Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಶುಕ್ರವಾರ, 30 ಅಕ್ಟೋಬರ್ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಭಾವನೆಗಳು ನಿಮ್ಮ ನಿಯಂತ್ರಣದಲ್ಲಿರಲಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಕೌಟುಂಬಿಕ ಸಮಸ್ಯೆಗಳಿಂದಾಗಿ ಮನಸ್ಸಿಗೆ ಕಿರಿ ಕಿರಿಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಕಷ್ಟ ನಷ್ಟಗಳು ಸಾಮಾನ್ಯ. ಹಲವು ಸಮಯದಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಹುಡುಕಲಿದ್ಧೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಹಿರಿಯರಿಗೆ ಮನಸ್ಸಿಗೆ ಒಂದು ರೀತಿಯ ಬೇಸರ ಕಾಡಲಿದೆ. ಸಾರ್ವಜನಿಕ ವಲಯದಲ್ಲಿ ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಕೌಟುಂಬಿಕವಾಗಿ ಪತ್ನಿ-ಮಕ್ಕಳಿಂದ ಸಂತೋಷ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಮನೋಭಿಲಾಷೆಗಳು ಪೂರೈಕೆಯಾಗಲಿವೆ. ಶತ್ರು ಪೀಡೆಯಿಂದ ಮುಕ್ತಿ ಕಾಣಲಿದ್ದೀರಿ. ಯಾವುದೇ ಕೆಲಸವಾದರೂ ಇಷ್ಟಪಟ್ಟು ಮಾಡಿದರೆ ಯಶಸ್ಸು ಶತಸಿದ್ಧ. ವಿವಾಹಾದಿ ಸಂಬಂಧಗಳು ಯಶಸ್ವಿಯಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳು ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಕೊಂಚ ಸುಧಾರಣೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಆರಾಮದಾಯಕ ದಿನಗಳನ್ನು ಕಳೆಯಬೇಕೆಂದು ಮನಸ್ಸಿನಲ್ಲಿ ಅಂದುಕೊಂಡರೂ ನೆರವೇರದು. ನಿಮ್ಮ ಮನಸ್ಸಿನ ಭಾರ ಇಳಿಸಿಕೊಳ್ಳಲಿದ್ದೀರಿ. ಸಂಗಾತಿಯ ಸಾಂತ್ವನ ಸಿಗಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಸಾಧನೆಗೆ ಅನುಕೂಲಕರವಾದ ವಾತಾವರಣ ಕಂಡುಬರಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಿ. ಸಾಮಾಜಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಶ್ಚಿಕ: ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ ಕಂಡುಬರಲಿದೆ. ನಿಮ್ಮ ಮನಸ್ಸಿಗೆ ಸಮಾಧಾನ ಕೊಡುವ ಕೆಲಸ ಮಾಡಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾದೀತು.

ಧನು: ನಿಮ್ಮ ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ತೋರುವುದರಿಂದ ಬೇರೆಯವರಿಗೆ ತೊಂದರೆಯಾದೀತು. ವಿದ್ಯಾರ್ಥಿಗಳಿಗೆ ಅಭ್ಯಾಸದ ಕಡೆಗೆ ಗಮನ ಕೊಡುವುದು ಮುಖ್ಯವಾಗುತ್ತದೆ. ಆರ್ಥಿಕವಾಗಿ ಖರ್ಚುವೆಚ್ಚಗಳಿಗೆ ಸಿದ್ಧರಾಗಿ.

ಮಕರ: ಅನಿರೀಕ್ಷಿತವಾಗಿ ಮನೆಗೆ ಬಂಧು ಮಿತ್ರರ ಆಗಮನದಿಂದ ಸಂತಸದ ವಾತಾವರಣವುಂಟಾಗಲಿದೆ. ಹಿರಿಯರು ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ಸಂತೋಷ ಪಡೆಯುವರು. ಗೃಹಿಣಿಯರಿಗೆ ಬಿಡುವಿಲ್ಲದ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು.

ಕುಂಭ: ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡು ಮನಸ್ಸಿನ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಜತೆಯಾಗಿ ಕಳೆಯುವ ಯೋಗ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಮೀನ: ಮಹಿಳೆಯರಿಗೆ ಸದ್ಯದಲ್ಲೇ ಚಿನ್ನಾಭರಣ ಖರೀದಿ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯ ಭಯ ಕಾಡಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ.

Share this Story:

Follow Webdunia Hindi

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ?