Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 12 ನವೆಂಬರ್ 2020 (08:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೈವಾನುಗ್ರಹದಿಂದ ನೀವು ಬಯಸಿದ್ದು ನಿಜವಾಗಲಿದೆ. ಆದರೆ ಸಂಗಾತಿಯೊಂದಿಗೆ ಅನಗತ್ಯ ವಿವಾದ ಬೇಡ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಆರೋಗ್ಯದ ಬಗ್ಗೆ ಅತೀವ ಕಾಳಜಿ ಅಗತ್ಯ. ತಾಳ್ಮೆಯಿಂದಿರಿ.

ವೃಷಭ: ದೂರ ಸಂಚಾರದಿಂದ ದೇಹಾಯಾಸವಾದೀತು. ಕಾರ್ಯರಂಗದಲ್ಲಿ ನಾನಾ ರೀತಿಯ ಚಟುವಟಿಕೆಗಳಿರಲಿವೆ. ಮಿತ್ರರ ಸಹಾಯ ಪಡೆಯಲಿದ್ದೀರಿ.  ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭ್ಯವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಚಂಚಲ ಮನಸ್ಸು ನಿಮ್ಮದಾಗಲಿದೆ. ನಿರ್ಧಾರಗಳು ಆಗಾಗ ಬದಲಾದೀತು. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗುವುದು ಬೇಡ.

ಕರ್ಕಟಕ: ಸಂಗಾತಿಯೊಂದಿಗೆ ಸುಮಧುರ ಕ್ಷಣ ಕಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಹೊಸ ಅನುಭವಗಳು ಎದುರಾಗಲಿವೆ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾದೀತು. ವ್ಯಾಪಾರಿಗಳಿಗೆ ಮುನ್ನಡೆ.

ಸಿಂಹ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಅರ್ಧದಲ್ಲೇ ನಿಂತಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವ್ಯಾಪಾರಿಗಳು ತಕ್ಕ ಮಟ್ಟಿಗೆ ಲಾಭ ಗಳಿಸಲಿದ್ದಾರೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ಸಂಚಾರದಿಂದ ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಸೆಯಾದೀತು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ತೋರಿಬರಲಿದೆ. ಸ್ವಲ್ಪ ಎಚ್ಚರಿಕೆ ತಾಳ್ಮೆಯಿಂದ ಸಮಸ್ಯೆಗಳನ್ನು ಬಗೆಹರಿಸಬೇಕಾಗುತ್ತದೆ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತ‍ಕ್ಕ ಬೆಲೆ ಸಿಗದೇ ನಿರಾಸೆಯಾದೀತು. ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ವೃತ್ತಿರಂಗದಲ್ಲಿ ಅಭಿವೃದ್ಧಿದಾಯಕ  ವಾತಾವರಣ ಕಂಡುಬರಲಿದೆ. ನಿಮ್ಮ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಕಿರು ಓಡಾಟ ನಡೆಸುವಿರಿ.

ಧನು: ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಓಡಾಡುವ ಪರಿಸ್ಥಿತಿ ಬಂದೀತು. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ನೆನೆದು ಪಶ್ಚಾತ್ತಾಪ ಪಡಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗುವುದು.

ಮಕರ: ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ತೋರಿಬಂದರೂ ಮಾನಸಿಕವಾಗಿ ಕೆಲವೊಂದು ವಿಚಾರಗಳು ಚಿಂತೆಗೆ ಕಾರಣವಾಗಲಿದೆ. ಸಾಂಸಾರಿಕವಾಗಿ ನಿಮ್ಮ ಕೆಲವೊಂದು ಮಾತುಗಳು ಪ್ರೀತಿ ಪಾತ್ರರಿಗೆ ನೋವುಂಟುಮಾಡೀತು. ತಾಳ್ಮೆಯಿರಲಿ.

ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ವರ್ಗಕ್ಕೇರುವ ಅವಕಾಶವಿದೆ. ಮೇಲಧಿಕಾರಿಗಳಿಂದ ಕಟು ಮಾತುಗಳು ಕೇಳಿಬಂದೀತು. ಎಲ್ಲವನ್ನೂ ನಿಭಾಯಿಸುವ ತಾಳ್ಮೆಯಿರಲಿ. ಅನಿರೀಕ್ಷಿತ ಖರ್ಚು ವೆಚ್ಚಗಳು ತೋರಿಬರಲಿವೆ.

ಮೀನ: ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವೃತ್ತಿರಂಗದಲ್ಲಿ ಬಡ್ತಿ ಯೋಗವಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ನೆರೆಹೊರೆಯವರೊಂದಿಗೆ ವರ್ತಿಸುವಾಗ ಸಂಯಮದಿಂದಿರಿ. ದೇವತಾ ಪ್ರಾರ್ಥನೆ ಮರೆಯದಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಕಷ್ಟಗಳು ದೂರವಾಗಲು ಆಶ್ವೀಜ ಮಾಸದಲ್ಲಿ ದೇವಿಯನ್ನು ಹೀಗೆ ಪೂಜಿಸಿ