಕೆಯ ಮನೋಭಾವವಿದ್ದರೆ ಎಂತಹ ಸಮಸ್ಯೆಯೇ ಆದರೂ ಪರಿಹಾರ ಕಂಡುಕೊಳ್ಳಬಹುದು. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ಅಲೆದಾಟ ನಡೆಸಬೇಕಾಗಬಹುದು. ತಾಳ್ಮೆಯಿರಲಿ.

ತುಲಾ: ನಿಮಗೆ ಸಂಬಂಧಪಡದ ವಿಚಾರಗಳ ಬಗ್ಗೆ ಅನಗತ್ಯ ಚಿಂತೆ ಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಸಾಂಸಾರಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳು ಒಂದೊಂದಾಗಿ ಪರಿಹಾರವಾಗಲಿದೆ. ಅವಿವಾಹಿತರಿಗೆ ಶೀಘ‍್ರವೇ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.

ವೃಶ್ಚಿಕ: ಲಾಭದಾಯಕ ಉದ್ದಿಮೆಗಳು ಇದ್ದಕ್ಕಿದ್ದಂತೆ ನಷ್ಟ ಅನುಭವಿಸಲಿದ್ದು, ಹಣಕಾಸಿಗಾಗಿ ಪರದಾಟ ನಡೆಸಬೇಕಾಗುತ್ತದೆ. ದಾಯಾದಿಗಳ ಕಿರುಕುಳ ತೋರಿಬರಲಿವೆ. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಅನಿರೀಕ್ಷಿತವಾಗಿ ಹಳೆಯ ಮಿತ್ರನ ಭೇಟಿಯಾಗಲಿದ್ದೀರಿ.

ಧನು: ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಆರ್ಥಿಕ ಸ್ಥಿತಿಗತಿಗಳು ಉತ್ತಮವಾಗಲಿದೆ. ಅನಗತ್ಯ ಚಿಂತೆಗಳನ್ನು ಬಿಟ್ಟು ಮಾನಸಿಕವಾಗಿ ಗಟ್ಟಿಯಾಗಲು ಪ್ರಯತ್ನಿಸಿ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆಗಳು ಬೇಡ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನಹರಿಸಬೇಕಾಗುತ್ತದೆ. ಯಾರನ್ನೂ ಕೀಳಾಗಿ ಕಾಣಬೇಡಿ. ಉದ್ಯೋಗದಲ್ಲಿ ಕೆಳ ಹಂತದ ನೌಕರರಿಗೆ ಸುಧಾರಿಸುವ ಅವಕಾಶ ಸಿಗಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿ.

ಕುಂಭ: ವೃತ್ತಿರಂಗದಲ್ಲಿ ನಿಮಗೆ ಅನುಕೂಲಕರವಲ್ಲದ ವಿಚಾರಗಳು ನಡೆಯಬಹುದು. ತಾಳ್ಮೆ, ಸಂಯಮ ಕಾಪಾಡಿಕೊಳ್ಳಿ. ಮಾತಿನ ಮೇಲೆ ನಿಗಾ ಇರಲಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಮಕ್ಕಳ ವಿಚಾರದಲ್ಲಿ ಚಿಂತೆಯಾಗಬಹುದು. ದಿನದಂತ್ಯಕ್ಕೆ ನೆಮ್ಮದಿಯ ಸುದ್ದಿ.

ಮೀನ: ಪ್ರೇಮಿಗಳಿಗೆ ಉತ್ತಮ ದಿನವಾಗಿದ್ದು, ಸಂಬಂಧಗಳು ಗಟ್ಟಿಯಾಗಲಿವೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಸಾಮಾಜಿಕವಾಗಿ ಅಪವಾದಗಳು ಬಂದೀತು, ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ದುಂದು ವೆಚ್ಚ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva Mantra: ಶಿವನ ದ್ವಾದಶ ಲಿಂಗ ಸ್ತೋತ್ರ ತಪ್ಪದೇ ಇಂದು ಓದಿ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಇಂದು ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments