ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಶೈಕ್ಷಣಿಕ ರಂಗದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ ಕಂಡುಬರಲಿದೆ. ಆರೋಗ್ಯ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ. ಬೇರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ನಿಮ್ಮ ಸತ್ಕಾರ್ಯಗಳು ನಿಮ್ಮ ನೆರವಿಗೆ ಬರಲಿದೆ.
ವೃಷಭ: ನೀವು ಅಂದುಕೊಂಡ ಕೆಲಸಗಳು ಅಂದುಕೊಂಡ ರೀತಿಯಲ್ಲಿ ಸಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮುಂಬಡ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳನ್ನು ಪಡೆಯಲಿದ್ದಾರೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
ಮಿಥುನ: ನೀವು ಹಿಂದೆ ಮಾಡಿದ ಪರಿಶ್ರಮಕ್ಕೆ ಇಂದು ಫಲ ಸಿಗಲಿದೆ. ಸ್ವಯಂ ವ್ಯಾಪಾರಿಗಳು, ವ್ಯವಹಾರ ನಡೆಸುವವರಿಗೆ ಆರ್ಥಿಕವಾಗಿ ಮುನ್ನಡೆಯ ಯೋಗವಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.
ಕರ್ಕಟಕ: ದೈಹಿಕವಾಗಿ ನಿಮ್ಮ ಸಾಮರ್ಥ್ಯ ಹೆಚ್ಚಲಿದೆ. ಹಿರಿಯರ ಮನದಾಸೆ ಪೂರೈಸಲಿದ್ದೀರಿ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ವೃತ್ತಿರಂಗದಲ್ಲಿ ನಿಮ್ಮ ಹಿತಶತ್ರುಗಳ ಸಂಚು ಬಯಲಾಗಲಿದೆ. ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.
ಸಿಂಹ: ಅಲ್ಪ ಕಾಲದಲ್ಲಿ ಹಣ ಗಳಿಸುವ ಯೋಜನೆಗಳ ಬಗ್ಗೆ ಯೋಚನೆ ಮಾಡುವಿರಿ. ಅಪರಿಚಿತರನ್ನು ನಂಬಿ ವ್ಯವಹರಿಸಲು ಹೋದರೆ ವಂಚನೆಗೊಳಗಾಗಬೇಕಾದೀತು, ಎಚ್ಚರಿಕೆಯಿರಲಿ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ಮನಸ್ಸಿಗೆ ಹಿಡಿಸಿದ ಕೆಲಸಗಳನ್ನು ಮಾಡುವುದರಿಂದ ನೆಮ್ಮದಿ ಕಂಡುಕೊಳ್ಳಲಿದ್ದೀರಿ. ಸಹೋದ್ಯೋಗಿಗಳ ನೆರವು ಸಿಗಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಿರು ಓಡಾಟ ನಡೆಸಬೇಕಾಗುತ್ತದೆ.
ತುಲಾ: ನಿಮ್ಮ ಮಾತಿನ ಮೋಡಿಯಿಂದಲೇ ಇತರರನ್ನು ಸೆಳೆಯಲಿದ್ದೀರಿ. ಕಾರ್ಯಸಾಧನೆಯಾಗಬೇಕಾದರೆ ಕ್ರಿಯಾತ್ಮಕ ಯೋಚನೆಗಳೂ ಮುಖ್ಯವಾಗುತ್ತದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಅತಿಥಿಗಳ ಆಗಮನದಿಂದ ಸಂತಸವಾಗಲಿದೆ.
ವೃಶ್ಚಿಕ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಕಾರ್ಯಾರಂಭದಲ್ಲಿ ವಿಘ್ನಗಳು ಎದುರಾದರೂ ಅಂತಿಮ ಜಯ ನಿಮ್ಮದಾಗುವುದು. ವಾಸಸ್ಥಳ ಬದಲಾವಣೆ ಮಾಡಲು ಚಿಂತನೆ ನಡೆಸಲಿದ್ದೀರಿ.
ಧನು: ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಪ್ರೀತಿ ಪಾತ್ರರಿಗೆ ಹಿಡಿಸದೇ ಹೋದೀತು. ಮಹಿಳೆಯರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾದೀತು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.
ಮಕರ: ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳು ಎದುರಾದೀತು. ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಓಡಾಟ ನಡೆಸಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿ.
ಕುಂಭ: ಇಷ್ಟ ಮಿತ್ರರೊಂದಿಗೆ ಪ್ರವಾಸಕ್ಕೆ ತಯಾರಿ ನಡೆಸುವಿರಿ. ದೂರು ಪ್ರಯಾಣದಿಂದ ಕಾರ್ಯಸಿದ್ಧಿಯಾಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗವು ಕೈಹಿಡಿಯಲಿದೆ. ಅವಿವಾಹಿತರಿಗೆ ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಉತ್ತಮ.
ಮೀನ: ಕೃಷಿಕರಿಗೆ ಕಾರ್ಯಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ವೈದ್ಯಕೀಯ ವೃತ್ತಿಯವರಿಗೆ ಕೆಲಸದೊತ್ತಡ ಹೆಚ್ಚಾಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಇದುವರೆಗೆ ಇದ್ದ ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.