Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 17 ಜೂನ್ 2020 (08:46 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನ ಯೋಗವಿದೆ. ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ಗಳಿಸುವ ಅವಕಾಶವಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಷಭ: ಕೃಷಿಕರಿಗೆ ವ್ಯವಹಾರಕ್ಕೆ ಉತ್ತೇಜನ ಸಿಗಲಿದೆ. ಆರ್ಥಿಕವಾಗಿ ಅಧಿಕ ಧನಲಾಭವಾಗಲಿದೆ. ಲೆಕ್ಕ ಪತ್ರಗಳ ಬಗ್ಗೆ ಜಾಗ್ರತೆಯಿರಲಿ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚಲಿದೆ. ವ್ಯಾಪಾರಿಗಳಿಗೆ ಅಭಿವೃದ್ಧಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾದ ಸಂತಸ ಕಂಡುಬರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಾಹನ ಸಂಚಾರ ಮಾಡುವ ಜಾಗ್ರತೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಆರ್ಥಿಕವಾಗಿ ಖರ್ಚು ವೆಚ್ಚ ಮಾಡುವಾಗ ಎಚ್ಚರವಿರಲಿ. ದಾಂಪತ್ಯದಲ್ಲಿ ಕಲಹಗಳಾಗದಂತೆ ಎಚ್ಚರಿಕೆ ವಹಿಸಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದತ್ತ ಮನಸ್ಸಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ಸಾಂಸಾರಿಕವಾಗಿ ನೆಮ್ಮದಿಯ ದಿನಗಳಿವು. ಕುಟುಂಬ ಸದಸ್ಯರೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಆರ್ಥಿಕವಾಗಿ ಧನಪ್ರಾಪ್ತಿಯಾಗಲಿರುವುದರಿಂದ ಅಂದುಕೊಂಡ ಕೆಲಸ ನೆರವೇರಿಸಲಿದ್ದೀರಿ. ಕಿರು ಸಂಚಾರದಿಂದ ಕಾರ್ಯಪ್ರಾಪ್ತಿ.

ಕನ್ಯಾ: ಉದ್ಯೋಗ ಭದ್ರತೆಯ ಅಪಾಯ ಎದುರಾಗಲಿದೆ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲು ಮುಂದಾಗಲಿದ್ದೀರಿ. ಅನವಶ್ಯಕ ಮಾತುಗಳಿಂದ ಕಲಹವಾದೀತು. ಮಾತಿನ ಮೇಲೆ ನಿಗಾ ಇರಲಿ. ಸಂಗಾತಿಯ ಅಭಿಪ್ರಾಯಗಳಿಗೆ ಬೆಲೆಕೊಡಿ.

ತುಲಾ: ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗಲಿದೆ. ಕೌಟುಂಬಿಕವಾಗಿ ಇದುವರೆಗೆ ಇದ್ದ ಅಸಮಾಧಾನಗಳು ದೂರವಾಗಲಿದೆ. ಅನಗತ್ಯ ವಿಚಾರಗಳಿಗೆ ತಲೆಕಡಿಸಿಕೊಳ್ಳುವುದು ಬೇಕಾಗಿಲ್ಲ. ಬಂಧು ಜನರ ಭೇಟಿಯಾಗಲಿದ್ದೀರಿ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ನಿಧಾನಗತಿಯಲ್ಲಿ ಕೆಲಸ ಕಾರ್ಯಗಳು ನಡೆಯಲಿವೆ. ನಿರಾಶೆ ಬೇಡ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ದೇವತಾ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಗೃಹ ಬಳಕೆ ವಸ್ತುಗಳ ಖರೀದಿಗೆ ಹಣ ಖರ್ಚು ಮಾಡಲಿದ್ದೀರಿ.

ಧನು: ಕಷ್ಟದ ಸಮಯದಲ್ಲಿ ನೆರೆಹೊರೆಯವರಿಂದ ಸಹಾಯ ಸಿಗಲಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಆತಂಕವಾಗಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರ್ಥಿಕವಾಗಿ ಜಾಗ್ರತೆ ಮಾಡುವುದು ಉತ್ತಮ. ಹೂಡಿಕೆ ವ್ಯವಹಾರಕ್ಕೆ ಕೆಲವು ದಿನ ಕಾಯಿರಿ.

ಮಕರ: ವ್ಯಾಪಾರ ವ್ಯವಹಾರಗಳು ನಿರೀಕ್ಷಿತ ಮಟ್ಟದಲ್ಲಿ ಲಾಭ ತಂದುಕೊಡಲಿವೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಉತ್ತಮವಾಗಲಿದೆ. ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಮನೋಕಾಮನೆಗಳನ್ನು ಪೂರೈಸಲು ಇಷ್ಟದೇವರ ಪ್ರಾರ್ಥನೆ ಮಾಡುವಿರಿ.

ಕುಂಭ: ಅಂದುಕೊಂಡಿದ್ದೆಲ್ಲಾ ನಡೆಯದು ಎಂಬ ಸತ್ಯ ಮನಗಾಣುವಿರಿ. ಕೆಲಸದಲ್ಲಿ ಒಂದು ರೀತಿಯ ನಿರುತ್ಸಾಹ ಕಂಡುಬರಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ.

ಮೀನ: ದೈವಾನುಗ್ರಹದಿಂದ ನೀವು ಅಂದುಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ಸಕಾಲದಲ್ಲಿ ಸಂಗಾತಿಯು ನೀಡುವ ಸಲಹೆಗಳು ಉಪಯುಕ್ತವೆನಿಸಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಕೂಡ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ