ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 15 ಆಗಸ್ಟ್ 2020 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಮನಕ್ಲೇಶಗಳು ಹಲವು ಕಂಡುಬರಲಿದೆ. ಸಂಗಾತಿ ನಿಮ್ಮ ಮಾತಿಗೆ ಕಿವಿಗೊಡುತ್ತಿಲ್ಲ ಎಂಬ ಬೇಸರ ಕಾಡಬಹುದು. ಆದರೆ ಅನಗತ್ಯ ಮಾತು, ವರ್ತನೆಗೆ ಕಡಿವಾಣ ಹಾಕುವುದು ಉತ್ತಮ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಷಭ: ಬಿಡುವಿನ ವೇಳೆಯ ಸದುಪಯೋಗಪಡಿಸಿಕೊಳ್ಳಲಿದ್ದೀರಿ. ರಾಜಕೀಯ ವರ್ಗದವರಿಗೆ ಮುನ್ನಡೆಯ ಯೋಗವಿದೆ. ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳ ಪರಿಹಾರಕ್ಕೆ ಯೋಜನೆ ರೂಪಿಸಲಿದ್ದೀರಿ. ನೂತನ ದಂಪತಿಗಳಿಗೆ ಸದ್ಯದಲ್ಲೇ ಸಂತಾನ ಫಲ ಯೋಗವಿದೆ.

ಮಿಥುನ: ಮಾನಸಿಕವಾಗಿ ಅನಗತ್ಯ ಚಿಂತನೆಗಳನ್ನು ಬಿಟ್ಟು ಉತ್ಸಾಹದಿಂದ ಕೆಲಸ ಕಾರ್ಯದಲ್ಲಿ ತೊಡಗಿಸಿಕೊಳ್ಳಿ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಯೋಗವಿದೆ. ಕಾರ್ಯಕ್ಷೇತ್ರದಲ್ಲಿ ಸಹನೆ ಅತೀ ಅಗತ್ಯ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಗಮನಹರಿಸಿದರೆ ಉತ್ತಮ.

ಕರ್ಕಟಕ: ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವುದರಿಂದ ಮಾನಸಿಕ ಒತ್ತಡಗಳನ್ನು ಕಡಿಮೆ ಮಾಡಿಕೊಳ‍್ಳಲಿದ್ದೀರಿ. ಕೆಳ ಹಂತದ ನೌಕರರಿಗೆ ಉದ್ಯೋಗದ ಚಿಂತೆ ತಪ್ಪದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಉದ್ಯೋಗಸ್ಥ ಮಹಿಳೆಯರಿಗೆ ಉತ್ತಮ ಅವಕಾಶಗಳು ಒದಗಿಬರಲಿವೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಅಂದುಕೊಂಡ ಕೆಲಸಗಳನ್ನು ಸುಗಮವಾಗಿ ನೆರವೇರಿಸುವಿರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಕನ್ಯಾ: ನಿಮ್ಮ ಸ್ವ ಪ್ರಯತ್ನಬಲದಿಂದಲೇ ಕೈ ಹಿಡಿದ ಕೆಲಸಗಳಲ್ಲಿ ಯಶಸ್ಸು ಸಾಧಿಸುವಿರಿ. ಅಪರಿಚಿತರಂತೆ ಬಂದವರಿಂದ ಸಹಾಯವಾಗಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಚಿಂತೆಯಾಗಬಹುದು. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.

ತುಲಾ: ದೂರ ಸಂಚಾರ ಕೊನೆಯ ಕ್ಷಣದಲ್ಲಿ ರದ್ದಾಗಲಿದೆ. ಸಾಂಸಾರಿಕವಾಗಿ ಸಂಬಂಧ ಸುಧಾರಣೆಗೆ ಮಾರ್ಗಗಳು ಗೋಚರವಾಗಲಿದೆ. ಸಂಗಾತಿಯೊಂದಿಗೆ ನಿಮ್ಮ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಕುಲದೇವರ ಪ್ರಾರ್ಥನೆಯಿಂದ ಶುಭವಾಗುವುದು.

ವೃಶ್ಚಿಕ: ಉದ್ಯೋಗಾರ್ಥಿಗಳಿಗೆ ಉತ್ತಮ ಅವಕಾಶಕ್ಕಾಗಿ ಕೆಲವು ದಿನ ಕಾಯುವುದು ಅನಿವಾರ್ಯವಾಗಲಿದೆ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಕೃಷಿಕರಿಗೆ ಕೆಲಸ ಕಾರ್ಯಗಳಲ್ಲಿ ಹಿನ್ನಡೆಯ ಭೀತಿ ಎದುರಾಗಲಿದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ಧನು: ಸಾರ್ವಜನಿಕವಾಗಿ ಜನಮನ್ನಣೆ ಗಳಿಸಲಿದ್ದೀರಿ. ನೀವು ಅಂದುಕೊಂಡ ಕೆಲಸಗಳು ಅಂದುಕೊಂಡ ಸಮಯದಲ್ಲೇ ಪೂರ್ತಿ ಮಾಡಿ ಪ್ರಶಂಸೆಗೊಳಗಾಗಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ.

ಮಕರ: ನಾನಾ ರೀತಿಯ ಖರ್ಚು ವೆಚ್ಚಗಳು ಕಂಡುಬರಲಿದ್ದು, ಸಕಾಲದಲ್ಲಿ ಧನಾಗಮನವಾಗುವುದರಿಂದ ತೊಂದರೆ ತಪ್ಪುವುದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ.

ಕುಂಭ: ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಮಾಡಿದರೆ ಮುಂದೆ ತೊಂದರೆಯಾದೀತು. ಕುಲದೇವರ ಪ್ರಾರ್ಥನೆಯಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುವಿರಿ. ಎಚ್ಚರಿಕೆ ಅಗತ್ಯ.

ಮೀನ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ವ್ಯಾಪಾರೀ ವರ್ಗದವರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ಕೂಡಿಬರಲಿದೆ. ಕಾರ್ಯದತ್ತೊಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments