Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 6 ಅಕ್ಟೋಬರ್ 2020 (09:26 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ನೀವು ಹೆಚ್ಚು ಅಭಿವೃದ್ಧಿ ಹೊಂದಲಿದ್ದೀರಿ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದ್ದು, ಸಂತಸವಾಗಲಿದೆ. ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾದೀತು. ಕಾಳಜಿ ವಹಿಸಿ.

ವೃಷಭ: ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾದೀತು. ಮನೆಯಲ್ಲಿ ಶುಭ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗಕ್ಕಾಗಿ ಅಲೆದಾಟ ತಪ್ಪದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.

ಮಿಥುನ: ಗೃಹಕೃತ್ಯಗಳಲ್ಲಿ ಸಂಗಾತಿಯ ಸಹಕಾರ ಸಿಗಲಿದೆ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಏರುಪೇರಾದೀತು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಧನ ಗಳಿಕೆಗೆ ನಾನಾ ಮಾರ್ಗಗಗಳನ್ನು ಕಂಡುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಂಡುಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ಕೌಟುಂಬಿಕವಾಗಿ ಬರುವ ಸಣ್ಣ ಪುಟ್ಟ ಭಿನ್ನಾಬಿಪ್ರಾಯಗಳನ್ನು ಹಿರಿಯರ ಮಧ್ಯಸ್ಥಿಕೆಯೊಂದಿಗೆ ಪರಿಹರಿಸಿ. ವೈದ್ಯ ವೃತ್ತಿಯವರಿಗೆ ಬಿಡುವಿಲ್ಲದ ಕಾರ್ಯದೊತ್ತಡವಿರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ.

ಕನ್ಯಾ: ಮಾತಾಪಿತೃಗಳ ಆಶೀರ್ವಾದದಿಂದ ಹೊಸ ಕೆಲಸಗಳಿಗೆ ಕೈ ಹಾಕಿದರೆ ಯಶಸ್ಸು ಸಾಧಿಸುವಿರಿ. ವ್ಯಾಪಾರ, ವ್ಯವಹಾರಗಳಲ್ಲಿ ಏರಿಳಿತ ಸಾಮಾನ್ಯ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಚಿಂತೆ ಬೇಡ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಅಸಹಕಾರ ಕಂಡುಬರಲಿದೆ. ಅಂದುಕೊಂಡ ಕೆಲಸ ಪೂರ್ತಿಗೊಳಿಸಲು ಅಡೆತಡೆಗಳು ಕಂಡುಬರಲಿದೆ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದಿದ್ದರೆ ಆರೋಗ್ಯ ಸಮಸ್ಯೆಯಾದೀತು.

ವೃಶ್ಚಿಕ: ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮಾನಸಿಕವಾಗಿ ಸಮತೋಲನ ಕಾಯ್ದುಕೊಳ್ಳಬೇಕು. ಮಕ್ಕಳ ವಿಚಾರವಾಗಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳುಂಟಾದೀತು. ತಾಳ್ಮೆಯಿರಲಿ.

ಧನು: ಮನಸ್ಸಿನಲ್ಲಿ ಅಂದುಕೊಂಡ ಕಾರ್ಯವನ್ನು ಕಾರ್ಯಗತಗೊಳಿಸಲು ಹೊರಡುತ್ತೀರಿ. ಅನಿರೀಕ್ಷಿತವಾಗಿ ಹಳೆಯ ಮಿತ್ರರ ಭೇಟಿಯಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ಬಯಸಿ ವಸ್ತು ಕೈಗೆ ಸಿಗಲಿದೆ. ಆದರೆ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ.

ಮಕರ: ಪ್ರೀತಿ ಪಾತ್ರರನ್ನು ಬಹಳ ದಿನಗಳ ನಂತರ ಭೇಟಿಯಾದ ಖುಷಿ ಸಿಗಲಿದೆ. ನಿರುದ್ಯೋಗಿಗಳು ಉದ್ಯೋಗ ಸಂದರ್ಶನಕ್ಕಾಗಿ ಪರ ಊರಿಗೆ ಪ್ರಯಾಣ ಬೆಳೆಸಲಿದ್ದಾರೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ.

ಕುಂಭ: ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದ್ದು, ಇಷ್ಟಾರ್ಥಗಳ ಪೂರೈಕೆಗೆಗಾಗಿ ಧನವ್ಯಯ ಮಾಡಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಲಿದ್ದೀರಿ.

ಮೀನ: ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮೇಲ್ವರ್ಗಕ್ಕೇರುವ ಅವಕಾಶಗಳು ಒದಗಿಬರಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧ ಒದಗಿಬರಲಿದೆ. ದೇವತಾ ಪ್ರಾರ್ಥನೆ ಮರೆಯಬೇಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಯೋಲಿನ್ ಜೇಡಿಮಣ್ಣಿನಿಂದ ಚರ್ಮದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಗೊತ್ತಾ?