Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 16 ಜೂನ್ 2020 (09:11 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯಕ್ಷೇತ್ರದಲ್ಲಿ ಜವಾಬ್ಧಾರಿ ಹೆಚ್ಚಲಿದೆ. ಹೆಚ್ಚಿನ ಓಡಾಟದಿಂದ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಹಿರಿಯರಿಗೆ ನಿಮ್ಮ ಅಗತ್ಯ ಕಂಡುಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿದರೆ ಒಳಿತು.

ವೃಷಭ: ಹಣಕಾಸು ವಿಚಾರವಾಗಿ ಸ್ನೇಹಿತರೊಂದಿಗೆ ಮನಸ್ತಾಪ ಬಂದೀತು. ಹೀಗಾಗಿ ಸಾಲ ವ್ಯವಹಾರಗಳನ್ನು ಕೆಲವು ದಿನ ಮುಂದೂಡುವುದು ಉತ್ತಮ. ಹೊಸ ಯೋಜನೆಗಳಿಗೆ ಅವಕಾಶಗಳು ತೋರಿಬರಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಮಿಥುನ: ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಏಕಾಗ್ರತೆ ಉಂಟಾಗಬಹುದು. ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ ಕಂಡುಬರಲಿದೆ. ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಸರಕಾರಿ ಅಧಿಕಾರಿಗಳಿಗೆ ಕಾರ್ಯದೊತ್ತಡವಿರಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಕೃಷಿಕರಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹೊಸ ಅವಕಾಶಗಳು ಒದಗಿಬರಲಿವೆ.

ಸಿಂಹ: ಶುಭ ಮಂಗಲ ಕಾರ್ಯಗಳಿಗೆ ವಿಘ‍್ನಗಳು ಎದುರಾಗಲಿವೆ. ಹಿರಿಯರ ಆಶೀರ್ವಾದ ಸಿಗಲಿದೆ. ಸಾಂಸಾರಿಕವಾಗಿ ಮಕ್ಕಳಿಂದ ಸಂತಸ ಸಿಗಲಿದೆ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ. ಹಣಕಾಸಿನ ಹರಿವಿಗೆ ತೊಂದರೆಯಿರದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಧನಾಗಮನಕ್ಕೆ ನಾನಾ ರೀತಿಯ ಖರ್ಚು ವೆಚ್ಚಗಳು ಕಂಡುಬರಲಿವೆ. ಗೆಳೆಯರಿಂದ ಸಹಾಯ ಹಸ್ತ ಸಿಗುವುದರಿಂದ ಬರುವಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮನಸ್ಸಿನ ಉದ್ವೇಗಕ್ಕೆ ಕಡಿವಾಣ ಹಾಕಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿ ಸಿಗಲಿದೆ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟವಾಗಲಿದೆ. ಆಕಸ್ಮಿಕವಾಗಿ ಧನಲಾಭವಾಗಲಿದೆ. ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ. ಆದರೆ ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದಿರಿ. ಗೃಹಿಣಿಯರಿಗೆ ಶುಭ ಸುದ್ದಿ ಕೇಳಿಬರಲಿದೆ.

ವೃಶ್ಚಿಕ: ವಿದ್ಯಾರ್ಥಿಗಳು ಶೈಕ್ಷಣಿಕ ರಂಗದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಹಿರಿಯರಿಗೆ ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ರಾಜಕೀಯವಾಗಿ ಉನ್ನತ ಸ್ಥಾನ ಸಿಗಲಿದೆ.

ಧನು: ಕಷ್ಟಪಟ್ಟರೆ ಯಶಸ್ಸು ಸಾಧ‍್ಯ ಎಂಬುದನ್ನು ಮನಗಾಣಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಸಾಮಾಜಿಕ ಕೆಲಸಗಳಲ್ಲಿ ಆಸಕ್ತಿ ಕಂಡುಬರಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಮಕರ: ಸರಕಾರಿ ಅಧಿಕಾರಿಗಳಿಗೆ ಮುಂಬಡ್ತಿ ಯೋಗವಿದೆ. ವಾಹನ ಖರೀದಿಯ ಯೋಗವಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ದುಡುಕಿನ ನಿರ್ಧಾರಗಳಿಂದ ಪಶ್ಚಾತ್ತಾಪ ಪಡಲಿದ್ದೀರಿ. ಸಾಂಸಾರಿಕವಾಗಿ ತಾಳ್ಮೆ, ಸಮಾಧಾನ ಅಗತ್ಯ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ಹಿತ ಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಹಣಕಾಸಿನ ಹರಿವಿಗೆ ತೊಂದರೆಯಿರದು.

ಮೀನ: ಸಾಂಸಾರಿಕವಾಗಿ ಚೇತರಿಕೆಯ ದಿನಗಳಿವು. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ಬಂಧು ಮಿತ್ರರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಪ್ರೇಮಿಗಳಿಗೆ ಶುಭ ದಿನವಾಗಿರಲಿದೆ. ವ್ಯಾಪಾರ, ವ್ಯವಹಾರಗಳು ಸರಾಗವಾಗಿ ನಡೆಯಲಿವೆ. ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ದೋಷ ದೂರವಾಗಲು ನೀರಿಗೆ ಇದನ್ನು ಬೆರೆಸಿ ಸ್ನಾನ ಮಾಡಿ