Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 30 ಜುಲೈ 2020 (09:06 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕ್ರಯ ವಿಕ್ರಯ ವ್ಯವಹಾರಗಳಿಂದ ಲಾಭ ಗಳಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ತಾರತಮ್ಯ ನೀತಿಯಿಂದ ಮನಸ್ಸಿಗೆ ಬೇಸರವಾದೀತು. ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ವೃಷಭ: ನಾನಾ ರೀತಿಯಲ್ಲಿ ಖರ್ಚು ವೆಚ್ಚಗಳು ಕಂಡುಬರಲಿದೆ. ಆರ್ಥಿಕ ವ್ಯವಹಾರಗಳಲ್ಲಿ ಅಪರಿಚಿತರನ್ನು ನಂಬಿ ವ್ಯವಹಾರ ಮಾಡಬೇಡಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ಬೆಲೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದೈಹಿಕವಾಗಿ ನಿಮ್ಮ ಸಾಮರ್ಥ್ಯ ಪರೀಕ್ಷೆ ನಡೆಯಲಿದೆ. ಅಧಿಕ ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕ ಪರಿಸ್ಥಿತಿಯನ್ನು ಸರಿಪಡಿಸಲು ಮುಂದಾಗುವಿರಿ. ಅಡೆತಡೆಗಳಿಂದಲೇ ಕಾರ್ಯ ಸಾಧನೆಯಾಗಲಿದೆ.

ಕರ್ಕಟಕ: ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಆತಂಕವಾಗುವ ಘಟನೆಗಳು ನಡೆದೀತು. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಂಡುಬಂದೀತು. ಕೆಳ ಹಂತದ ನೌಕರರಿಗೆ ಭವಿಷ್ಯದ ಚಿಂತೆ ಕಾಡಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಆರ್ಥಿಕವಾಗಿ ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕಲಿದ್ದೀರಿ. ವೃತ್ತಿರಂಗದಲ್ಲಿ ಮಹಿಳೆಯರಿಗೆ ಮುಂಬಡ್ತಿಯ ಯೋಗವಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದ್ದು, ಸಂತಸವಾಗಲಿದೆ.

ಕನ್ಯಾ: ಅಧಿಕಾರಿ ವರ್ಗದವರಿಗೆ ಪ್ರಮೋಷನ್ ಸಿಗುವ ಸಾಧ‍್ಯತೆಯಿದೆ. ಕಾರ್ಯಸಾಧನೆಗೆ ನಿಮ್ಮ ಸ್ವಾಭಿಮಾನ ಬಿಟ್ಟು ಕೆಲಸ ಮಾಡಬೇಕಾಗುತ್ತದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಗಳಿಸಲಿದ್ದೀರಿ. ಕೃಷಿಕರಿಗೆ ವ್ಯವಹಾರಕ್ಕೆ ಪೂರಕ ವಾತಾವರಣವಿರಲಿದೆ.

ತುಲಾ: ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಕೌಟುಂಬಿಕವಾಗಿ ಬಂಧು ಮಿತ್ರರ ಭೇಟಿ ಮನಸ್ಸಿಗೆ ಸಂತಸ ನೀಡಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಮನಸ್ಸಿಗೆ ತೃಪ್ತಿ, ಸಂತೋಷ ಸಿಗುವುದು.

ವೃಶ್ಚಿಕ: ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ನಿಮ್ಮ ಕೆಲವೊಂದು ನಿರ್ಧಾರಗಳು ಹಿರಿಯರ ಅಸಮಾಧಾನಕ್ಕೆ ಕಾರಣವಾದೀತು. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ.

ಧನು: ಹಿತ ಶತ್ರುಗಳನ್ನು ಅರಿಯದೇ ಮೋಸ ಹೋಗಲಿದ್ದೀರಿ. ಎಚ್ಚರಿಕೆಯಿಂದ ವ್ಯವಹರಿಸಿ. ಮಕ್ಕಳ ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರೀಕ್ಷಿತ ಪ್ರಗತಿ ಸಿಗಲಿದೆ. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ಮಕರ: ಎಂದೋ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯಗತಗೊಳಿಸಲಿದ್ದೀರಿ. ವಾಹನ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ಆರಂಭಿಸಬಹುದು. ಸಂಗಾತಿಯ ಅಭಿಪ್ರಾಯಕ್ಕೆ ಬೆಲೆಕೊಡಿ.

ಕುಂಭ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಿ ನೆಮ್ಮದಿಯಾಗುವುದು. ಅನಿರೀಕ್ಷಿತವಾಗಿ ಅತಿಥಿಗಳ ಆಗಮನ ಮನಸ್ಸಿಗೆ ಸಂತಸವುಂಟು ಮಾಡಲಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಮರುಚಾಲನೆ ನೀಡಲಿದ್ದೀರಿ.

ಮೀನ: ನಿಮ್ಮ ವಿಶ್ವಾಸ ದುರುಪಯೋಗಪಡಿಸಿಕೊಳ್ಳುವವರು ಇರುತ್ತಾರೆ. ಎಚ್ಚರಿಕೆಯಿಂದಿರಿ. ಅನಿರೀಕ್ಷಿತವಾಗಿ ಬಾಕಿ ಬರಬೇಕಿದ್ದ ಹಣ ಪಾವತಿಯಾಗಲಿದ್ದು, ಕಾರ್ಯಸಾಧನೆ ಮಾಡಿಕೊಳ್ಳಲಿದ್ದೀರಿ. ಹಿರಿಯರು ಸಕಾಲದಲ್ಲಿ ನೀಡುವ ಸಲಹೆಗಳು ಉಪಯೋಗಕ್ಕೆ ಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಭವಿಷ್ಯ ಹೀಗಿದೆ