ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 5 ಅಕ್ಟೋಬರ್ 2020 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ರೈತಾಪಿ ವರ್ಗದವರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದ ಪರಿಸ್ಥಿತಿ ಎದುರಾದೀತು. ರಾಜಕೀಯ ರಂಗದವರಿಗೆ ಅತೀವ ಕಾರ್ಯದೊತ್ತಡವಿರುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಕೌಟುಂಬಿಕವಾಗಿ ಉತ್ತಮ ಸಮಯ ಕಳೆಯಲಿದ್ದೀರಿ.

ವೃಷಭ: ನೀವು ಬಯಸಿದ್ದೊಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾಗುವುದು. ವೃತ್ತಿರಂಗದಲ್ಲಿ ತಾಳ್ಮೆ, ಸಂಯಮವಿರಲಿ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತಕ್ಕ ಬೆಲೆ ಸಿಗದೇ ಹೋದೀತು. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ಮಿಥುನ: ಸಂಗಾತಿಯ ಜತೆ ಪರಾಮರ್ಶಿಸಿ ಹೊಸ ನಿರ್ಧಾರಗಳನ್ನು ಕೈಗೊಳ್ಳಿ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಸಿದ್ಧತೆ ನಡೆಸಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಹೊಸ ರೀತಿಯ ಯೋಚನೆಗಳು, ಹೊಸ ದಾರಿ ತೋರಿಸಿಕೊಡಲಿವೆ. ಬರಬೇಕಾಗಿದ್ದ ಹಣ ಮರುಪಾವತಿಯಾಗಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರಬಹುದು.

ಸಿಂಹ: ನೀರು, ಬೆಂಕಿಯಿಂದ ಅಪಾಯ ಸಂಭವವಿದೆ. ದೂರವಿರುವುದೇ ಉತ್ತಮ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ.

ಕನ್ಯಾ: ನಿಮ್ಮ ಒಳಗಿನ ಗುಟ್ಟುಗಳು ಬಹಿರಂಗವಾಗುವುದು. ಸಂಗಾತಿಯ ಜತೆ ಮನಸ್ಸು ಬಿಚ್ಚಿ ಮಾತನಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು. ಮಕ್ಕಳಿಂದ ಸಂತಸ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ತುಲಾ: ದ್ವಂದ್ವ ನೀತಿ ಅನುಸರಿಸಿದರೆ ಮುಂದೆ ತೊಂದರೆ ಎದುರಿಸಬೇಕಾದೀತು. ಕಳೆದು ಹೋದ ಸಂಬಂಧ, ವಸ್ತುಗಳು ಮರಳಿ ಕೈ ಸೇರಲಿವೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು.

ವೃಶ್ಚಿಕ: ವ್ಯಾಪಾರಿ, ವ್ಯವಹಾರಸ್ಥರಿಗೆ ಆರ್ಥಿಕವಾಗಿ ಮುನ್ನಡೆ ತೋರಿಬರಲಿದೆ. ಆದರೆ ಹಿತಶತ್ರುಗಳನ್ನು ದೂರವಿಡುವುದೇ ಉತ್ತಮ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಪಡಬೇಕಾಗುತ್ತದೆ.

ಧನು: ಹಿರಿಯರಿಗೆ ಇಂದು ಸಂತೋಷದ ದಿನವಾಗಿರಲಿದೆ. ಆದರೆ ಇತರರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಬೇಡಿ. ಮಕ್ಕಳಿಗೆ ಬಯಸಿದ್ದು ಕೈಗೆ ಬರಲಿದ್ದು, ಸಂತೋಷ ಸಿಗುವುದು. ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ.

ಮಕರ: ಮನಸ್ಸಿನಲ್ಲಿ ಅಂದುಕೊಂಡಿದ್ದೇ ನಡೆಯುವುದರಿಂದ ಸಂತೋಷವಾಗಲಿದೆ. ಬಹಳ ದಿನಗಳಿಂದ ಕಾಯುತ್ತಿದ್ದ ಪ್ರೀತಿ ಪಾತ್ರರನ್ನು ಭೇಟಿಯಾದ ಸಂತೋಷ ಸಿಗುವುದು. ಸ್ವಯಂ ವ್ಯಾಪಾರಿಗಳಿಗೆ ನಷ್ಟದ ಭೀತಿಯಿದೆ. ಎಚ್ಚರಿಕೆ ಅಗತ್ಯ.

ಕುಂಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಗಲಿಗೇರಲಿವೆ. ನೂತನ ದಂಪತಿಗಳಿಗೆ ಸಂತಸದ ದಿನವಾಗಲಿದೆ.

ಮೀನ: ಬೇಡದ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡು ಮನಸ್ಸಿನ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಮಹಿಳೆಯರಿಗೆ ತವರಿನ ಸಂಬಂಧಿಗಳನ್ನು ಭೇಟಿಯಾಗುವ ಯೋಗವಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

ಮುಂದಿನ ಸುದ್ದಿ
Show comments