ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 9 ಆಗಸ್ಟ್ 2020 (09:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕ್ಷುಲ್ಲುಕ ವಿಚಾರಗಳಿಗೆ ಆತ್ಮೀಯರೊಂದಿಗೆ ಸಂಘರ್ಷಕ್ಕಿಳಿಯಬೇಡಿ. ಇದರಿಂದ ಸಂಬಂಧಗಳು ಹಾಳಾಗಬಹುದು. ದೃಢ ನಿರ್ಧಾರ ಕೈಗೊಳ್ಳುವ ಮನಸ್ಸು ಮಾಡಬೇಕಿದೆ. ಅವಿವಾಹಿತರು ಯೋಗ್ಯ ಸಂಬಂಧಕ್ಕಾಗಿ ಹುಡುಕಾಟ ನಡೆಸಬೇಕಾಗುತ್ತದೆ.

ವೃಷಭ: ಸಾಮಾಜಿಕವಾಗಿ ಬಯಸಿ ಸ್ಥಾನ ಮಾನ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿ ಸುಧಾರಣೆಗೆ ಮುಂದಾಗಲಿದ್ದೀರಿ.ಸಂಗಾತಿಯ ಕನಸುಗಳನ್ನು ನನಸು ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಸತ್ವ ಪರೀಕ್ಷೆಯ ಸಮಯವಿದು.

ಮಿಥುನ: ಮನಸ್ಸಿನಲ್ಲಿ ಅಂದುಕೊಂಡಿದ್ದು ಒಂದು, ಆಗುವುದು ಇನ್ನೊಂದು ಎನ್ನುವ ಪರಿಸ್ಥಿತಿ ನಿಮ್ಮದಾಗಲಿದೆ. ಅವಿವಾಹಿತರಿಗೆ ಏಕಾಂಗಿತನದ ಭಾವನೆಯುಂಟಾಗಬಹುದು. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ನಿಮ್ಮ ಬಾಹ್ಯ ರೂಪಕ್ಕೆ ಬೆಲೆ ಕೊಡುವವರ ಬಗ್ಗೆ ಚಿಂತೆ ಮಾಡುವುದನ್ನು ಬಿಡಿ. ಹಿತಶತ್ರುಗಳಿಂದ ದೂರವಿರುವುದೇ ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಪ್ರಯತ್ನಿಸಲಿದ್ದೀರಿ.

ಸಿಂಹ: ಗೃಹ ನಿರ್ಮಾಣ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಆರ್ಥಿಕವಾಗಿ ಬಾಕಿ ಹಣ ಸಂದಾಯವಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ವಿರೋಧ ಕಟ್ಟಿಕೊಳ್ಳಬೇಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಸಾಂಸಾರಿಕವಾಗಿ ಭಾವುಕರಾಗುವ ಕ್ಷಣಗಳು ಎದುರಾಗಬಹುದು. ಮಹಿಳೆಯರಿಗೆ ತವರಿನಿಂದ ಅನಿರೀಕ್ಷಿತ ಉಡುಗೊರೆ ಸಿಗಲಿದೆ. ಬಹಳ ದಿನಗಳ ನಂತರ ಹಳೆಯ ಮಿತ್ರನನ್ನು ಭೇಟಿಯಾದ ಸಂತಸವಾಗುವುದು. ಖರ್ಚಿನ ಬಗ್ಗೆ ಮಿತಿಯಿರಲಿ.

ತುಲಾ: ದುಡುಕಿ ನಿರ್ಧಾರ ತೆಗೆದುಕೊಂಡು ಅಪಾಯಕ್ಕೆ ಸಿಲುಕಲಿದ್ದೀರಿ. ಯಾವುದೇ ವಿಚಾರಗಳನ್ನು ಸಂಗಾತಿ ಜತೆಗೆ ಹಂಚಿಕೊಳ್ಳಿ. ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಎದುರಾಗಲಿದೆ. ಯಾವುದೇ ವಿಚಾರವನ್ನೂ ಮನಸ್ಸಿಗೆ ಹಚ್ಚಿಕೊಳ್ಳಬೇಡಿ.

ವೃಶ್ಚಿಕ: ಹೊಂದಾಣಿಕೆಯಿಂದ ನಡೆದುಕೊಳ್ಳುವುದರಿಂದ ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳು ದೂರವಾಗಬಹುದು. ಹಿರಿಯರ ಅಭಿಪ್ರಾಯಗಳಿಗೆ ಬೆಲೆ ಕೊಡಿ. ಮಕ್ಕಳ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಕುಟುಂಬಸ್ಥರಿಂದ ನಿಮ್ಮ ಬಗ್ಗೆ ಮೆಚ್ಚುಗೆಯ ಮಾತು ಕೇಳಿಬರಲಿದೆ. ಸಾಮಾಜಿಕ ಕೆಲಸಗಳಲ್ಲಿ ಭಾಗಿಯಾಗಲಿದ್ದೀರಿ. ವೃತ್ತಿರಂಗದಲ್ಲಿ ಹೊಸ ದಾರಿಗಳು ಲಭ್ಯವಾಗಲಿದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಕರ: ಬೇರೆಯವರ ಬಗ್ಗೆ ಪೂರ್ವಾಗ್ರಹ ಪೀಡಿತ ಅಭಿಪ್ರಾಯಕ್ಕೆ ಬರುವುದು ಸರಿಯಲ್ಲ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ.ಸಾಂಸಾರಿಕವಾಗಿ ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಕುಲದೇವರ ಪ್ರಾರ್ಥನೆಯಿಂದ ಶುಭವಾಗುವುದು.

ಕುಂಭ: ಹಲವು ವಿಚಾರದಲ್ಲಿ ನಿಮ್ಮ ಸಂದಿಗ್ಧ ಮನೋಭಾವದಿಂದ ಉತ್ತಮ ಅವಕಾಶ ಕಳೆದುಕೊಳ್ಳುವಿರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದ್ದು ಮನಸ್ಸಿಗೆ ಸಂತಸವಾಗಲಿದೆ.

ಮೀನ: ಅತಿಯಾದ ವ್ಯಾಮೋಹದಿಂದ ಪಡೆದುಕೊಂಡಿದ್ದನ್ನೂ ಕಳೆದುಕೊಳ್ಳುವ ಪರಿಸ್ಥಿತಿ ಎದುರಾದೀತು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಗೃಹಿಣಿಯರಿಗೆ ದೈನಂದಿನ ಕೆಲಸದಲ್ಲಿ ನಿರುತ್ಸಾಹ ಮೂಡಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments