ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 3 ಆಗಸ್ಟ್ 2020 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರಿ ವರ್ಗದವರಿಗೆ ಸಾಲ ಬಾಧೆ ಕಾಡಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕಾಡುವಿರಿ. ದೇಹಾರೋಗ್ಯದಲ್ಲಿ ಏರುಪೇರಾಗಲಿದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯವಿದೆ.

ವೃಷಭ: ಯಶಸ್ಸು ಬೇಕಾದರೆ ಪರಿಶ್ರಮವೂ ಅಗತ್ಯ ಎನ್ನುವುದನ್ನು ಮನಗಾಣುವಿರಿ. ಮಾನಸಿಕವಾಗಿ ಆಲಸ್ಯತನ ಬಿಟ್ಟು ಕೆಲಸ ಮಾಡಿ. ಕೃಷಿಕರಿಗೆ ಯಂತ್ರೋಪಕರಣಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಅನಿರೀಕ್ಷಿತವಾಗಿ ಸಂಚಾರ ಮಾಡಬೇಕಾಗಿಬರಲಿದ್ದು, ಖರ್ಚುವೆಚ್ಚಗಳಾಗಲಿವೆ. ಬಂಧು ಬಳಗದವರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗುವುದು. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು. ಕಿರು ಓಡಾಟ ನಡೆಸಬೇಕಾಗುತ್ತದೆ.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯದ ಸೂಚನೆ ಸಿಗಲಿದೆ. ಸಹೋದರಿಯ ವಿವಾಹ ಮಾತುಕತೆಗಳು ಫಲಪ್ರದವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ದೂರವಾಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ.

ಸಿಂಹ: ಕೆಟ್ಟ ಸ್ನೇಹ ಸಂಘದಿಂದ ದೂರವಿರುವುದೇ ಒಳ್ಳೆಯದು. ಸಂಗಾತಿಯ ಹಿತ ವಚನಗಳು ಉಪಯೋಗಕ್ಕೆ ಬರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗುವುದು.

ಕನ್ಯಾ: ವೃತ್ತಿರಂಗದಲ್ಲಿ ಕಠಿಣ ಪರಿಸ್ಥಿತಿ ಎದುರಿಸುವ ಸಂದರ್ಭ ಒದಗಿಬರುವುದು. ನಿರ್ಧಾರ ಕೈಗೊಳ್ಳುವಾಗ ಹಿರಿಯರೊಂದಿಗೆ ಪರಾಮರ್ಶಿಸಿ ಮುನ್ನಡೆಯಿರಿ. ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಅನಗತ್ಯ ಚಿಂತೆ ಬೇಡ.

ತುಲಾ: ನಿಮ್ಮ ಸ್ನೇಹ ಸಂಗವೇ ನಿಮ್ಮ ಭವಿಷ್ಯ ನಿರ್ಧಾರ ಮಾಡಲಿದೆ. ಆರ್ಥಿಕವಾಗಿ ಅನೇಕ ಖರ್ಚು ವೆಚ್ಚಗಳು ಎದುರಾಗಲಿವೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಕಚೇರಿ ಕೆಲಸಗಳಲ್ಲಿ ಕಾರ್ಯದೊತ್ತಡ ಹೆಚ್ಚಲಿದೆ.

ವೃಶ್ಚಿಕ: ಆದಾಯ ವೃದ್ಧಿಗೆ ನಾನಾ ಮಾರ್ಗಗಳು ಗೋಚರವಾಗಲಿದೆ. ಮನೆ ರಿಪೇರಿ, ವಾಹನ ರಿಪೇರಿ ಇತ್ಯಾದಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಗಮನಕೊಡಬೇಕಾಗುತ್ತದೆ. ಸಕಾಲದಲ್ಲಿ ಧನಾಗಮನವಾಗುವುದರಿಂದ ಅಂದುಕೊಂಡ ಕೆಲಸ ಸಾಧಿಸುವಿರಿ.

ಧನು: ಇಷ್ಟವಿಲ್ಲದ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದಕ್ಕಿಂತ ಕಷ್ಟವಾದರೂ ಮನಸ್ಸಿಗೆ ಹಿಡಿಸಿದ ಕೆಲಸ ಮಾಡುವುದು ಉತ್ತಮ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕು. ವಿವಾಹ ಮಾತುಕತೆಗಳನ್ನು ಮುಂದೂಡುವುದು ಉತ್ತಮ.

ಮಕರ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಲಭ್ಯವಾಗಲಿದೆ. ಮನೆಯಲ್ಲಿ ಸಣ್ಣ ಪುಟ್ಟ ವಿಚಾರಗಳಿಗೆ ಭಿನ್ನಾಭಿಪ್ರಾಯಗಳುಂಟಾಗಬಹುದು. ನಿಮ್ಮ ಮಾತಿನ ಮೇಲೆ ನಿಗಾ ಇಡುವುದು ಉತ್ತಮ. ಶೈಕ್ಷಣಿಕ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ.

ಕುಂಭ: ಬಹುದಿನಗಳ ಕನಸು ಈಡೇರಿಸಿಕೊಳ್ಳಲು ಮುಂದಾಗುವಿರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ.

ಮೀನ: ವೃತ್ತಿರಂಗದಲ್ಲಿ ಸ್ಥಾನಪಲ್ಲಟ ಯೋಗವಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಯೋಗವಿದೆ. ದೇವತಾ ಕಾರ್ಯಕ್ಕೆ ಅಡಚಣೆಗಳು ಉಂಟಾಗಬಹುದು. ನಿರುದ್ಯೋಗಿಗಳು ಬಂದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಮುಂದಿನ ಸುದ್ದಿ
Show comments