ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 21 ಜೂನ್ 2020 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಕೆಳ ಹಂತದ ನೌಕರರಿಗೆ ಉದ್ಯೋಗ ಉಳಿಸಿಕೊಳ್ಳುವ ಚಿಂತೆ ಎದುರಾಗಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ತೊಂದರೆಗಳನ್ನು ಎದುರಿಸಬೇಕಾದೀತು. ಮಿತ್ರರ ಸಹಕಾರ ಸಿಗಲಿದೆ.

ವೃಷಭ: ಆರ್ಥಿಕವಾಗಿ ಅನಿರೀಕ್ಷಿತವಾಗಿ ಎದುರಾಗುವ ಖರ್ಚು ವೆಚ್ಚಗಳು ತಲೆಬಿಸಿಗೆ ಕಾರಣವಾಗಲಿದೆ. ಕೃಷಿ ಕಾರ್ಯಗಳಿಂದ ಉತ್ತಮ ಆದಾಯ ನಿರೀಕ್ಷಿಸಬಹುದು. ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಸಿಸಿದರೆ ಮಾತ್ರ ಉತ್ತಮ ಫಲ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಒಳಿತಾಗುವುದು. ಕೋರ್ಟು ಕಚೇರಿ ವ್ಯವಹಾರಗಳಿಗೆ ಲೆಕ್ಕಪತ್ರಗಳ ಸಿದ್ಧತೆ ಮಾಡಲಿದ್ದೀರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ದೂರ ಪ್ರಯಾಣವನ್ನು ಅನಿವಾರ್ಯವಾಗಿ ಮುಂದೂಡಬೇಕಾಗುತ್ತದೆ. ಕರ್ತವ್ಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ. ಹಿರಿಯರ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕೆಟ್ಟ ಜನರ ಸಹವಾಸ ಮುಂದೆ ತೊಂದರೆ ತಂದೊಡ್ಡಲಿದೆ. ಷೇರು ಬಂಡವಾಳ ಹೂಡಿಕೆಯಲ್ಲಿ ಲಾಭ ಕಂಡುಬರಲಿದೆ. ಅವಿವಾಹಿತರಿಗೆ ವಿವಾಹ ಮಾತುಕತೆಗಳಲ್ಲಿ ಮುನ್ನಡೆ ಕಂಡುಬರಲಿದೆ.  

ಕನ್ಯಾ: ಭೂಮಿ, ವಾಹನ ಖರೀದಿಗೆ ಇದು ಸಕಾಲವಾಗಿರಲಿದೆ. ಆದರೆ ಹೊಸದಾಗಿ ಯಾರಿಗೂ ಸಾಲ ಕೊಡಲು ಹೋಗಬೇಡಿ. ಮಹಿಳೆಯರಿಂದ ಸಹಾಯ ಸಿಗಲಿದೆ. ಸಂಗಾತಿಗೆ ಉಡುಗೊರೆ ಕೊಡಲಿದ್ದೀರಿ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ.

ತುಲಾ: ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಸಿಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಆದರೆ ನಾಲಿಗೆ ಚಪಲದಿಂದ ದೇಹಾರೋಗ್ಯ ಕೆಡಿಸಿಕೊಳ್ಳಬೇಡಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ವೃಶ್ಚಿಕ: ಪ್ರಯತ್ನಬಲವಿಲ್ಲದೇ ಯಾವ ಕೆಲಸವೂ ನಡೆಯದು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬದಿಗೊತ್ತಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ಕಲಿಯುವ ಅವಕಾಶ ಸಿಗಲಿದೆ. ವ್ಯಾಪಾರಿಗಳು ಪ್ರಗತಿ ಕಾಣಲಿದ್ದಾರೆ.

ಧನು: ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹಣಕಾಸಿನ ಬಗ್ಗೆ ಎಚ್ಚರಿಕೆಯಿಂದಿರಿ. ನಿಮ್ಮ ಮುಗ್ಧತೆಯನ್ನು ಸ್ವಲಾಭಕ್ಕೆ ಬಳಸಿಕೊಳ್ಳುವ ಜನರಿರುತ್ತಾರೆ. ಅಧಿಕ ಒಡಾಟದಿಂದ ದೇಹಾಯಾಸವಾದೀತು. ಗೃಹ ಬಳಕೆ ವಸ್ತುಗಳ ಖರೀದಿ ಮಾಡಲಿದ್ದೀರಿ.

ಮಕರ: ಸಂಗಾತಿಯ ಸಲಹೆಗಳಿಗೆ ಕಿವಿಗೊಡದೇ ಮನಸ್ತಾಪವಾಗುವ ಸಾಧ‍್ಯತೆಯಿದೆ. ತಾಳ್ಮೆಯಿಂದ ವರ್ತಿಸಿ. ನೀವು ನಂಬಿಕೊಂಡಿದ್ದವರಿಂದಲೇ ವಂಚನೆಗೊಳಗಾಗುವ ಭೀತಿಯಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಹೂಡಿಕೆ ಮಾಡಲು ಕೆಲವು ದಿನ ಕಾಯುವುದು ಒಳಿತು.

ಕುಂಭ: ಮೇಲಧಿಕಾರಿಗಳ ಕಿರಿ ಕಿರಿ ಅಸಹನೀಯವಾಗಲಿದೆ. ಸಾಂಸಾರಿಕವಾಗಿ ಬಂಧು ಜನರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಹಳೆಯ ಯೋಜನೆಗಳಿಗೆ ಮರು ಚಾಲನೆ ನೀಡಲಿದ್ದೀರಿ. ಮಕ್ಕಳ ಬಗ್ಗೆ ಎಚ್ಚರಿಕೆಯಿರಲಿ.

ಮೀನ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ವೃತ್ತಿರಂಗದಲ್ಲಿ ಪ್ರತಿಸ್ಪರ್ಧಿಗಳು ಹುಟ್ಟಿಕೊಳ್ಳಲಿದ್ದಾರೆ. ಅನಿರೀಕ್ಷಿತವಾಗಿ ಮುಂಬಡ್ತಿಯ ಯೋಗವಿದೆ. ಕೃಷಿಕರು ಉತ್ತಮ ಫಲ ಪಡೆಯಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ