ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 27 ಅಕ್ಟೋಬರ್ 2020 (07:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಾನಸಿಕವಾಗಿ ಇದುವರೆಗೆ ಕಾಡುತ್ತಿದ್ದ ಸಮಸ್ಯೆಗಳಿಗೆ ಆಪ್ತರೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಕಾಡುವುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾದೀತು. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ ಸಮಾಧಾನಗೊಳ್ಳುವಿರಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಎಲ್ಲವೂ ನೀವಂದುಕೊಂಡಂತೆಯೇ ನಡೆಯಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆ ಕಂಡುಬರಲಿದೆ. ಆದರೆ ಯಾವುದನ್ನೂ ಉದಾಸೀನ ಮಾಡಬೇಡಿ.

ಕರ್ಕಟಕ: ಸಹೋದರರ ನಡುವೆ ಭಿನ್ನಾಭಿಪ್ರಾಯಗಳು ತಲೆದೋರುವ ಸಾಧ‍್ಯತೆಯಿದೆ. ತಾಳ್ಮೆ, ಸಂಯಮದಿಂದ ನಡೆದುಕೊಳ್ಳಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.

ಸಿಂಹ: ಕುಟುಂಬದಲ್ಲಿ ಶಾಂತಿ, ಸೌಹಾರ್ದತೆ ಕಂಡುಬರುವುದು. ನಿಮ್ಮ ಬಹುಕಾಲದ ಕನಸುಗಳು ನನಸಾಗಲಿವೆ. ಬಹಳ ದಿನಗಳ ನಂತರ ಆಪ್ತರ ಭೇಟಿ ಮನಸ್ಸಿಗೆ ಸಂತಸ ನೀಡಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗಬಹುದು.

ಕನ್ಯಾ: ಅನಿವಾರ್ಯ ಕಾರಣಗಳಿಗೆ ಹೊಸ ಯೋಜನೆಗಳನ್ನು ಮುಂದೂಡಲಿದ್ದೀರಿ. ಆರ್ಥಿಕವಾಗಿ ಸಾಲಗಾರರ ಸಮಸ್ಯೆ ತಲೆನೋವಾಗಲಿದೆ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ತುಲಾ: ಎಲ್ಲರೊಂದಿಗೆ ಸ್ನೇಹಪರವಾಗಿದ್ದರೆ ನಿಮ್ಮ ದಿನ ಸಂತೋಷದಿಂದ ಕೂಡಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.

ವೃಶ್ಚಿಕ: ನೂತನ ದಂಪತಿಗಳ ನಡುವೆ ಹೊಂದಾಣಿಕೆ ಕೊರತೆ ಕಂಡುಬಂದೀತು. ನಿಮ್ಮ ಸಂಸಾರದಲ್ಲಿ ಮೂರನೆಯವರ ಪ್ರವೇಶಕ್ಕೆ ಅವಕಾಶ ಮಾಡಿಕೊಡದಿರಿ. ವೃತ್ತಿರಂಗದಲ್ಲಿ ಏಳು-ಬೀಳು ಸಾಮಾನ್ಯ. ಆತ್ಮವಿಶ್ವಾಸ ರೂಢಿಸಿಕೊಳ್ಳಿ.

ಧನು: ಪ್ರೀತಿ ಪಾತ್ರರ ಭೇಟಿಗೆ ಮನಸ್ಸು ಹಾತೊರೆಯಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿದೆ. ಆರ್ಥಿಕವಾಗಿ ಹಣಕಾಸಿನ ಅಡಚಣೆ ತೋರಿಬಂದೀತು. ಆದರೆ ಯಾವುದಕ್ಕೂ ಅತಿಯಾದ ಚಿಂತೆ ಬೇಡ.

ಮಕರ: ಸಂಗಾತಿಯು ನಿಮ್ಮ ಮನಸ್ಸಿನ ಆಸೆಯಂತೆ ನಡೆದುಕೊಳ್ಳಲಿದ್ದಾರೆ. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸುವಿರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ನಿಸ್ಸಂಶಯವಾಗಿ ನಿಮಗೆ ಸಿಗಬೇಕಾದ ಪಾಲು ನಿಮಗೆ ಬಂದೇ ಬರುತ್ತದೆ. ಅದಕ್ಕೋಸ್ಕರ ಚಿಂತೆ, ಕೊರಗುವುದು ಬೇಡ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗಲಿದ್ದೀರಿ.

ಮೀನ: ಮಹಿಳೆಯರಿಗೆ ತವರಿನ ಕಡೆಯಿಂದ ಅನಿರೀಕ್ಷಿತ ಉಡುಗೊರೆಗಳು ಸಿಕ್ಕೀತು. ಕಳೆದು ಹೋದ ವಸ್ತುಗಳು ಮರಳಿ ಕೈಸೇರಿದ ಖುಷಿ ನಿಮ್ಮದಾಗಲಿದೆ. ಸದ್ಯದಲ್ಲೇ ವಾಹನ ಖರೀದಿ ಯೋಗವಿದೆ. ಆರ್ಥಿಕವಾಗಿ ಸರಿಯಾದ ಯೋಜನೆ ಮಾಡಿಕೊಂಡರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments