ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ. ಇಷ್ಟು ದಿನ ಪರಿಹಾರವಾಗಿದೆ ಎಂದುಕೊಂಡಿದ್ದ ಸಮಸ್ಯೆಗಳು ಮತ್ತೆ ಎದುರಾಗಿ ತಲೆನೋವಾಗಲಿದೆ. ಸಂಗಾತಿಯ ಸಲಹೆಗಳು ಪಥ್ಯವೆನಿಸದು. ಆದರೆ ತಾಳ್ಮೆ ಅಗತ್ಯ.
ವೃಷಭ: ನಿಮ್ಮ ಮಾತಿನಿಂದಲೇ ಇಂದು ಎಲ್ಲರ ಮನಸ್ಸು ಹಾಳಾಗಬಹುದು. ನಿಮ್ಮ ಮಾತಿನ ಮೇಲೆ ನಿಗಾ ವಹಿಸುವುದು ಅಗತ್ಯ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಯೋಚನೆಗಳು ಬರಲಿವೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.
ಮಿಥುನ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲು ಮನಸ್ಸಾಗಲಿದೆ. ಆದರೆ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ದೇಹಾಯಾಸ ಮಾಡಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ.
ಕರ್ಕಟಕ: ಎಲ್ಲಾ ವಿಚಾರದಲ್ಲೂ ಸರಿಯಾಗಿ ಯೋಚಿಸಿ ಹೆಜ್ಜೆಯಿಡುವುದರಿಂದ ಯಶಸ್ಸು ಸಿಗುವುದು. ಹಿರಿಯರ ಸಲಹೆಗಳನ್ನು ಸ್ವೀಕರಿಸಿ. ಸಹೋದರರ ವಿವಾಹ ಸಂಬಂಧ ನಿಮ್ಮ ಪ್ರಯತ್ನ ಸಫಲವಾಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.
ಸಿಂಹ: ಸಮಸ್ಯೆಗಳು ಬಂದಾಗ ನುಣುಚಿಕೊಳ್ಳದೇ ಕ್ರಿಯಾತ್ಮಕವಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಿ. ಸಂಗಾತಿಯ ಸಹಕಾರ ಸಿಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಆದರೆ ಖರ್ಚು ವೆಚ್ಚದ ಬಗ್ಗೆ ಕಡಿವಾಣವಿರುವುದು ಅಗತ್ಯ.
ಕನ್ಯಾ: ಮಕ್ಕಳ ಭವಿಷ್ಯಕ್ಕಾಗಿ ಹಣ ಕೂಡಿಡುವ ಯೋಚನೆ ಮಾಡಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನಿಮ್ಮ ಬಗ್ಗೆ ನಿಮಗೇ ಪರಾಮರ್ಶಿಸುವ ಅವಕಾಶಗಳು ಸಿಗಲಿವೆ. ನೆರೆಹೊರೆಯವರ ಚಾಡಿಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.
ತುಲಾ: ಸದ್ಯದಲ್ಲೇ ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ವಾಹನ, ಭೂಮಿ ಖರೀದಿಗೆ ಯೋಗ ಕೂಡಿಬರಲಿದೆ. ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.
ವೃಶ್ಚಿಕ: ಇಷ್ಟ ಭೋಜನ ಮಾಡುವ ಯೋಗವಿದೆ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಪ್ರೀತಿ ಪಾತ್ರರಿಂದ ಅನಿರೀಕ್ಷಿತ ಉಡುಗೊರೆ ಸಿಗಲಿದೆ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.
ಧನು: ಕೌಟುಂಬಿಕವಾಗಿ ಅಭಿವೃದ್ಧಿದಾಯಕ ವಾತಾವರಣ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲ ದೊರೆಯಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ.
ಮಕರ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಲಿವೆ. ಅದನ್ನು ಬಳಸಿಕೊಳ್ಳುವ ಜಾಣತನ ಬೆಳೆಸಿಕೊಳ್ಳಬೇಕು. ಕೆಳಹಂತದ ನೌಕರರಿಗೆ ಬಡ್ತಿ ಯೋಗವಿದೆ. ಮೇಲಧಿಕಾರಿಗಳನ್ನು ಎದುರುಹಾಕಿಕೊಳ್ಳದಿರುವುದೇ ಜಾಣತನ.
ಕುಂಭ: ಸದ್ಯದಲ್ಲೇ ನೀವು ಮನಸ್ಸಿನಲ್ಲಿ ಅಂದುಕೊಂಡಿದ್ದು ನೆರವೇರಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಮಕ್ಕಳ ವಿಚಾರದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಮೀನ: ನಿಮ್ಮ ದುಡುಕಿನ ನಿರ್ಧಾರ, ಮಾತಿನಿಂದ ಕಾರ್ಯಹಾನಿಯಾದೀತು. ತಾಳ್ಮೆ, ಸಂಯಮ ಅಗತ್ಯ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ವ್ಯಾಪಾರಿಗಳಿಗೆ ಆರ್ಥಿಕ ಮುನ್ನಡೆಯಿರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.