ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ನಿಮ್ಮನ್ನು ಟೀಕಿಸಿದವರ ಎದುರು ತಲೆ ಎತ್ತಿ ನಿಲ್ಲುವ ಸಂದರ್ಭ ಎದುರಾಗಲಿದೆ. ನಿಮ್ಮ ಕೆಲಸ ಕಾರ್ಯಗಳಿಗೆ ಸಾಮಾಜಿಕವಾಗಿ ಪ್ರಶಂಸೆ ಸಿಗಲಿದೆ. ಹಾಗಂತ ಕೆಲಸ ಕಾರ್ಯಗಳಿಂದ ಬಿಡುವಿರದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ವೃಷಭ: ಆರೋಗ್ಯದ ಏರುಪೇರಿನಿಂದ ಆಸ್ಪತ್ರೆಗೆ ಅಲೆದಾಡಬೇಕಾದೀತು. ನಿಮ್ಮ ಕಷ್ಟಗಳಿಗೆ ಸಂಗಾತಿ ಹೆಗಲುಕೊಡಲಿದ್ದಾರೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ದೇವತಾ ಪ್ರಾರ್ಥನೆ ಮಾಡಿ.
ಮಿಥುನ: ನಿಮಗೆ ಲಾಭಕರ ಎನಿಸುವ ವೃತ್ತಿಯ ಬಗ್ಗೆ ಯೋಚನೆ ಮಾಡಲಿದ್ದೀರಿ. ಸರಕಾರಿ ಅಧಿಕಾರಿಗಳಿಗೆ ಉದ್ಯೋಗದಲ್ಲಿ ಬಡ್ತಿ ಸಂಭವವಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
ಕರ್ಕಟಕ: ನಿಮ್ಮ ಹಿತಶತ್ರುಗಳ ನಾಟಕಗಳು ಬಯಲಾಗಲಿದೆ. ಸಹೋದ್ಯೋಗಿಗಳೊಂದಿಗೆ ನಿಮ್ಮ ಸಂಬಂಧ ವೃದ್ಧಿಯಾಗಲಿದೆ ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಪ್ರೇಮಿಗಳ ಮನೆಯವರ ಒಪ್ಪಿಗೆ ಸಿಗುವುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.
ಸಿಂಹ: ನಿಮ್ಮ ವೈಯಕ್ತಿಕ ವಿಚಾರದಲ್ಲಿ ಮೂರನೆಯವರಿಗೆ ಮೂಗು ತೂರಿಸಲು ಅವಕಾಶ ಕೊಡಬೇಡಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ. ಇಷ್ಟದೇವರ ಪ್ರಾರ್ಥನೆ ಮಾಡಿ.
ಕನ್ಯಾ: ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭರವಸೆ ಸಿಗಲಿದೆ.
ತುಲಾ: ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಹೊಸ ಭರವಸೆ ಮೂಡಲಿದೆ. ಇಷ್ಟ ಭೋಜನ ಮಾಡುವ ಯೋಗವಿದ್ದು, ನಾಲಿಗೆ ಚಪಲಕ್ಕೆ ಕಡಿವಾಣವಿರಲಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲು ಖರ್ಚು ವೆಚ್ಚಗಳಾದೀತು. ಕಿರು ಸಂಚಾರ ಮಾಡುವಿರಿ.
ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ಕಂಡುಬರಲಿದೆ. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಮುನ್ನಡೆ ಕಂಡುಬರಲಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಟ್ಟರೆ ಉತ್ತಮ. ದೇವತಾ ಪ್ರಾರ್ಥನೆ ಮರೆಯದಿರಿ.
ಧನು: ನಿಮ್ಮ ವೃತ್ತಿಜೀವನಕ್ಕೆ ಸಂಚಕಾರ ಬರುವಂತಹ ಘಟನೆಗಳು ನಡೆದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನೂತನ ದಂಪತಿಗಳಿಗೆ ಶೀಘ್ರ ಸಂತಾನ ಫಲ ಸೂಚನೆ ಕಂಡುಬರಲಿದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.
ಮಕರ: ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ, ಲಾಭ ಕಂಡುಬರಲಿದೆ. ನಿಮ್ಮ ಕೆಲಸ ಕಾರ್ಯಗಳ ಬಗ್ಗೆ ನಿಮ್ಮ ಮನದಲ್ಲಿ ತೃಪ್ತಿಯ ಭಾವ ಮೂಡಲಿದೆ. ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.
ಕುಂಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಅಡ್ಡಿಗಳು ಎದುರಾದರೂ ಅಂತಿಮ ಜಯ ನಿಮ್ಮದಾಗುವುದು. ಸಂಗಾತಿಯ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಮಕ್ಕಳಿಂದ ಸಂತಸದ ವಾರ್ತೆ ಸಿಗಲಿದೆ. ಹಳೆಯ ಮಿತ್ರರ ಭೇಟಿಯಾಗುವ ಯೋಗವಿದೆ.
ಮೀನ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಚಿಂತೆ ಬೇಕಾಗಿಲ್ಲ. ಹಣಕಾಸಿನ ವಿಚಾರದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ವ್ಯಾಪಾರಿಗಳು ಲಾಭ ಅನುಭವಿಸಲಿದ್ದಾರೆ.