Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 22 ಜೂನ್ 2020 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕ ವಿಚಾರದಲ್ಲಿ ಆತಂಕಕಾರಿ ಪರಿಸ್ಥಿತಿ ಎದುರಾಗಲಿವೆ. ಸಂಗಾತಿಯೊಂದಿಗೆ ಅನಗತ್ಯ ಮನಸ್ತಾಪಗಳಿಗೆ ಪಶ್ಚಾತ್ತಾಪ ಪಡುವಂತಾದೀತು. ಮಕ್ಕಳ ವಿಚಾರದಲ್ಲಿ ಸಂತಸ ಕೇಳಿಬರಲಿದೆ. ತಾಳ್ಮೆ ಅಗತ್ಯ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಷಭ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಉನ್ನತಿಯ ಯೋಗವಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ವಿನಾಕಾರಣ ವಿವಾದ ಮೈಮೇಲೆಳೆದುಕೊಳ್ಳುವಿರಿ. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ.

ಮಿಥುನ: ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ವ್ಯಾಪಾರ, ವ್ಯವಹಾರದಲ್ಲಿ ಎಚ್ಚರಿಕೆಯಿಂದ ಮುಂದಿನ ಹೆಜ್ಜೆಯಿಡಬೇಕಾಗುತ್ತದೆ. ಹಿತಶತ್ರುಗಳ ವಂಚನೆ ಬಯಲಿಗೆ ಬರಲಿದೆ. ಸಾಮಾಜಿಕ ರಂಗದಲ್ಲಿ ಉತ್ತಮ ಸ್ಥಾನ ಮಾನ ಲಭ್ಯವಾಗಲಿದೆ.

ಕರ್ಕಟಕ: ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ದೇಹಾರೋಗ್ಯದಲ್ಲಿ ಕೊಂಚ ಮಟ್ಟಿನ ಸುಧಾರಣೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ.

ಸಿಂಹ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕಾರ್ಯ ಸಾಧನೆ ಮಾಡಲಿದ್ದೀರಿ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಸೂಕ್ತ. ಅವಿವಾಹಿತರು ಶೀಘ್ರ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ.  

ಕನ್ಯಾ: ಆರ್ಥಿಕವಾಗಿ ಋಣಬಾಧೆ ಕಾಡಲಿದೆ. ಆದಾಯ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನೀವು ನಂಬಿಕೊಂಡಿದ್ದವರಿಂದಲೇ ವಂಚನೆಗೊಳಗಾಗುವ ಭೀತಿಯಿದೆ. ಧರ್ಮಸತ್ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳನ್ನು ನಿಭಾಯಿಸಲು ಕುಟುಂಬದವರ ಸಹಕಾರ ಪಡೆಯುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೃಶ್ಚಿಕ: ಪ್ರೇಮ ಪ್ರಕರಣಗಳಲ್ಲಿ ಜಯ ಸಿಗಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆಯಿಂದ ನಡೆದುಕೊಂಡರೆ ಸುಖ ಪ್ರಾಪ್ತಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಾಣಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ಅನಗತ್ಯವಾಗಿ ಮಕ್ಕಳ ವಿಚಾರದಲ್ಲಿ ತಲೆಕೆಡಿಸಿಕೊಳ್ಳುವುದನ್ನು ಬಿಡಿ. ನಿಮ್ಮ ಕೆಲವೊಂದು ಮಾತುಗಳು ಕಲಹಕ್ಕೆ ಕಾರಣವಾದೀತು. ಸಂಯಮ, ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳು ಏಕಾಗ್ರತೆಗಾಗಿ ದೇವರ ಪ್ರಾರ್ಥನೆ ಮಾಡುವುದು ಉತ್ತಮ. ಉದ್ಯೋಗದಲ್ಲಿ ಅಭಿವೃದ್ಧಿಯಿರಲಿದೆ.

ಮಕರ: ಯಾವುದೇ ಕೆಲಸ ಕಾರ್ಯಗಳು ನಿರೀಕ್ಷಿಸಿದ ರೀತಿಯಲ್ಲಿ ಫಲ ಕೊಡದೇ ಇದ್ದಾಗ ಮನಸ್ಸಿಗೆ ಬೇಸರವಾಗಬಹುದು. ಸತತ ಪ್ರಯತ್ನದಿಂದ ಫಲ ಸಾಧ‍್ಯ. ಯಾರೋ ಮಾಡಿದ ತಪ್ಪಿಗೆ ನೀವು ಬೆಲೆ ತೆರಬೇಕಾಗುತ್ತದೆ. ಕುಲದೇವರ ಪ್ರಾರ್ಥನೆಯಿಂದ ಒಳಿತಾಗುವುದು.

ಕುಂಭ: ಸರಕಾರಿ ಕೆಲಸಗಳು ವಿಳಂಬ ಗತಿಯಲ್ಲಿ ಸಾಗಲಿವೆ. ಅನಗತ್ಯ ಪ್ರಯಾಣದಿಂದ ದುಂದು ವೆಚ್ಚವಾಗಲಿದೆ. ಆರ್ಥಿಕ ಪರಿಸ್ಥಿತಿ ಬಗ್ಗೆ ಗಮನವಿರಲಿ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ.

ಮೀನ: ಹಿರಿಯರಿಂದ ಬಂದ ಉಡುಗೊರೆಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರಲಿದೆ. ಕೌಟುಂಬಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾಗಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಚಾಲನೆ ನೀಡಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments