Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 18 ಜೂನ್ 2020 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾರ್ವಜನಿಕ ಕ್ಷೇತ್ರದಲ್ಲಿ ಉನ್ನತ ಅವಕಾಶಗಳು ದೊರೆಯಲಿವೆ. ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದವರ ಜತೆ ವೈವಾಹಿಕ ಮಾತುಕತೆಗಳು ನಡೆಯಲಿವೆ. ಆರ್ಥಿಕವಾಗಿ ಹಣಕಾಸಿನ ಕೊರತೆ ಬಗ್ಗೆ ಎಚ್ಚರಿಕೆ ಅಗತ್ಯ. ವೃತ್ತಿರಂಗದಲ್ಲಿ ಸ್ವಪ್ರಯತ್ನ ಅಗತ್ಯವಿದೆ.

ವೃಷಭ: ನಿಮ್ಮ ಬದುಕಿನಲ್ಲಿ ಹೊಸ ಆರಂಭಕ್ಕೆ ತೊಡಗಿಸಿಕೊಳ್ಳಲು ಇದು ಸಕಾಲ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ನೆರೆಹೊರೆಯವರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಹಂತ ಹಂತವಾಗಿ ಪ್ರಗತಿ ಸಾಧಿಸಲಿದ್ದೀರಿ. ವ್ಯವಹಾರದಲ್ಲಿ ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ. ಸಣ್ಣ ಪುಟ್ಟ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದನ್ನು ಬಿಡಿ. ತಾಳ್ಮೆ, ಸಂಯಮ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಸಾಂಸಾರಿಕವಾಗಿ ಪತ್ನಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಹಿರಿಯರಿಗೆ ಒಂದು ರೀತಿಯ ವೈರಾಗ್ಯ ಮೂಡಬಹುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಚಿಂತೆ ಬೇಡ.

ಸಿಂಹ: ಆಪ್ತರೊಂದಿಗೆ ಮಾತನಾಡುವುದರಿಂದ ಮನಸ್ಸಿನ ದುಃಖ ಕಡಿಮೆಯಾಗಲಿದೆ. ವೃತ್ತಿರಂಗದಲ್ಲಿ ಹಿತಶತ್ರುಗಳ ಸಂಚು ಬಯಲಿಗೆ ಬರಲಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.

ಕನ್ಯಾ: ವೃತ್ತಿರಂಗದಲ್ಲಿ ಅಚಾತುರ್ಯದಿಂದ ಪ್ರಮಾದವಾಗಬಹುದು. ಆರ್ಥಿಕವಾಗಿ ಏರಿಳಿತ ಸಾಮಾನ್ಯ. ಅದಕ್ಕೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸಂಬಂಧ ಉಳಿಸಿಕೊಳ್ಳುವುದರ ಬಗ್ಗೆ ಯೋಚನೆ ಮಾಡಿ. ದೇಹಾರೋಗ್ಯದಲ್ಲಿ ಉದಾಸೀನತೆ ಬೇಡ.

ತುಲಾ: ಹಿರಿಯರಿಗೆ ಆಹಾರ ಏರುಪೇರಿನಿಂದ ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾಗಬಹುದು. ವಾದ,ವಿವಾದಗಳಿಂದ ದೂರವಿದ್ದಷ್ಟು ಉತ್ತಮ. ಶುಭ ಮಂಗಲ ಕಾರ್ಯ ನೆರವೇರಿಸಲು ಇದು ಸಕಾಲ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ. ಮನಸ್ಸಿಗೆ ಸಂತಸವಿರಲಿದೆ.

ವೃಶ್ಚಿಕ: ಯಾವುದೇ ಕೆಲಸಕ್ಕೆ ತೊಡಗಿಸಿಕೊಂಡರೂ ಕಷ್ಟ ನಷ್ಟಗಳು ಎದುರಾಗಲಿವೆ. ಕೆಲಸದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರಲಿದೆ. ತಾಳ್ಮೆಯಿಂದ ನಿಭಾಯಿಸಿಕೊಂಡು ಹೋಗಬೇಕು. ನಿರುದ್ಯೋಗಿಗಳು ಬಯಸಿದ ಉದ್ಯೋಗಕ್ಕೆ ಅಲೆದಾಟ ನಡೆಸಬೇಕಾಗುತ್ತದೆ.

ಧನು: ನಿಮ್ಮ ಸುಖ ಸಂಸಾರದಲ್ಲಿ ಹುಳಿ ಹಿಂಡಲು ಕೆಲವರು ಕಾಯುತ್ತಿರುತ್ತಾರೆ. ಅಂತಹವರನ್ನು ನಿರ್ಲಕ್ಷಿಸುವುದೇ ಉತ್ತಮ. ಸಂಗಾತಿಯ ಕೆಲಸಗಳಿಗೆ ಜತೆಯಾಗಲಿದ್ದೀರಿ. ನೂತನ ದಂಪತಿಗಳಿಗೆ ಹೊಂದಾಣಿಕೆ ಕೊರತೆ ಉಂಟಾಗಲಿದೆ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಮಕರ: ಆರ್ಥಿಕವಾಗಿ ಹಣಕಾಸಿನ ಕೊರತೆಯಿಂದ ಅಂದುಕೊಂಡ ಯೋಜನೆಗಳು ಅರ್ಧಕ್ಕೇ ನಿಲ್ಲಲಿವೆ. ವೃತ್ತಿಬದುಕಿನಲ್ಲಿ ಹೊಸ ಬದಲಾವಣೆಗೆ ಮನಸ್ಸು ಬಯಸುವುದು. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಆರ್ಥಿಕವಾಗಿ ಪ್ರಗತಿ ಕಂಡುಬರಲಿದ್ದು, ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಆಪ್ತರೊಂದಿಗೆ ಬೆರೆಯುವುದರಿಂದ ಮಾನಸಿಕ ನೆಮ್ಮದಿ ಕಾಣಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಇಷ್ಟ ಭೋಜನ ಮಾಡುವ ಯೋಗವಿದೆ.

ಮೀನ: ಸಂಗಾತಿಯ ಜತೆಗೆ ಭಿನ್ನಾಭಿಪ್ರಾಯವಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿ. ಉದ್ಯೋಗದಲ್ಲಿ ಕೆಲವೊಂದು ಅನಿರೀಕ್ಷಿತ ಬದಲಾವಣೆಗಳಿಗೆ ಸಿದ್ಧರಾಗಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೀರ್ತಿ, ಯಶಸ್ಸು ಲಭಿಸಲು ಸಂಜೆ ಸಮಯದಲ್ಲಿ ಹಸಿರು ಬಣ್ಣದ ಬಕೆಟ್ ನಿಂದ ಹೀಗೆ ಮಾಡಿ