Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 14 ಆಗಸ್ಟ್ 2020 (08:41 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ವಿಚಾರವಂತರ ಸಂಗದಿಂದ ಹಲವು ಹೊಸ ಯೋಚನೆಗಳು ಹುಟ್ಟಿಕೊಳ್ಳಲಿದೆ. ನಿಮ್ಮ ವೃತ್ತಿರಂಗದಲ್ಲಿ ಉನ್ನತ ಹಂತಕ್ಕೇರಲು ಹಲವು ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ. ಹಿರಿಯರ ಮಾತಿಗೆ ಕಿವಿಗೊಡಿ.

ವೃಷಭ: ಕೆಲಸದಲ್ಲಿರುವ ನಿಮ್ಮ ಶ್ರದ್ಧೆ, ಭಕ್ತಿಗಳೇ ನಿಮ್ಮನ್ನು ಕಾಪಾಡಲಿದೆ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ, ಅಪವಾದದ ಭೀತಿಯಿದೆ. ಕಾರ್ಮಿಕ ವರ್ಗದವರಿಗೆ ಉನ್ನತ ಸ್ಥಾನಕ್ಕೇರುವ ಅವಕಾಶಗಳು ಸಿಗಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಿಥುನ: ಸಹೋದ್ಯೋಗಿಗಳ ನೆರವಿನಿಂದ ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮನೆಯಲ್ಲಿ ದೇವತಾ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ.

ಕರ್ಕಟಕ: ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ವಾಹನ ಸವಾರರಿಗೆ ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಋಣ ಬಾಧೆಯಿಂದ ಮುಕ್ತರಾಗಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ಹಿರಿಯರಿಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು. ವ್ಯಾಪಾರ, ವ್ಯವಹಾರದಲ್ಲಿ ಅಪರಿಚಿತರನ್ನು ನಂಬಲು ಹೋದರೆ ನಷ್ಟವಾದೀತು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಭಾವುಕರಾಗಿ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ.

ಕನ್ಯಾ: ಕಾರ್ಯರಂಗದಲ್ಲಿ ಅಭಿವೃದ್ಧಿದಾಯಕ ವಾತಾವರಣವಿರಲಿದೆ. ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿದ್ದೀರಿ. ಆದರೆ ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲಿದ್ದೀರಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಮನಸ್ಸು ಮಾಡಲಿದ್ದಾರೆ.

ತುಲಾ: ವಾಹನಾದಿ ಸೌಕರ್ಯಗಳಿಗೆ ಮಾಡಿದ್ದ ಸಾಲ ಮರುಪಾವತಿ ಚಿಂತೆ ಕಾಡಲಿದೆ. ಕೋರ್ಟು ಕಚೇರಿ ಕೆಲಸಗಳು ವಿಳಂಬ ಗತಿಯಲ್ಲಿ ಸಾಗೀತು. ದುಡುಕು ಬುದ್ಧಿಯಿಂದ ನಿರ್ಧಾರ ಕೈಗೊಳ್ಳಲು ಹೋದರೆ ಕೆಲಸ ಕೆಟ್ಟೀತು. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಕೌಟುಂಬಿಕವಾಗಿ ನೀವು ಇಡುವ ಪ್ರತಿ ಹೆಜ್ಜೆಯೂ ಎಚ್ಚರಿಕೆಯಿಂದಿರಬೇಕು. ಮಾತು, ವರ್ತನೆ ಮೇಲೆ ಸಂಯಮವಿರಲಿ. ನೂತನ ದಂಪತಿಗಳಿಗೆ ಶೀಘ‍್ರ ಸಂತಾನ ಫಲ ಯೋಗವಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿರಲಿ.

ಧನು: ನಿಮ್ಮ ಕೆಲಸವಾಗಬೇಕಾದರೆ ಸ್ವಾಭಿಮಾನ ಬದಿಗೊತ್ತಿ ಕೆಲಸ ಮಾಡಬೇಕಾಗುತ್ತದೆ. ಮೇಲ್ವರ್ಗದ ಅಧಿಕಾರಿಗಳ ಅಸಮಾಧಾನಕ್ಕೆ ಗುರಿಯಾಗದಂತೆ ಎಚ್ಚರಿಕೆ ವಹಿಸಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಕಿರು ಓಡಾಟ ನಡೆಸುವಿರಿ.

ಮಕರ: ನೀವು ಅಂದುಕೊಂಡ ಕೆಲಸಗಳನ್ನು ಒಂದೊಂದೇ ನಿಧಾನವಾಗಿ ನಡೆಯಲಿದೆ. ತಾಳ್ಮೆಯಿರಲಿ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಹಿರಿಯರು ನಿಮ್ಮ ಕೆಲಸಗಳಿಗೆ ಪ್ರೋತ್ಸಾಹ ಕೊಡಲಿದ್ದಾರೆ. ಅನಗತ್ಯ ಚಿಂತೆ ಬೇಡ.

ಕುಂಭ: ನೀವು ಅಂದುಕೊಂಡಂತೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನವಾಗಲಿದೆ. ಋಣಾತ್ಮಕ ಚಿಂತೆಗಳನ್ನು ಕೈ ಬಿಡಿ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಹೊಂದಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಬಹುದು. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆಯುಂಟಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments