Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 28 ಜೂನ್ 2020 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ರಂಗದಲ್ಲಿ ಕೊಂಚ ಸಮಾಧಾನಕರ ವಾರ್ತೆ ಕೇಳಿಬರಲಿದೆ. ಬಹುದಿನಗಳಿಂದ ಬಾಕಿ ಬರಬೇಕಿದ್ದ ಹಣ ಪಾವತಿಯಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕೆಲಸಕ್ಕೆ ಎದುರಾಗುತ್ತಿದ್ದ ತೊಂದರೆಗಳು ನಿವಾರಣೆಯಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಅನಗತ್ಯ ವಿಚಾರಗಳಿಗೆ ತಲೆಕಡಿಸಿಕೊಳ್ಳುವುದು ಬೇಡ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.

ಮಿಥುನ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಚಾಲನೆ ನೀಡಲಿದ್ದೀರಿ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಅಂದುಕೊಂಡ ಕೆಲಸಗಳು ನೆರವೇರಲಿದೆ. ವ್ಯಾಪಾರಿಗಳಿಗೆ ತಕ್ಕ ಮಟ್ಟಿಗೆ ಲಾಭ ಕಂಡುಬರಲಿದೆ. ಕೃಷಿಕರಿಗೆ ಹಾಕಿದ ಬಂಡವಾಳಕ್ಕೆ ಮೋಸವಾಗದು. ವಿದ್ಯಾರ್ಥಿಗಳಿಗೆ ಮುನ್ನಡೆ.

ಸಿಂಹ: ನಿಮ್ಮ ಕೆಲಸಗಳಿಗೆ ಸಾಮಾಜಿಕವಾಗಿ ಜನಮನ್ನಣೆ ಸಿಗಲಿದೆ. ಪ್ರೀತಿ ಪಾತ್ರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ದಿನದಂತ್ಯಕ್ಕೆ ಶುಭ ಸುದ್ದಿ ಕೇಳಿಬರಲಿದೆ.

ಕನ್ಯಾ: ಪಾಲು ಬಂಡವಾಳ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಆದರೆ ನಿಮ್ಮ ದುಡುಕುತನದಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ವೈಯಕ್ತಿಕವಾಗಿ ಹಿಂದೆ ಮಾಡಿದ ತಪ್ಪುಗಳನ್ನು ನೆನೆಯುತ್ತಾ ಇಂದು ಸಿಗುವ ಉತ್ತಮ ಅವಕಾಶವನ್ನು ಹಾಳು ಮಾಡಿಕೊಳ್ಳಬೇಡಿ.

ತುಲಾ: ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ವಿನಾಕಾರಣ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋದರೆ ಅವಮಾನ ಎದುರಿಸಬೇಕಾದೀತು. ವೃತ್ತಿರಂಗದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಲೆಕ್ಕ ಪತ್ರಗಳ ಬಗ್ಗೆ ನಿಗಾ ಇಟ್ಟುಕೊಳ್ಳುವುದು ಮುಖ್ಯ.

ವೃಶ್ಚಿಕ: ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗುವುದು. ಆದರೆ ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿರಲಿ. ವೈವಾಹಿಕ ಪ್ರಸ್ತಾಪಗಳು ಬರಲಿವೆ. ಆರ್ಥಿಕವಾಗಿ ಹಣ ಸಂಪಾದನೆಗೆ ನಾನಾ ಮಾರ್ಗಗಳು ತೋರಿಬರಲಿವೆ. ಸರಿಯಾಗಿ ಬಳಸಿಕೊಳ್ಳಿ.

ಧನು: ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಮಾಡಬೇಡಿ. ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ತರುವ ಘಟನೆಗಳಾದೀತು. ತಾಳ್ಮೆ ಅಗತ್ಯ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಕರ: ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ಒದಗಿಬರಲಿದೆ. ಅನಿರೀಕ್ಷಿತವಾಗಿ ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಸಂತಸವಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ.

ಕುಂಭ: ಅನವಶ್ಯಕ ಕೆಲಸಗಳಿಗೆ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳಬೇಡಿ. ಸಾಂಸಾರಿಕವಾಗಿ ಸಂಗಾತಿಯ ಅರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಧನಲಾಭವಾಗಲಿದೆ. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಮೀನ: ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ವೃತ್ತಿರಂಗದಲ್ಲಿ ಆಗಾಗ ಕಂಡುಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗುವಿರಿ. ಮನೆ ಸಾಮಾನು ಖರೀದಿಗೆ ಧನವ್ಯಯ ಮಾಡಲಿದ್ದೀರಿ. ಗೃಹಿಣಿಯರಿಗೆ ಮನಸ್ಸಿಗೆ ಖುಷಿಕೊಡುವ ವಿಚಾರ ಕೇಳಿಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments