ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 18 ಆಗಸ್ಟ್ 2020 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಹೋದ್ಯೋಗಿಗಳ ನೆರವಿನಿಂದ ಕಷ್ಟಗಳಿಂದ ಪಾರಾಗಲಿದ್ದೀರಿ. ಕೃಷಿಕರಿಗೆ ಕೊಂಚ ಚೇತರಿಕೆಯ ದಿನಗಳಿವು. ವಿದ್ಯಾರ್ಥಿಗಳಿಗೆ ಶೈಕ್ಷಣಿಕರ ರಂಗದಲ್ಲಿ ಪ್ರಗತಿ ಕಂಡುಬರಲಿದೆ. ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದ್ದೀರಿ. ಖರ್ಚುವೆಚ್ಚಗಳಾದೀತು.

ವೃಷಭ: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ರಾಜಕೀಯ ರಂಗದವರಿಗೆ ಸ್ತ್ರೀಯರಿಂದ ತೊಂದರೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ.

ಮಿಥುನ: ದೈವಾನುಗ್ರಹದಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ದಾಂಪತ್ಯ ಸುಖ ನಿಮ್ಮದಾಗಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ.

ಕರ್ಕಟಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗದ ಚಿಂತೆಯಾಗಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಯೋಗ್ಯ ವಯಸ್ಕರು ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳಿತು.

ಸಿಂಹ: ಕೃಷಿ ಕಾರ್ಯದಲ್ಲಿ ಅಡೆತಡೆಗಳಿದ್ದರೂ ಅಂತಿಮ ಯಶಸ್ಸು ನಿಮ್ಮದಾಗಲಿದೆ. ವ್ಯಾಪಾರಿಗಳಿಗೆ ಸಣ್ಣ ಮಟ್ಟಿಗಿನ ಲಾಭವಾಗಲಿದೆ. ವಾಹನ ಖರೀದಿ ಯೋಗವಿದೆ. ಆಕಸ್ಮಿಕವಾಗಿ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಪಡೆಯಲಿದ್ದೀರಿ. ನಿಮ್ಮ ಕ್ರಿಯಾತ್ಮಕ ಆಲೋಚನೆಗಳಿಗೆ ತಕ್ಕ ಮನ್ನಣೆ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಚಿನ್ನ-ಬೆಳ್ಳಿ ಖರೀದಿಯಿಂದ ಲಾಭವಾಗಲಿದೆ. ದಿನದಂತ್ಯಕ್ಕೆ ಶುಭವಾಗುವುದು.

ತುಲಾ: ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ನೂತನ ದಂಪತಿಗಳಿಗೆ ಶೀಘ್ರ ಸಂತಾನ ಫಲ ಯೋಗವಿದೆ. ದಾಯಾದಿ ಕಲಹಗಳಿಗೆ ಹಿರಿಯರ ಮಧ‍್ಯಸ್ಥಿಕೆಯಿಂದ ಪರಿಹಾರ ಕಂಡುಕೊಳ್ಳುವಿರಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ವೃಶ್ಚಿಕ: ಬಂಧು ವರ್ಗದವರ ಚಾಡಿ ಮಾತುಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ನಿಮ್ಮ ಮನಸ್ಸಿಗೆ ಖುಷಿ ಕೊಡುವ ಕೆಲಸದಲ್ಲಿ ಮುಂದುವರಿಯಿರಿ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ, ಮರಳಿಬಾರದು. ದೇವತಾ ಪ್ರಾರ್ಥನೆ ಮರೆಯದಿರಿ.

ಧನು: ಸಂಗಾತಿಯ ಮನೋಕಾಮನೆಗಳನ್ನು ಪೂರೈಸಲು ಪ್ರಯತ್ನಿಸಲಿದ್ದೀರಿ. ವಾಹನ ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು.

ಮಕರ: ನೌಕರ ವರ್ಗದವರಿಗೆ ಹಲವು ಅಡ್ಡಿ ಆತಂಕಗಳು ಕಂಡುಬಂದೀತು. ಮೇಲಧಿಕಾರಿಗಳ ಕಿರಿ ಕಿರಿ ಅಸಹನೀಯವೆನಿಸೀತು. ತಾಳ್ಮೆ, ಸಂಯಮ ಅಗತ್ಯ.ಆರ್ಥಿಕವಾಗಿ ಸರಿಯಾದ ಯೋಜನೆ ರೂಪಿಸಿದರೆ ಮುಂದೆ ತೊಂದರೆಯಾಗದು.

ಕುಂಭ: ಹಣ ವ್ಯವಹಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ರಾಜಕೀಯವಾಗಿ ಉನ್ನತ ಸ್ಥಾನಮಾನಕ್ಕೇರುವ ಯೋಗವಿದೆ. ಕೃಷಿಕರಿಗೆ ವ್ಯವಹಾರದಲ್ಲಿ ನೆಮ್ಮದಿ ಸಿಗಲಿದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ಮಿತ್ರರ ಭೇಟಿ ಸಂತಸ ನೀಡಲಿದೆ.

ಮೀನ: ನೂತನ ಮನೆ, ಕಟ್ಟಡ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲು ಇದು ಸಕಾಲ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಅಸಹಕಾರ ಕಿರಿ ಕಿರಿ ಉಂಟುಮಾಡಬಹುದು. ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments