ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 13 ಜುಲೈ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಬೇಡದ ವಿಚಾರಕ್ಕೆ ತಲೆಕೆಡಿಸಿಕೊಳ್ಳುವುದಕ್ಕಿಂತ ಮೌನವಾಗಿರುವುದೇ ಉತ್ತಮ ಎಂಬುದನ್ನು ಮನಗಾಣುವಿರಿ. ಮೇಲಧಿಕಾರಿಗಳೊಂದಿಗೆ ಸಂಘರ್ಷ ನಡೆಯಬಹುದು. ಕಾಲಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ವೃಷಭ: ನಿಮ್ಮ ಸ್ವ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆಯಿದೆ. ದೂರ ಸಂಚಾರಗಳನ್ನು ಅನಿವಾರ್ಯವಾಗಿ ಮುಂದೂಡಬೇಕಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಫಲ ಕಾಣಲಿದ್ದಾರೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕೆಲಸ ಕಾರ್ಯದಲ್ಲಿ ಇನ್ನೂ ಹೆಚ್ಚಿನ ಶ್ರದ್ಧೆಯಿಂದ ನಿಭಾಯಿಸಬೇಕಾದ ಅವಶ್ಯಕತೆಯಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಹಾತೊರೆಯುವಿರಿ. ಮಹಿಳೆಯರಿಗೆ ಆಕಸ್ಮಿಕ ಧನಲಾಭವಾಗಲಿದೆ. ನಿರುದ್ಯೋಗಿಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ಕೌಟುಂಬಿಕವಾಗಿ ಉತ್ತಮ ಸಮಯ ನಿಮ್ಮದಾಗಲಿದೆ. ಯೋಗ್ಯ ವಯಸ್ಕರು ಕಂಕಣ ಬಲ ಪಡೆಯಲಿದ್ದಾರೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ ಬರಲಿದೆ.

ಸಿಂಹ: ಬರುವಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ಉತ್ತಮ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೀತು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಖರೀದಿ ಪ್ರಕ್ರಿಯೆಗಾಗಿ ಧನವ್ಯಯವಾಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೆಲವೊಂದು ನಿರ್ಧಾರಗಳು ಸಹೋದ್ಯೋಗಿಗಳ ಅಸಮಾಧಾನಕ್ಕೆ ಕಾರಣವಾಗಬಹುದು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಿದರೂ ಜಯ ನಿಮ್ಮದಾಗಲಿದೆ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಬೇಕು.

ತುಲಾ: ಇಷ್ಟು ದಿನದಿಂದ ಕಾಯುತ್ತಿದ್ದ ವಸ್ತು, ಫಲಿತಾಂಶ ನಿಮಗೆ ಸಿಗಲಿದೆ. ಅವಿವಾಹಿತರಿಗೆ ಅಡಚಣೆಗಳಿದ್ದರೂ ವೈವಾಹಿಕ ಭಾಗ್ಯವಿದೆ. ಶುಭ ಮಂಗಲ ಕಾರ್ಯಗಳನ್ನು ಮುಂದೂಡಬೇಕಾಗಬಹುದು.  ಸ್ವಯಂ ವ್ಯವಹಾರ ಮಾಡುವವರಿಗೆ ಉತ್ತಮ ಲಾಭದ ನಿರೀಕ್ಷೆ.

ವೃಶ್ಚಿಕ: ವೃತ್ತಿರಂಗದಲ್ಲಿ ಅಭಿಪ್ರಾಯ ಬೇಧ ಕಲಹಕ್ಕೆ ದಾರಿಯಾದೀತು. ತಾಳ್ಮೆ, ಸಂಯಮದಿಂದ ನಡೆದುಕೊಳ್ಳುವುದು ಮುಖ್ಯ.  ಕೌಟುಂಬಿಕ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಸಲಹೆ ಪಡೆಯಿರಿ. ಮಕ್ಕಳಿಂದ ಸಂತಸ ಸಿಗಲಿದೆ.

ಧನು: ವೃತ್ತಿರಂಗದಲ್ಲಿ ಇನ್ನಷ್ಟು ಹೆಚ್ಚು ಜವಾಬ್ಧಾರಿಯುತವಾಗಿ ಕೆಲಸ ಮಾಡಬೇಕಾಗುತ್ತದೆ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಕುಟುಂಬ ಸದಸ್ಯರಿಂದ ಮೆಚ್ಚುಗೆ ಪಡೆಯಲಿದ್ದೀರಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಮಕರ: ವೃತ್ತಿರಂಗದಲ್ಲಿ ನಿಮಗೆ ಅರ್ಹ ಸ್ಥಾನ ಸಿಗದೇ ಬೇಸರವಾದೀತು. ಎಲ್ಲದಕ್ಕೂ ಕಾಲ ಕೂಡಿಬರಬೇಕು. ಧಾರ್ಮಿಕ ವಿಚಾರಗಳತ್ತ ಆಸಕ್ತಿ ಮೂಡುವುದು. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ನಿಯಂತ್ರಣ ಹೇರಬೇಕಾಗಿದೆ. ಕುಲದೇವರ ಪ್ರಾರ್ಥನೆಯಿಂದ ಒಳಿತಾಗುವುದು.

ಕುಂಭ: ತಾಳ್ಮೆ, ಸಹನೆಯಿಂದ ಮುಂದುವರಿದರೆ ವೃತ್ತಿರಂಗವಿರಲಿ, ಕೌಟುಂಬಿಕ ವಿಚಾರವಿರಲಿ ಮೇಲುಗೈ ನಿಮ್ಮದಾಗಲಿದೆ. ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶೆ ನಡೆಸಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮೀನ: ಮಹಿಳೆಯರಿಗೆ ಚಿನ್ನಾಭರಣ ಖರೀದಿಯಲ್ಲಿ ವಂಚನೆಗೊಳಗಾಗುವ ಭೀತಿಯಿದೆ. ಅಪರಿಚಿತರೊಂದಿಗೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದಿರಿ. ವೃತ್ತಿರಂಗದಲ್ಲಿ ಒಂದು ರೀತಿಯ ನಿರಾಸಕ್ತಿ ಮೂಡಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬಿಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments