Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 18 ಸೆಪ್ಟಂಬರ್ 2020 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮೇಲಧಿಕಾರಿಗಳ ಕಿರಿ ಕಿರಿಯಿಂದ ಕೆಲಸದಲ್ಲಿ ಉತ್ಸಾಹ ಕಂದುಕೊಳ್ಳಲಿದ್ದೀರಿ. ಸಂಗಾತಿಯೊಂದಿಗೆ ನಿಮ್ಮ ಮನದಾಳದ ದುಃಖ ಹಂಚಿಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮುನ್ನಡೆಗೆ ಸಹಕಾರಿಯಾಗುವ ಅಂಶಗಳು ಕಂಡುಬರಲಿದೆ. ನಿರುದ್ಯೋಗಿಗಳಿಗೆ ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ಮಿಥುನ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಯಾವುದೇ ವಿಚಾರವಾದರೂ ಸಂಗಾತಿಯೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಉತ್ತಮ ಅವಕಾಶ ಕಂಡುಬರಲಿದೆ.

ಕರ್ಕಟಕ: ನಿಮ್ಮ ವೈಯಕ್ತಿಕ ಸಂತೋಷಕ್ಕೆ ಯಾವುದೇ ಅಡ್ಡಿಯೂ ಬರದು. ಪ್ರೀತಿ ಪಾತ್ರರೊಂದಿಗೆ ಮನಸ್ಸಿನ ಭಾವನೆ ಹಂಚಿಕೊಳ್ಳಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳ ಕಂಡುಬರಲಿದೆ.

ಸಿಂಹ: ಸಾಂಸಾರಿಕ ಜೀವನದಲ್ಲಿ ಹೊಂದಾಣಿಕೆ ಕೊರತೆಯಿಂದ ಭಿನ್ನಾಭಿಪ್ರಾಯಗಳು ಉಂಟಾದೀತು. ವೃತ್ತಿರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳು ಇತರರ ಗಮನ ಸೆಳೆಯಲಿದೆ. ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋದರೆ ನೆಮ್ಮದಿ ಹಾಳಾದೀತು.



ಕನ್ಯಾ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಬಂಧು ಮಿತ್ರರನ್ನು ಬಹಳ ಕಾಲದ ನಂತರ ಭೇಟಿ ಮಾಡಿದ ಸಂತಸ ನಿಮ್ಮದಾಗುವುದು. ದಾಯಾದಿ ಕಲಹಗಳಿಗೆ ಅಂತ್ಯ ಹಾಡಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧ ಒದಗಿಬರಲಿದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟ ಯೋಗವಿದೆ. ಬಯಸಿದ ವಸ್ತು ಪಡೆಯಲು ಕೆಲವೊಂದನ್ನು ತ್ಯಾಗ ಮಾಡಬೇಕಾಗುತ್ತದೆ.

ವೃಶ್ಚಿಕ: ಕ್ರಿಯಾತ್ಮಕ ಯೋಚನೆಗಳಿಂದ ಸಮಸ್ಯೆ ಬಗೆಹರಿಸಿಕೊಳ್ಳಲಿದ್ದೀರಿ. ಸಾಮಾಜಿಕಜವಾಗಿ ನಿಮ್ಮ ಕೆಲಸ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಆದರೆ ನೆರೆಹೊರೆಯವರಿಂದ ಚಾಡಿ ಮಾತು ಕೇಳಿಬಂದೀತು. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ಧನು: ಬಂಧು ವರ್ಗದವರ ನಡುವೆ ನಿಮ್ಮ ಗೌರವ ಹೆಚ್ಚಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಚಿಂತೆಯಾಗಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮಕರ: ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವ್ಯಾಪಾರ, ವ್ಯವಹಾರದಲ್ಲಿ ಕೊಂಚ ಮಟ್ಟಿನ ಚೇತರಿಕೆ, ಲಾಭ ಕಂಡುಬರುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ಸಕಾಲ. ಅನಗತ್ಯ ಖರ್ಚುಗಳನ್ನು ಮಿತಗೊಳಿಸಿ.

ಕುಂಭ: ಮಹಿಳೆಯರಿಗೆ ಬಿಡುವಿಲ್ಲದ ದುಡಿಮೆಯಿಂದ ದೇಹಾಯಾಸವಾದೀತು. ಸಹೋದರರ ವಿವಾಹ ಪ್ರಯತ್ನದಲ್ಲಿ ಸಫಲರಾಗುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಒಳಿತಾಗುವುದು. ನಯವಂಚಕರ ಹುನ್ನಾರಗಳು ಬಯಲಿಗೆ ಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿ. ಕಳೆದು ಹೋದ ವಸ್ತುಗಳು ಮರಳಿ ಕೈಸೇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments