ಮೇಷ: ಮನೆಯಲ್ಲಿ ಶುಭ ಮಂಗಲ ಕಾರ್ಯದ ಸಿದ್ಧತೆ ನಡೆಯಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲಾ ಕೆಲಸವೂ ಸುಗಮವಾಗಿ ನಡೆಯಲಿದೆ. ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರುವುದು.
ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಶತ್ರು ಬಾಧೆ ಕಂಡುಬಂದೀತು. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ತಾಳ್ಮೆ, ಸಂಯಮ ಬೇಕು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಚಿಂತನೆ ಬರಲಿದೆ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.
ಮಿಥುನ: ವೃತ್ತಿರಂಗದಲ್ಲಿ ಒಂದೊಂದು ಕಷ್ಟಗಳು ಎದುರಾಗಿ ನಿಮ್ಮನ್ನು ಮಾನಸಿಕವಾಗಿ ಹೈರಾಣಾಗಿಸೀತು. ಸಂಗಾತಿಯೊಂದಿಗೆ ನಿಮ್ಮ ಮನದಾಳದ ದುಃಖ ಹಂಚಿಕೊಳ್ಳಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.
ಕರ್ಕಟಕ: ಮಡದಿ ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಯೋಗ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರುವುದು. ಹಿರಿಯರಿಗೆ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.
ಸಿಂಹ: ಕೋಪದ ಕೈಗೆ ಬುದ್ಧಿ ಕೊಟ್ಟು ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಹಿರಿಯರ ಸಲಹೆಗಳನ್ನು ಪಾಲಿಸಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಪ್ರೀತಿ ಪಾತ್ರರ ಭೇಟಿಗೆ ಮನಸ್ಸು ಹಾತೊರೆಯುವುದು.
ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಹಿತಶತ್ರುಗಳು ನಡೆಸುತ್ತಿದ್ದ ಹುನ್ನಾರಗಳು ಬಯಲಿಗೆ ಬರಲಿವೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಕುಟುಂಬದ ಹಿರಿಯರೊಡನೆ ಭಿನ್ನಾಭಿಪ್ರಾಯಗಳುಂಟಾದೀತು. ತಾಳ್ಮೆಯಿರಲಿ.
ತುಲಾ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಆದರೆ ಮಹಿಳೆಯರಿಂದ ಅಪವಾದದ ಭೀತಿಯಿದೆ. ವಾಹನ ಸವಾರರಿಗೆ ಅಪಘಾತದ ಭೀತಿಯಿದೆ. ಆರ್ಥಿಕವಾಗಿ ಆದಾಯವಿದ್ದರೂ ಖರ್ಚು ವೆಚ್ಚದ ಬಗ್ಗೆ ಹಿಡಿತವಿರಬೇಕು.
ವೃಶ್ಚಿಕ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಕೆಳ ಹಂತದ ನೌಕಕರಿಗೆ ಉದ್ಯೋಗ ನಷ್ಟದ ಭೀತಿಯಿದೆ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ. ಕುಲದೇವರ ಪ್ರಾರ್ಥನೆ ಮಾಡಿ.
ಧನು: ಕಾರ್ಯರಂಗದಲ್ಲಿ ಏಳಿಗೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಅತಿಥಿಗಳ ಆಗಮನ ಮನಸ್ಸಿಗೆ ಸಂತಸವುಂಟುಮಾಡಲಿದೆ. ವ್ಯಾಪಾರಿಗಳಿಗೆ ನಷ್ಟದ ಭೀತಿಯಿದೆ. ವ್ಯವಹಾರದಲ್ಲಿ ಎಚ್ಚರಿಕೆಯಿಂದಿರಿ.
ಮಕರ: ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧ ಕೂಡಿಬರಲಿದೆ. ಕೆಲಸ ಕಾರ್ಯಗಳಲ್ಲಿ ಪತ್ನಿಯ ಸಹಕಾರ ಸಿಗಲಿದೆ. ಭೂಮಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಒದಗಿಬರಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.
ಕುಂಭ: ಮಡದಿಯ ಮುನಿಸಿಗೆ ಕಾರಣರಾಗಲಿದ್ದೀರಿ. ಕೆಲಸ ಕಾರ್ಯಗಳಿಗಾಗಿ ಓಡಾಟ ನಡೆಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯ ಮಾಡಲಿದ್ದೀರಿ. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ನಿರೀಕ್ಷಿಸಬಹುದು. ದೇವತಾ ಪ್ರಾರ್ಥನೆ ಮಾಡಿ.
ಮೀನ: ವೃತ್ತಿರಂಗದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಕ್ರಿಯಾತ್ಮಕ ಯೋಚನೆ ಮಾಡಬೇಕಾಗುತ್ತದೆ. ಪ್ರೀತಿ ಪಾತ್ರರಿಗೆ ಅನಿರೀಕ್ಷಿತ ಉಡುಗೊರೆ ಕೊಡಲಿದ್ದೀರಿ. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ. ಕಿರು ಓಡಾಟ ನಡೆಸುವಿರಿ.