Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 21 ಅಕ್ಟೋಬರ್ 2020 (09:19 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಮಾಜಿಕವಾಗಿ ನೀವು ಕೈಗೊಳ್ಳುವ ಕೆಲಸಗಳು ಪ್ರಶಂಸೆಗೆ ಕಾರಣವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಅನಗತ್ಯ ಸಂಘರ್ಷ ಬೇಡ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಆರ್ಥಿಕವಾಗಿ ಹೊಸ ಯೋಜನೆಗಳ ಬಗ್ಗೆ ಯೋಚನೆ ಮಾಡುವಿರಿ.

ವೃಷಭ: ಯಾವುದೇ ವಿಚಾರವಾದರೂ ಅನಗತ್ಯ ಚಿಂತೆ ಮಾಡುವುದನ್ನು ಬಿಡಿ. ಸಾವಧಾನದಿಂದ ಯೋಚಿಸಿದಲ್ಲಿ ಮಾರ್ಗಗಳು ಗೋಚರವಾಗಲಿದೆ. ಆರ್ಥಿಕವಾಗಿ ಧನಗಳಿಕೆಯ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ನಿಮ್ಮ ಪ್ರೀತಿ ಪಾತ್ರರ ಮನಸ್ಸಿಗೆ ಸಂತಸ ನೀಡಲಿದ್ದೀರಿ. ಹೊಸ ಜಾಗಗಳಿಗೆ ಭೇಟಿ ನೀಡುವ ಸಾಧ‍್ಯತೆಯಿದೆ. ನಿಮಗನಿಸಿದ್ದನ್ನು ನೇರವಾಗಿ ಹೇಳುವುದು ಉತ್ತಮ. ಹೊಸ ಮಿತ್ರರ ಸಂಪಾದಿಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕರ್ಕಟಕ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಸಾಕಷ್ಟು ಯೋಚಿಸಿ ಮುನ್ನಡೆಯಿರಿ. ವೃತ್ತಿರಂಗದಲ್ಲಿ ನಿಮ್ಮ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಕೃಷಿಕರಿಗೆ ಬೆಳೆ ನಷ್ಟದ ಭೀತಿ ಎದುರಾಗಲಿದೆ. ಆರೋಗ್ಯದಲ್ಲಿ ಕೊಂಚ ಸುಧಾರಣೆಯಾಗಲಿದೆ.

ಸಿಂಹ: ಇತರರ ಕಷ್ಟಗಳಿಗೆ ನಿಮ್ಮ ಮನಸ್ಸು ಬೇಗನೇ ಕರಗುವುದು. ಆದರೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಹಿರಿಯರು ಸಕಾಲದಲ್ಲಿ ನೀಡುವ ಸಲಹೆಗಳು ಉಪಯೋಗಕ್ಕೆ ಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಚಿತ್ತ ಚಾಂಚಲ್ಯ ಕಾಡಲಿದೆ. ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಕಾಡಬಹುದು. ವೃತ್ತಿರಂಗದಲ್ಲಿ ಉದ್ವೇಗಕ್ಕೊಳಗಾಗುವ ಸಾಧ‍್ಯತೆಯಿದೆ. ಹಳೆಯ ಮಿತ್ರರ ಭೇಟಿ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ತುಲಾ: ಒಳಗಿನ ಬೇಗುದಿ ಹೊರಗೆ ತೋರಿಸಿಕೊಳ್ಳಲ್ಲ. ಕಷ್ಟಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ ಕೊಂಚ ಹಗುರವಾಗುವಿರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಇಷ್ಟ ಮಿತ್ರರೊಂದಿಗೆ ಭೋಜನ ಯೋಗವಿದೆ.

ವೃಶ್ಚಿಕ: ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚವಾಗಲಿದೆ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ತಾಳ್ಮೆಯಿಂದಿರಿ.

ಧನು: ಕೆಲವೊಮ್ಮೆ ಅತಿಯಾದ ವಿಶ್ವಾಸವೂ ಒಳ್ಳೆಯದಲ್ಲ ಎನ್ನುವುದನ್ನು ಮನಗಾಣಲಿದ್ದೀರಿ. ಮಹಿಳೆಯರಿಗೆ ತವರಿನ ಸಂಬಂಧಿಗಳನ್ನು ಭೇಟಿಯಾಗುವ ಯೋಗವಿದೆ. ವ್ಯವಹಾರದಲ್ಲಿ ತಾಳ್ಮೆಯೇ ಮುಖ್ಯವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾದೀತು. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರುವುದು ಅಗತ್ಯ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕುಂಭ: ನಿಮ್ಮ ಅತಿಯಾದ ಪರಿಶ್ರಮವೇ ನಿಮಗೆ ಮುಂದೆ ಯಶಸ್ಸು ತಂದುಕೊಡಲಿದೆ. ನೀವು ಅಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿ ಸಿಗಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಕೊಂಚ ಚಿಂತೆಯಾಗಬಹುದು. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.

ಮೀನ: ಮಹಿಳೆಯರಿಗೆ ಆಕಸ್ಮಿಕ ಧನಲಾಭದ ಯೋಗವಿದೆ. ಜೀವನದಲ್ಲಿ ಬಂದಿದ್ದನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವ ಬೆಳೆಸಿ. ನೂತನ ದಂಪತಿಗಳಿಗೆ ಶೀಘ‍್ರದಲ್ಲೇ ಸಂತಾನ ಫಲ ಸೂಚನೆ ದೊರೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments