ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 11 ಆಗಸ್ಟ್ 2020 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೀರ್ಘ ಕಾಲದಿಂದ ಮನಸ್ಸಿನಲ್ಲಿ ಅಂದುಕೊಂಡಿದ್ದ ಇಚ್ಛೆ ಪೂರ್ತಿಯಾಗಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಸಹೋದ್ಯೋಗಿಗಳ ಸಹಕಾರ ಸಿಗದೇ ನಿರಾಸೆಯಾಗಬಹುದು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಯಿರದು. ಆದರೆ ದುಂದುವೆಚ್ಚ ಬೇಡ.

ಮಿಥುನ: ವಾಹನ, ಭೂಮಿ ಇತ್ಯಾದಿ ಸುಖ ಸೌಕರ್ಯ ಖರೀದಿಗೆ ಇದು ಸಕಾಲ. ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲ್ವರ್ಗದ ಅಧಿಕಾರಿಗಳಿಂದ ಒತ್ತಡವಿರಲಿದೆ. ತಾಳ್ಮೆಯಿಂದ ನಿಭಾಯಿಸಿ.

ಕರ್ಕಟಕ: ನೆರೆಹೊರೆಯವರು ನಿಮ್ಮ ವೈಯಕ್ತಿಕ ವಿಚಾರದಲ್ಲಿ ಮಧ್ಯಪ್ರವೇಶಿಸಲು ಯತ್ನಿಸುತ್ತಾರೆ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಆರ್ಥಿಕವಾಗಿ ಸಾಲ ಮರುಪಾವತಿಗೆ ಮುಂದಾಗಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ನಿಮ್ಮ ಬದುಕಿನಲ್ಲಿ ನೀವು ಅಂದುಕೊಂಡಿದ್ದು ನೆರವೇರುವ ದಿನ ಸದ್ಯದಲ್ಲೇ ಇದೆ. ಇದರ ಉಪಯೋಗ ಮಾಡಿಕೊಳ್ಳಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ.

ಕನ್ಯಾ: ವೃತ್ತಿರಂಗದಲ್ಲಿ ಒತ್ತಡ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಬೇರೆ ಬೇರೆ ಮಾರ್ಗಗಳ ಬಗ್ಗೆ ಯೋಚನೆ ಮಾಡುವಿರಿ. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರಬೇಡಿ. ಸಂಗಾತಿಯ ಜತೆಗೆ ಸುಮಧುರ ಕ್ಷಣ ಕಳೆಯಲಿದ್ದೀರಿ.

ತುಲಾ: ನಿಮ್ಮ ಮಾತಿನ ಮೇಲೆ ನಿಗಾ ವಹಿಸದೇ ಇದ್ದರೆ ಸಂಬಂಧಗಳು ಹಾಳಾಗಬಹುದು. ವೃತ್ತಿರಂಗದಲ್ಲಿ ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ವೃಶ್ಚಿಕ: ನಿಮ್ಮನ್ನು ಅಸಡ್ಡೆ ಮಾಡುವವರು ಅಚ್ಚರಿಪಡುವಂತೆ ಬೆಳವಣಿಗೆ ಹೊಂದಲಿದ್ದೀರಿ. ಚಾಡಿ ಮಾತುಗಳನ್ನು ಅಲಕ್ಷಿಸುವುದು ಉತ್ತಮ. ಸಂಗಾತಿಗೆ ಉಡುಗೊರೆ ನೀಡುವ ಮೂಲಕ ಸಂತೋಷ ನೀಡಲಿದ್ದೀರಿ. ಶೀಘ್ರದಲ್ಲೇ ಸಂತಾನ ಭಾಗ್ಯವಿದೆ.

ಧನು: ಎಷ್ಟೇ ಪ್ರಯತ್ನಪಟ್ಟರೂ ಆರ್ಥಿಕ ಸಮಸ್ಯೆಗಳು ಬಂದೇ ಬರಲಿವೆ. ಇದರಿಂದ ಅಂದುಕೊಂಡ ಕೆಲಸ ಕಾರ್ಯ ಪೂರ್ತಿ ಮಾಡಲು ಸಾಧ‍್ಯವಾಗದು. ಸಾಂಸಾರಿಕವಾಗಿ ಸಾಮರಸ್ಯ ಕಾಪಾಡುವುದು ಮುಖ್ಯ. ಸಣ್ಣ ವಿಚಾರಗಳನ್ನು ದೊಡ್ಡದು ಮಾಡಲು ಹೋಗಬೇಡಿ.

ಮಕರ: ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಹಿರಿಯರೊಡನೆ ಚರ್ಚಿಸಿ ಮುಂದುವರಿಯಿರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು.

ಕುಂಭ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ಪರ ಊರಿಗೆ ಸಂಚಾರ ಮಾಡಬೇಕಾಗುತ್ತದೆ. ಕೆಳ ಹಂತದ ನೌಕರರಿಗೆ ಕೊಂಚ ಸಮಾಧಾನಕರ ಸುದ್ದಿ ಸಿಗಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಂದಾಗಿ ಕೆಲಸದಲ್ಲಿ ನಿರುತ್ಸಾಹ ಕಂಡುಬರಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಸ್ವಲ್ಪದರಲ್ಲೇ ಕೈ ತಪ್ಪಿಹೋಗಲಿದೆ. ನಿಮ್ಮ ಕ್ರಿಯಾಶೀಲತೆಯನ್ನು ಬಳಸಿಕೊಳ್ಳುವ ಕಾಲವಿದು. ದಿನದಂತ್ಯಕ್ಕೆ ನೆಮ್ಮದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ಮುಂದಿನ ಸುದ್ದಿ
Show comments