Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 24 ಅಕ್ಟೋಬರ್ 2020 (09:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಇಲ್ಲದ ಕಿರಿ ಕಿರಿಗಳನ್ನು ಮೈಮೇಲೆಳೆದುಕೊಂಡು ತೊಂದರೆಗೆ ಸಿಲುಕಿಕೊಳ್ಳಬೇಡಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ವೃಷಭ: ಹೊಸ ಆರ್ಥಿಕ ಚಟುವಟಿಕೆಗಳಿಗೆ ಚಾಲನೆ ನೀಡಲು ಇದು ಸಕಾಲ. ಯಾವುದೇ ಕೆಲಸಕ್ಕೂ ಮುನ್ನ ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ನಿಮ್ಮ ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ರಜೆಯ ಮಜಾ ಸಿಗಲಿದೆ.

ಮಿಥುನ: ಇದುವರೆಗೆ ಇದ್ದ ಆರೋಗ್ಯ ಸಮಸ್ಯೆಗಳು ದೂರವಾಗಿ ಸಮಾಧಾನ ಮೂಡಲಿದೆ. ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವುದರಿಂದ ನಿಷ್ಠುರಕ್ಕೊಳಗಾಗುವಿರಿ. ಪ್ರೀತಿ, ಪ್ರೇಮ ಸಂಬಂಧಗಳು ಯಶಸ್ವಿಯಾಗಲಿದೆ.

ಕರ್ಕಟಕ: ಬಹುದಿನಗಳ ಕನಸನ್ನು ನನಸು ಮಾಡಲು ಪ್ರಯತ್ನ ನಡೆಸಲಿದ್ದೀರಿ. ಆತ್ಮವಿಶ್ವಾಸವೇ ನಿಮಗೆ ಶ್ರೀರಕ್ಷೆಯಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ನೆರವು ಸಿಗಲಿದೆ. ಸಾಂಸಾರಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ.

ಸಿಂಹ: ಇಷ್ಟ ಮಿತ್ರರೊಂದಿಗೆ ಪ್ರವಾಸ, ಭೋಜನ  ಯೋಗವಿದೆ. ಸಂತೋಷದ ಕ್ಷಣಗಳನ್ನು ಕಳೆಯಲಿದ್ದೀರಿ. ನವದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ. ಅವಿವಾಹಿತರಿಗೆ ಶೀಘ್ರವೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಕನ್ಯಾ: ಮಿತ್ರರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ಕಷ್ಟಕ್ಕೆ ಸಿಲುಕಿಕೊಳ್ಳದಿರಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ಬೇರೆಯವರ ಅಭಿಪ್ರಾಯವನ್ನು ಆಲಿಸಿ ನಿಮ್ಮ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಸ್ವಂತಿಕೆಯಿರಲಿ. ದೇಹಾರೋಗ್ಯದಲ್ಲಿ ಕೊಂಚ ಏರುಪೇರಾಗಬಹುದು. ಕಾಳಜಿ ಮಾಡುವುದು ಅಗತ್ಯ. ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಪ್ರತಿಕೂಲ ವಾತಾವರಣವಿರಲಿದೆ. ಆದರೆ ತಾಳ್ಮೆ, ಸಂಯಮದಿಂದ ವರ್ತಿಸಿ. ಕುಟುಂಬದೊಳಗೆ ಕಲಹಗಳಾಗದಂತೆ ಎಚ್ಚರಿಕೆ ವಹಿಸುವ ಜವಾಬ್ಧಾರಿ ನಿಮ್ಮದಾಗಿರುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ದೈವಾನುಕೂಲದಿಂದ ಅಂದುಕೊಂಡ ಕೆಲಸಗಳನ್ನು ನೆರವೇರಿಸಲಿದ್ದೀರಿ. ಆದರೆ ದೇಹಾರೋಗ್ಯದಲ್ಲಿ ಏರುಪೇರಾಗುವುದರಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಮಕರ: ಕಾರ್ಯರಂಗದಲ್ಲಿ ಶತ್ರುಬಾಧೆ ಇರಲಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಮನಸ್ಸಿಗೆ ಅನಿಸಿದ್ದನ್ನು ಕಾರ್ಯರೂಪಕ್ಕೆ ತರುವ ಉತ್ಸಾಹ ಕಂಡುಬರಲಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ಕುಂಭ: ಕಾರ್ಯಕ್ಷೇತ್ರದಲ್ಲಿ ಅಡಚಣೆಗಳಿದ್ದರೂ ಹಂತ ಹಂತವಾಗಿ ನಿಮ್ಮ ಕೆಲಸ ನೆರವೇರಲಿದೆ. ಸಂಗಾತಿಯ ಆರೋಗ್ಯ ಚಿಂತೆಗೆ ಕಾರಣವಾಗಲಿದೆ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಒದಗಿಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಮನೆಯಲ್ಲಿ ಶುಭ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವ್ಯಾಪಾರ, ವ್ಯವಹಾರದಲ್ಲಿ ಲಾಭದಾಯಕ ಕಂಡುಬರಲಿದೆ. ಸಾಮಾಜಿಕವಾಗಿ ಕೀರ್ತಿ ಸಂಪಾದಿಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments