ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ವ್ಯಾಪಾರ,ವ್ಯವಹಾರಗಳಲ್ಲಿ ಸಾಕಷ್ಟು ಚೇತರಿಕೆ ಕಂಡುಬರಲಿದ್ದು, ಆದಾಯ ವೃದ್ಧಿಯಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ಉದ್ಯೋಗ ಕ್ಷೇತ್ರದ ಕಿರಿ ಕಿರಿಗಳನ್ನು ಕುಟುಂಬದವರ ಜತೆ ತೋರಿಸಿ ಮನಸ್ಸು ಹಾಳುಮಾಡಿಕೊಳ್ಳಬೇಡಿ.
ವೃಷಭ: ಕಷ್ಟ ಕಾಲದಲ್ಲಿ ಮಿತ್ರರ ಸಹಾಯದಿಂದ ಪರಿಹಾರ ಕಂಡುಕೊಳ್ಳುವಿರಿ. ಯೋಗ್ಯ ವಯಸ್ಕರಿಗೆ ಯೋಗ್ಯ ಸಂಬಂಧಗಳು ಕೂಡಿಬರಲಿವೆ. ಪ್ರೇಮಿಗಳಿಗೆ ಶುಭ ದಿನ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.
ಮಿಥುನ: ವಿದ್ಯಾರ್ಥಿಗಳಿಗೆ ಉತ್ಸಾಹ ಭಂಗವಾಗವಂತಹ ಘಟನೆಗಳು ನಡೆದೀತು. ಯಾವುದಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ. ನಿಮ್ಮ ಕಷ್ಟಗಳಿಗೆ ಹಿರಿಯರಿಂದ ಪರಿಹಾರ ಸಿಗಲಿದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟ ಸಾಧ್ಯತೆಯಿದೆ.
ಕರ್ಕಟಕ: ದಾನ, ಧರ್ಮ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಚಿಂತೆ ಬೇಡ.
ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕಾರ್ಯವೈಖರಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗವಿದೆ. ದಾಯಾದಿ ಕಲಹಗಳು ಪರಿಹಾರವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.
ಕನ್ಯಾ: ಮಾನಸಿಕವಾಗಿ ಅಧೈರ್ಯವಿದ್ದರೆ ಯಾವುದೇ ಕೆಲಸದಲ್ಲೂ ಯಶಸ್ಸು ಸಾಧಿಸಲು ಸಾಧ್ಯವಾಗದು. ಕಾರ್ಯಕ್ಷೇತ್ರದಲ್ಲಿ ನಿರುತ್ಸಾಹ ಕಂಡುಬಂದೀತು. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.
ತುಲಾ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬಂದೀತು. ಉದ್ಯೋಗಸ್ಥ ಮಹಿಳೆಯರಿಗೆ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಖರ್ಚು ವೆಚ್ಚಗಳಿಗೆ ಮಿತಿಯಿರಲಿ.
ವೃಶ್ಚಿಕ: ಪೋಷಕರ ಮಾತಿಗೆ ಕಿವಿಗೊಡಬೇಕಾಗುತ್ತದೆ. ಅವರ ಸಲಹೆಗಳನ್ನು ಪಾಲಿಸಿದಲ್ಲಿ ಮುಂದೆ ತೊಂದರೆ ಬಾರದು. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ವೃತ್ತಿರಂಗದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಬೆಲೆ ಸಿಗಲಿದೆ.
ಧನು: ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದ್ದು, ಹಣಕಾಸಿಗೆ ತೊಂದರೆಯಿರದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಹಿಳೆಯರಿಗೆ ತವರಿನ ಸಂಬಂಧಿಗಳ ಭೇಟಿಯಾಗುವ ಯೋಗ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.
ಮಕರ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಗೃಹ ರಿಪೇರಿ, ವಾಹನ ರಿಪೇರಿ ಇತ್ಯಾದಿಗಳಿಗೆ ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳಾದೀತು. ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ವ್ಯಾಪಾರಿಗಳಿಗೆ ಹಿನ್ನಡೆಯಾದೀತು.
ಕುಂಭ: ಯೋಗ್ಯ ವಯಸ್ಕರು ಸೂಕ್ತ ವೈವಾಹಿಕ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳಿತು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರಲಿದೆ. ಸಾಲ ಕೊಡಲು ಹೋಗಬೇಡಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಸಂತಸವಾಗಲಿದೆ.
ಮೀನ: ಬೇಡದ ವಿಚಾರಗಳಿಗೆ ತಲೆಕೆಡಿಸಿಕೊಂಡು ಪ್ರೀತಿ ಪಾತ್ರರ ಮನಸ್ಸಿಗೂ ನೋವು ಕೊಡಬೇಡಿ. ಆಲಸ್ಯತನ ಬಿಟ್ಟು ಕೆಲಸ ಕಾರ್ಯಗಳತ್ತ ಗಮನ ಹರಿಸಿ. ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.