ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 28 ಜುಲೈ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ. ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದೇಹಾರೋಗ್ಯದಲ್ಲಿ ಆಗುವ ಸಣ್ಣ ಪುಟ್ಟ ಆಗುವ ಬದಲಾವಣೆಯನ್ನು ಉಪೇಕ್ಷಿಸಬೇಡಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.

ವೃಷಭ: ವ್ಯಾಪಾರಿಗಳು ತಮ್ಮ ವ್ಯವಹಾರಕ್ಕೆ ಪುನಶ್ಚೇತನ ನೀಡಲು ಹೊಸ ಕೆಲಸಗಳನ್ನು ಮಾಡಬೇಕಾಗುತ್ತದೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಕಿರಿ ಕಿರಿಯಾಗಲಿದೆ. ತಾಳ್ಮೆಯಿರಲಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಬಹುದಿನಗಳ ಕನಸು ನನಸು ಮಾಡಲು ಮುಂದಾಗಲಿದ್ದೀರಿ.

ಕರ್ಕಟಕ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದೇವತಾ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಹಿರಿಯರಿಗೆ ನಿಮ್ಮ ಅಗತ್ಯ ಕಂಡುಬರಲಿದೆ. ದುಡುಕು ಮಾತಿನಿಂದ ಸಂಗಾತಿಯ ಮನಸ್ಸಿಗೆ ನೋವುಂಟುಮಾಡಬೇಡಿ.

ಸಿಂಹ: ಯೋಗ್ಯ ವಯಸ್ಕರ ವಿವಾಹ ಮಾತುಕತೆಗಳು ಅರ್ಧಕ್ಕೇ ನಿಲ್ಲಲಿವೆ. ದೂರ ಸಂಚಾರದಿಂದ ಅನಿರೀಕ್ಷಿತವಾಗಿ ಕಾರ್ಯಸಾಧನೆಯಾಗಲಿದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗವಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆ ಕಾಡೀತು.

ಕನ್ಯಾ: ನಿಮ್ಮ ಇಷ್ಟದ ಕೆಲಸಗಳನ್ನು ಮಾಡಲು ಸಮಯ ವಿನಿಯೋಗಿಸಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ತಯಾರಿ ನಡೆಸಲಿದ್ದೀರಿ. ವಾಹನ, ಆಸ್ತಿ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ದುಂದು ವೆಚ್ಚಬೇಡ.

ತುಲಾ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ಕಡಿವಾಣ ಹಾಕಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದಿಂದ ಸಂತೃಪ್ತಿ ಅನುಭವಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಸಾಮಾಜಿಕವಾಗಿ ನಿಮ್ಮ ಕೆಲಸ ಕಾರ್ಯಗಳಿಗೆ ಜನಮನ್ನಣೆ ಸಿಗಲಿದೆ. ಮಾನಸಿಕವಾಗಿ ನೀವೀಗ ಇನ್ನಷ್ಟು ಗಟ್ಟಿಯಾಗಬೇಕಿದೆ. ಸಹಧರ್ಮಿಣಿಯ ಕಷ್ಟಕ್ಕೆ ಹೆಗಲುಕೊಡಬೇಕಾಗುತ್ತದೆ. ಮಕ್ಕಳಿಂದ ಸಂತೋಷ ಸಿಗುವುದು. ಚಿಂತೆ ಬೇಡ.

ಧನು: ಹಿರಿಯರಿಗೆ ತಮ್ಮನ್ನು ಕಡೆಗಣಿಸುತ್ತಾರೆಂಬ ಭಾವನೆ ಕಾಡಲಿದೆ. ಮಿತ್ರರ ಸಹಕಾರದಿಂದ ಮುನ್ನಡೆ ಪಡೆಯಲಿದ್ದೀರಿ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿಬರಲಿವೆ. ನಿರುದ್ಯೋಗಿಗಳಿಗೆ ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು.

ಮಕರ: ಬೇರೆಯವರ ವಿಚಾರಕ್ಕೆ ಅನಗತ್ಯ ತಲೆಕಡಿಸಿಕೊಳ್ಳುವುದು ಬೇಕಿಲ್ಲ. ದೈವಾನುಕೂಲದಿಂದ ನಿಮ್ಮ ಕೆಲಸಗಳು ಸುಗಮವಾಗಿ ನೆರವೇರಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ಹಿತಶತ್ರುಗಳ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ.

ಕುಂಭ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆಯಿದೆ. ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಿರದು. ಸಾಲಗಳು ಮರುಪಾವತಿಯಾಗಲಿವೆ. ಗೃಹ ನಿರ್ಮಾಣ ಕಾರ್ಯಕ್ಕೆ ಕೈ ಹಾಕಬಹುದು.

ಮೀನ: ಹೊಸ ಸ್ಥಳಗಳಿಗೆ ಭೇಟಿಯಾಗುವ ಅವಕಾಶವಿದೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಅವಕಾಶಗಳು ಸಿಗಲಿವೆ. ದಾಯಾದಿ ಕಲಹಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಇಷ್ಟ ಮಿತ್ರರೊಂದಿಗೆ ಮಾತನಾಡುವುದರಿಂದ ನೆಮ್ಮದಿ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments