Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 21 ಜುಲೈ 2020 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 

ಮೇಷ: ನಿಮ್ಮ ಮನಸ್ಸಿನ ಮಾತುಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳಲಿದ್ದೀರಿ. ಸಮಸ್ಯೆಗಳಿದ್ದರೆ ಅದನ್ನು ಅಲ್ಲಿಯೇ ಪರಿಹರಿಸಿಕೊಳ್ಳುವುದು ಉತ್ತಮ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಚಿಂತಿತ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ.

ವೃಷಭ: ವೃತ್ತಿರಂಗದಲ್ಲಿ ಹೊಸ ಬಗೆಯ ಆಲೋಚನೆಗಳು ಹುಟ್ಟಲಿದ್ದು, ಕಾರ್ಯರೂಪಕ್ಕೆ ತರುವಿರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ವಿರೋಧಿಗಳ ಕಿರಿ ಕಿರಿ ಇರಲಿದೆ. ದೂರ ಪ್ರಯಾಣವನ್ನು ಮುಂದೂಡಬೇಕಾಗುತ್ತದೆ.

ಮಿಥುನ: ಪ್ರತಿಕೂಲ ವ್ಯವಸ್ಥೆಯಲ್ಲಿ ಕೆಲಸ ಮಾಡುವ ಅನಿವಾರ್ಯತೆ ಒದಗಿಬರಲಿದೆ. ವಾಹನಾದಿ ಸಂಚಾರಗಳಲ್ಲಿ ಜಾಗ್ರತೆ ವಹಿಸಬೇಕಾಗುತ್ತದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕರ್ಕಟಕ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬಿಟ್ಟು ನಿಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಹೆಗಲುಗೊಡಬೇಕಾಗುತ್ತದೆ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಸರಕಾರಿ ಕೆಲಸದಲ್ಲಿರುವವರಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಕೋರ್ಟು ಕಚೇರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಅನಿವಾರ್ಯವಾಗಿ ಶುಭ ಮಂಗಲ ಕಾರ್ಯಗಳನ್ನು ಮುಂದೂಡಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮರೆಯದಿರಿ.

ಕನ್ಯಾ: ಆರ್ಥಿಕವಾಗಿ ಸಾಲ ಪಾವತಿ ಬಗ್ಗೆ ಚಿಂತೆಯಾಗಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯತ್ನ ಬಲದಿಂದ ಯಶಸ್ಸು ಸಿಗಲಿದೆ. ಕೃಷಿಕರಿಗೆ ವ್ಯವಹಾರಕ್ಕೆ ಪೂರಕ ವಾತಾವರಣ ಸಿಗಲಿದೆ.

ತುಲಾ: ವೃತ್ತಿರಂಗದಲ್ಲಿ ಪ್ರಾಮಾಣಿಕತೆಗೆ ತಕ್ಕ ಬೆಲೆ ಸಿಗಲಿದೆ. ನಿಮ್ಮ ಕ್ರಿಯಾಶೀಲ ಚಿಂತನೆಗಳಿಂದ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ಪದೇ ಪದೇ ಹಳೆಯ ವಿಚಾರಗಳು ಮನಸ್ಸಿಗೆ ಬಂದು ಬೇಸರವಾಗಬಹುದು. ತಾಳ್ಮೆ, ಸಂಯಮದಿಂದ ನಡೆದುಕೊಳ್ಳಿ.

ವೃಶ್ಚಿಕ: ಕಾರ್ಯರಂಗದಲ್ಲಿ ಶತ್ರುಪೀಡೆ ನಾಶವಾಗಲಿದೆ. ನಿಮ್ಮ ಚಿಂತನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಒದಗಿಬರಲಿವೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ಧನು: ನಿಮ್ಮ ಕೆಲಸ ಕಾರ್ಯಗಳಿಗೆ ಭಂಗ ತರಲು ಸಮಯ ಸಾಧಕರು ಹೊಂಚು ಹಾಕಿ ಕಾಯುತ್ತಿರುತ್ತಾರೆ. ಎಚ್ಚರಿಕೆಯಿಂದ ಹೆಜ್ಜೆಯಿಡಿ. ಹಿರಿಯರ ಮಾತುಗಳನ್ನು ಗೌರವದಿಂದ ಪಾಲಿಸಿದರೆ ಉತ್ತಮ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ.

ಮಕರ: ಪ್ರೀತಿ ಪಾತ್ರರ ಬಗ್ಗೆ ದುಃಖದ ವಿಚಾರ ಕೇಳಿಬರಲಿದೆ. ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಮಯವಿದು. ನಿಮ್ಮದಲ್ಲದ ವಿಚಾರಗಳ ಬಗ್ಗೆ ಅನಗತ್ಯ ಚಿಂತೆ ಮಾಡಬೇಡಿ. ಮಹಿಳೆಯರಿಗೆ ಆಕಸ್ಮಿಕ ಧನಲಾಭವಾಗಲಿದೆ. ಚಿಂತೆ ಬೇಡ.

ಕುಂಭ: ಸಕಾಲದಲ್ಲಿ ಹಣಕಾಸಿನ ಸಹಾಯ ಸಿಗುವುದರಿಂದ ಅಂದುಕೊಂಡ ಕೆಲಸಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಹೆಚ್ಚು ಸಯಮ ಕಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಯೋಗವಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮೀನ: ಹುಚ್ಚು ಆಲೋಚನೆಗಳಿಗೆ ಕಡಿವಾಣ ಹಾಕದೇ ಇದ್ದರೆ ಪರಿಸ್ಥಿತಿ ಕೈ ಮೀರಿ ಹೋಗಬಹುದು. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆರೋಗ್ಯ ಸಮಸ್ಯೆಗಳು ಪರಿಹಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments