Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಶನಿವಾರ, 1 ಆಗಸ್ಟ್ 2020 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ರೈತರಿಗೆ ಉತ್ಸಾಹದಾಯಕ ವಾತಾವರಣವಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವರು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ.

ವೃಷಭ: ಮನೆಯಲ್ಲಿ ಶುಭಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಹಣಕಾಸಿಗೆ ಕೊರತೆಯಿರದು. ಆದರೆ ಭವಿಷ್ಯದ ಬಗ್ಗೆ ಇಂದೇ ಯೋಜನೆ ರೂಪಿಸುವುದು ಒಳಿತು.

ಮಿಥುನ: ಯಾವುದೇ ವ್ಯಕ್ತಿಯೊಂದಿಗೆ ವ್ಯವಹಾರಿಸುವುದಿದ್ದರೂ ಅವರ ಪೂರ್ವಾಪರ ತಿಳಿದು ಮುನ್ನಡೆಯಿರಿ. ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ. ಮೇಲ್ವರ್ಗದ ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ತಾಳ್ಮೆಯಿಂದ ನಿಭಾಯಿಸಿ.

ಕರ್ಕಟಕ: ಸಾಂಸಾರಿಕವಾಗಿ ನಿಮ್ಮ ಬಹುದಿನಗಳ ಇಷ್ಟಾರ್ಥಗಳು ಪೂರೈಕೆಯಾಗಲಿವೆ. ಆರ್ಥಿಕವಾಗಿ ಸಂಪತ್ತು ವೃದ್ಧಿಗೆ ಹೊಸ ದಾರಿಗಳು ಗೋಚರವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಬೇಕಾಗುತ್ತದೆ. ಕಿರು ಓಡಾಟ ನಡೆಸಲಿದ್ದೀರಿ.

ಸಿಂಹ: ವ್ಯಾಪಾರಿಗಳಿಗೆ ಆದಾಯ ವೃದ್ಧಿಗೆ ಅವಕಾಶಗಳು ಒದಗಿಬರಲಿವೆ. ಕ್ರಿಯಾತ್ಮಕ ಯೋಚನೆಗಳಿಂದ ಮುನ್ನಡೆ ಗಳಿಸಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಕೌಟುಂಬಿಕವಾಗಿ ಅನಿರೀಕ್ಷಿತ ಅತಿಥಿಗಳ ಆಗಮನದಿಂದ ಸಂತಸವಾಗಲಿದೆ.

ಕನ್ಯಾ: ಅಸಾಧ್ಯ ವಿಚಾರಗಳನ್ನೂ ಸಾಧ‍್ಯ ಮಾಡಲು ಹೋಗುವಿರಿ. ನಿಮ್ಮ ಹಠವಾದಿ ಧೋರಣೆ ಕೆಲವೊಮ್ಮೆ ಉಪಯೋಗಕ್ಕೆ ಬರಬಹುದು. ಸಂಗಾತಿಯ ಸಲಹೆಗಳನ್ನು ಪಾಲಿಸಿ. ಹೆಣ್ಣು ಮಕ್ಕಳಿಗೆ ತವರಿನಿಂದ ಉಡುಗೊರೆ ಸಿಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಿಲಿ.

ತುಲಾ: ದಾಯಾದಿ ಕಲಹಗಳು ಅಂತ್ಯವಾಗಲಿದೆ. ಹಿರಿಯರ ದೇಹಾರೋಗ್ಯದ ವಿಚಾರವಾಗಿ ಚಿಂತೆಯಾಗಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ಸಂಚಾರದಿಂದ ಕಾರ್ಯಸಿದ್ಧಿಯಾಗಲಿದೆ. ನಿರುದ್ಯೋಗಿಗಳು ಉದ್ಯೋಗ ಭೇಟೆ ಮುಂದುವರಿಸಬೇಕಾಗುತ್ತದೆ.

ವೃಶ್ಚಿಕ: ಸಂಗಾತಿಯ ದಿಟ್ಟ ನಿಲುವುಗಳು ನಿಮ್ಮ ಕಷ್ಟದ ಸಮಯದಲ್ಲಿ ಉಪಯೋಗಕ್ಕೆ ಬರಲಿದೆ. ಸರಕಾರಿ ಕೆಲಸದವರಿಗೆ ಉದ್ಯೋಗದಲ್ಲಿ ಕಾರ್ಯದೊತ್ತಡ ಹೆಚ್ಚಲಿದೆ. ಹಿತಶತ್ರುಗಳ ಸಂಚು ಬಯಲಿಗೆ ಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಅತಿಯಾದ ಮಾತು ಮನ ಕೆಡಿಸೀತು. ಕೆಲವೊಮ್ಮೆ ನಿಮ್ಮ ನಿರ್ಧಾರಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಕಾರಣವಾದೀತು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ಹೂಡಿಕೆ ವ್ಯವಹಾರದಿಂದ ಲಾಭ ಕಂಡುಕೊಳ್ಳಬಹುದು.

ಮಕರ: ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಉಲ್ಲಾಸವಾಗಲಿದೆ. ಹೊಸ ಬಗೆಯ ಆಲೋಚನೆಗಳು ವೃತ್ತಿರಂಗದಲ್ಲಿ ನಿಮಗೆ ಯಶಸ್ಸು ತಂದುಕೊಡಬಹುದು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ.

ಕುಂಭ: ನಿಮ್ಮ ಮಾತಿನಿಂದ ಆತ್ಮೀಯರ ವಿರೋಧ ಕಟ್ಟಿಕೊಳ್ಳಬೇಕಾಗಬಹುದು. ನಿಮ್ಮ ಮನಸ್ಸಿಗೆ ಸರಿ ಎನಿಸಿದ್ದನ್ನೇ ಮಾಡಲಿದ್ದೀರಿ. ಮಹಿಳೆಯರಿಗೆ ಮೇಲ್ವರ್ಗದ ಅಧಿಕಾರಿಗಳಿಂದ ಕಿರಿ ಕಿರಿ ತಪ್ಪದು. ಮಾನಸಿಕ ನೆಮ್ಮದಿಗಾಗಿ ಕುಲದೇವರ ಪ್ರಾರ್ಥಿಸಿ.

ಮೀನ: ಇಷ್ಟ ಮಿತ್ರರ ಭೇಟಿ, ಭೋಜನ ಯೋಗವಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವಾಹನ ಸಂಚಾರದಲ್ಲಿ ಅತೀವ ಎಚ್ಚರಿಕೆ ವಹಿಸಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಗಮನಹರಿಸಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia Hindi

ಮುಂದಿನ ಸುದ್ದಿ

ಮದುವೆಯಾದ ಮಹಿಳೆಯರು ಈ ಒಡವೆಗಳನ್ನು ಎಂದಿಗೂ ಧರಿಸಬೇಡಿ