Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 15 ಅಕ್ಟೋಬರ್ 2020 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಹಾಕಾರ ಕೆಲಸದ ಮೇಲೆ ನಿರುತ್ಸಾಹ ತರಲಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹೊಸ ವ್ಯಕ್ತಿಗಳ ಭೇಟಿ ಸಂಭವವಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.

ವೃಷಭ: ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃತ್ತಿರಂಗದಲ್ಲಿ ಕೆಲವು ಹೊಸ ಸಮಸ್ಯೆಗಳು ಕಂಡುಬರಲಿದೆ. ಮಿತ್ರರ ಸಹಾಯ ಪಡೆಯಲಿದ್ದೀರಿ. ನೂತನ ದಂಪತಿಗಳಿಗೆ ಹೊಂದಾಣಿಕೆಯ ಕೊರತೆ ಉಂಟಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕಾರ್ಯರಂಗದಲ್ಲಿ ನಿಮ್ಮ ಉದ್ದೇಶ ಈಡೇರಿಕೆ ಶ್ರಮವಹಿಸಬೇಕಾಗುತ್ತದೆ. ಕೆಲಸದ ವಿಚಾರದಲ್ಲಿ ನಿಮ್ಮನ್ನು ಪ್ರಶ್ನಿಸುವಂತೇ ಇಲ್ಲ. ಆದರೆ ದುಡುಕಿನ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಅನಗತ್ಯ ವಿಚಾರಗಳ ಬಗ್ಗೆ ತಲೆಕಡಿಸಿಕೊಳ್ಳಬೇಡಿ.

ಕರ್ಕಟಕ: ಬೇರೆಯವರು ನಿಮ್ಮ ಕೆಲಸದಲ್ಲಿ ಮೂಗು ತೂರಿಸುವುದು ನಿಮಗೆ ಇರಿಸುಮುರಿಸು ಉಂಟುಮಾಡಬಹುದು. ಆದರೆ ತಾಳ್ಮೆ, ಸಂಯಮ ಅಗತ್ಯ. ಅವಿವಾಹಿತರಿಗೆ ಯೋಗ್ಯ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಇಷ್ಟದೇವರ ಪ್ರಾರ್ಥನೆ ಮಾಡಿ.

ಸಿಂಹ: ಉದ್ದೇಶಿತ ಗುರಿ ಸಾಧನೆಗೆ ಅಡೆತಡೆಗಳು ಬಂದೀತು. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿಕೊಂಡು ಹೋಗುವ ಅಗತ್ಯವಿದೆ. ವ್ಯಾಪಾರಿಗಳಿಗೆ ಶತ್ರು ಕಾಟ ಕಂಡುಬಂದೀತು. ಆರ್ಥಿಕವಾಗಿ ಹೊಸ ಯೋಜನೆಗಳನ್ನು ಕೈಗೊಳ್ಳಲು ಕೆಲವು ದಿನ ಕಾಯುವುದು ಒಳಿತು.

ಕನ್ಯಾ: ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟನ ನಡೆಸಲಿದ್ದೀರಿ. ನಿಮ್ಮ ಮನಸ್ಸಿಗೆ ಹಿಡಿಸಿದ ವ್ಯಕ್ತಿಗಳು ನಿಮ್ಮವರಾಗುತ್ತಾರೆ. ನೂತನ ದಂಪತಿಗಳಿಗೆ ಶೀಘ್ರವೇ ಸಂತಾನ ಫಲ ಸೂಚನೆ ದೊರೆಯಲಿದೆ. ಚಿಂತೆ ಬೇಡ.

ತುಲಾ: ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಅಂದುಕೊಂಡ ರೀತಿಯಲ್ಲೇ ಸಾಗಲಿದೆ. ಪ್ರೀತಿ ಪಾತ್ರರಿಗಾಗಿ ಹೆಚ್ಚಿನ ಸಮಯ ಮೀಸಲಿಡಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆ ಬರಲಿದೆ.

ವೃಶ್ಚಿಕ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ನಿವಾರಣೆಯಾಗಲಿವೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು. ಕಿರು ಓಡಾಟ ನಡೆಸುವಿರಿ.

ಧನು: ನೆರೆಹೊರೆಯವರ ನೂರೆಂಟು ಸಲಹೆಗಳಿಗೆ ಕಿವಿಗೊಟ್ಟರೆ ನಿಮ್ಮ ನೆಮ್ಮದಿಯೇ ಹಾಳಾದೀತು. ಸ್ವಯಂ ನಿರ್ಧಾರಗಳನ್ನು ಕೈಗೊಳ್ಳುವುದು ಉತ್ತಮ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆ.

ಮಕರ: ಸಾಂಸಾರಿಕವಾಗಿ ನೆಮ್ಮದಿ ಕಂಡುಬರಲಿದೆ. ಪತ್ನಿ, ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಅಧಿಕ ಖರ್ಚು ವೆಚ್ಚಗಳಗಾದಂತೆ ಎಚ್ಚರಿಕೆ ವಹಿಸಿ. ಅನಿರೀಕ್ಷಿತವಾಗಿ ಮನೆಗೆ ಬಂಧು ಮಿತ್ರರ ಆಗಮನವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ನಿಮ್ಮ ಜೀವನದಲ್ಲಿ ಕೆಲವೊಂದು ಅನಿರೀಕ್ಷಿತ ಬದಲಾವಣೆಗಳಾದೀತು. ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬರುವುದು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡಬೇಡಿ. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಉದ್ಯಮಿಗಳಿಗೆ ಲಾಭವಾಗಲಿದೆ. ಹಿತಶತ್ರುಗಳ ಹುನ್ನಾರಗಳು ಬಯಲಿಗೆ ಬರಲಿವೆ. ಮೇಲಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷ ಮಾಡಿಕೊಳ್ಳಬೇಡಿ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ?