Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 13 ಸೆಪ್ಟಂಬರ್ 2020 (08:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಸುಖ ಸಂತೋಷವಿರಲಿದ್ದು, ಹಂತ ಹಂತವಾಗಿ ಚೇತರಿಕೆ ಕಂಡುಕೊಳ್ಳುವಿರಿ. ಗೃಹಿಣಿಯರಿಗೆ ವಿರಾಮದ ಖುಷಿ ಸಿಗಲಿದೆ. ಹಿರಿಯರ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ.

ವೃಷಭ: ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ವೃತ್ತಿರಂಗದಲ್ಲಿ ಋಣಾತ್ಮಕ ಚಿಂತನೆಗಳನ್ನು ಬಿಟ್ಟು ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ಹಿತಶತ್ರುಗಳ ಜತೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ಪ್ರೇಮಿಗಳಿಗೆ ಹಿರಿಯರನ್ನು ಒಪ್ಪಿಸುವುದು ಪ್ರಯಾಸವೆನಿಸಬಹುದು. ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಬಂದೀತು. ಸಣ್ಣಪುಟ್ಟ ಅಡೆತಡೆಗಳನ್ನು ಅಲಕ್ಷಿಸುವುದೇ ಉತ್ತಮ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ಸಿಂಹ: ನೀವು ಮನಸ್ಸಿನಲ್ಲಿ ಅಂದುಕೊಂಡ ಕೆಲಸ ಅನಿರೀಕ್ಷಿತ ರೀತಿಯಲ್ಲಿ ಪೂರ್ತಿಯಾಗಲಿದೆ. ಆಕಸ್ಮಿಕವಾಗಿ ಧನಲಾಭವಾಗಲಿದ್ದು, ಹೊಸ ಯೋಜನೆಗಳಿಗೆ ಕೈಹಾಕಲಿದ್ದೀರಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾದೀತು.

ಕನ್ಯಾ: ಕೌಟುಂಬಿಕವಾಗಿ ನೀವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ಹಿರಿಯರ ಅಸಮಾಧಾನಕ್ಕೆ ಗುರಿಯಾದೀತು. ಮಹಿಳೆಯರಿಗೆ ಆಕಸ್ಮಿಕವಾಗಿ ಧನಾಗಮನ ಯೋಗವಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ತುಲಾ: ನಿಮ್ಮ ಇಷ್ಟಾರ್ಥಗಳನ್ನು ಪೂರೈಸಲು ಸಂಗಾತಿಯ ಸಹಕಾರ ಪಡೆಯಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕ ಚಿಂತನೆಗಳು ಉಪಯೋಗಕ್ಕೆ ಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ನೂತನ ದಂಪತಿಗಳು ಶೀಘ್ರದಲ್ಲೇ ಸಿಹಿ ಸುದ್ದಿ ನಿರೀಕ್ಷಿಸಬಹುದು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಕಂಡುಬರಲಿದೆ.

ಧನು: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬಂದೀತು. ಹಲವು ದಿನಗಳಿಂದ ಕಾಡುತ್ತಿದ್ದ ಚಿಂತೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಅನಗತ್ಯ ಸಂದರ್ಭಗಳಲ್ಲಿ ನಾಲಿಗೆ ಹರಿಯಲು ಬಿಟ್ಟರೆ ಕಾರ್ಯ ಕೆಟ್ಟೀತು. ತಾಳ್ಮೆ, ಸಂಯಮವಿರಲಿ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸುವ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ಮಡದಿ, ಮಕ್ಕಳಿಂದ ನೆಮ್ಮದಿ, ಸಂತೋಷ ಅನುಭವಿಸುವಿರಿ.

ಕುಂಭ: ಬೇಡದ  ವಿಚಾರಗಳಲ್ಲಿ ಹೆಚ್ಚು ತಲೆಕೆಡಿಸಿಕೊಂಡು ಮಾನಸಿಕ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯ  ಮಾಡಲಿದ್ದೀರಿ. ಮನೆ ಮಂದಿಯ ಕೂಡುವಿಕೆಯಿಂದ ಸಂತೋಷ ನೆಲೆಸಲಿದೆ.

ಮೀನ: ಕಾರ್ಯ ಸಾಧನೆಗಾಗಿ ಓಡಾಟ ನಡೆಸಲಿದ್ದು, ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರಿಗೆ ದಾನ, ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಸಣ್ಣ ಪರಿಹಾರವನ್ನು ಮಾಡಿದರೆ ನಿಮಗೆ ಹಣದ ಕೊರತೆ ಕಾಡುವುದಿಲ್ಲ