ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 26 ಸೆಪ್ಟಂಬರ್ 2020 (09:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸ್ವಾರ್ಥ ಸಾಧನೆಗಾಗಿ ನಿಮ್ಮ ಜತೆಗಿದ್ದವರ ಮುಖವಾಡ ಬಯಲಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ತಾಳ್ಮೆಯಿರಲಿ.

ವೃಷಭ: ವೃತ್ತಿರಂಗದಲ್ಲಿ ಹಲವು ಅವಕಾಶಗಳು ಒದಗಿಬಂದರೂ ಅವುಗಳನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ಎಡವಲಿದ್ದೀರಿ. ಹಿರಿಯರ ಸಲಹೆ ಸೂಚನೆಗಳಿಗೆ ಮನ್ನಣೆ ನೀಡಿ. ನಿಮ್ಮ ಬಳಿ ಸಹಾಯ ಅಪೇಕ್ಷಿಸಿ ಬರುವವರಿಗೆ ನಿರಾಶೆ ಮಾಡಬೇಡಿ.

ಮಿಥುನ: ವಿನೋದ ಯಾತ್ರೆಗಾಗಿ ಸಿದ್ಧತೆ ಮಾಡಲಿದ್ದೀರಿ. ಆರ್ಥಿಕವಾಗಿ ಇದ್ದುದರಲ್ಲೇ ತೃಪ್ತಿ ಪಡುವುದು ಉತ್ತಮ. ಸರಕಾರಿ ಅಧಿಕಾರಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ಅವಿವಾಹಿತರಿಗೆ ಯೋಗ್ಯ ವಿವಾಹ ಪ್ರಸ್ತಾಪಗಳು ಒದಗಿ ಬರಲಿವೆ.

ಕರ್ಕಟಕ: ಅನಪೇಕ್ಷಿತ ಅತಿಥಿಗಳ ಆಗಮನದಿಂದ ಮನಸ್ಸಿಗೆ ಬೇಸರವಾಗಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚಲಿದೆ. ಮನಸ್ಸಿನ ಭಾವನೆಗಳಿಗೆ ಬೆಲೆಕೊಟ್ಟು ನಿರ್ಧಾರ ತೆಗೆದುಕೊಳ್ಳಿ.

ಸಿಂಹ: ದೈವಾನುಕೂಲದಿಂದ ಇಂದು ಎಲ್ಲವೂ ನೀವಂದುಕೊಂಡಂತೇ ಕೆಲಸ ಕಾರ್ಯಗಳು ನಡೆಯಲಿವೆ. ಮೇಲಧಿಕಾರಿಗಳಿಂದ ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕನ್ಯಾ: ನಿಮ್ಮಿಂದ ಇನ್ನೊಬ್ಬರಿಗೆ ಉಪಕಾರವಾಗದಿದ್ದರೂ ಅಪಕಾರವಾಗದಂತೆ ನೋಡಿಕೊಳ್ಳಿ. ಸಂಗಾತಿ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಮಕ್ಕಳ ದೇಹಾರೋಗ್ಯ ಚಿಂತೆಗೀಡುಮಾಡಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ತುಲಾ: ಕೆಲಸ ಕಾರ್ಯಗಳು ನೀವಂದುಕೊಂಡಂತೆಯೇ ನಡೆಯಲಿವೆ. ಚಿಂತೆ ಬೇಡ. ಹೂಡಿಕೆ ವ್ಯವಹಾರಗಳನ್ನು ಮಾಡಲು ಕೆಲವು ದಿನ ಕಾಯುವುದು ಒಳಿತು. ಸಾಲಗಾರರಿಂದ ಮುಕ್ತಿ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ವೃಶ್ಚಿಕ: ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತಿವೆ ಎನಿಸಿದರೂ ಅಂತಿಮವಾಗಿ ನೀವಂದುಕೊಂಡಂತೆಯೇ ನಡೆಯುವುದರಿಂದ ಚಿಂತೆ ಬೇಡ. ಹಿರಿಯರಿಗೆ ಆಧ್ಯಾತ್ಮಿಕತೆ ಕಡೆಗೆ ಮನಸ್ಸು ವಾಲಲಿದೆ. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ.

ಧನು: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭಮಾಡುವುದರಿಂದ ಎಲ್ಲವೂ ನೀವಂದುಕೊಂಡಂತೇ ನಡೆಯಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ದುಡುಕಿ ಮಾತನಾಡಲು ಹೋಗಬೇಡಿ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು.

ಮಕರ: ಪ್ರೀತಿ ಪಾತ್ರರಿಗೆ ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ನೇರವಾಗಿ ಹೇಳುವ ಸಮಯ ಸಂದರ್ಭ ಒದಗಿಬರಲಿದೆ. ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದಾರೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಕುಂಭ: ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲು ಧನವ್ಯಯ ಮಾಡಲಿದ್ದೀರಿ. ಸಾಮಾಜಿಕವಾಗಿ ಉನ್ನತ ಸ್ಥಾನಮಾನ ಪಡೆಯಲಿದ್ದೀರಿ. ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಕಂಡುಬರಲಿದೆ.

ಮೀನ: ಶುಭ ಮಂಗಲ ಕಾರ್ಯ ನಿಮಿತ್ತ ಓಡಾಟ ನಡೆಸುವಿರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾಗಳು ಬರಲಿವೆ. ಮಹಿಳೆಯರಿಗೆ ತವರಿನ ವ್ಯಕ್ತಿಗಳ ಭೇಟಿಯಾಗುವ ಯೋಗವಿದೆ. ಅಪರಿಚಿತ ವ್ಯಕ್ತಿಯಿಂದ ನಿಮ್ಮ ವ್ಯವಹಾರಕ್ಕೆ ಅನುಕೂಲವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಮುಂದಿನ ಸುದ್ದಿ
Show comments