Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 15 ನವೆಂಬರ್ 2020 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಎಲ್ಲರೂ ಸಂಭ್ರಮದಲ್ಲಿದ್ದರೂ ನೀವು ಮಾತ್ರ ಏನೋ ಕಳೆದುಕೊಂಡ ನಿರುತ್ಸಾಹದಲ್ಲಿರುತ್ತೀರಿ. ಆತ್ಮೀಯರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.

ವೃಷಭ: ದೇಹಾರೋಗ್ಯದಲ್ಲಿ ಏರುಪೇರ ಕಂಡುಬಂದೀತು. ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಪೂರಕವಾದ ವಾತಾವರಣ ಕಂಡುಬರಲಿದೆ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ.

ಮಿಥುನ: ಮನಸ್ಸಿಗೆ ಸಂತೋಷ ಕೊಡುವ ಕೆಲಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು.

ಕರ್ಕಟಕ: ಅಂದುಕೊಂಡಿದ್ದ ಕೆಲಸಗಳು ಅಂದುಕೊಂಡ ರೀತಿಯಲ್ಲಿ ಸಾಗದೇ ಮನಸ್ಸಿಗೆ ನಿರಾಸೆಯಾದೀತು. ನಿರ್ಧಾರ ತೆಗೆದುಕೊಳ್ಳುವಲ್ಲಿ ಗೊಂದಲಗಳು ಕಾಡಲಿವೆ. ವೃತ್ತಿರಂಗದಲ್ಲಿ ಖಚಿತ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಎದುರಾಗಲಿದೆ.

ಸಿಂಹ: ಸಾಂಸಾರಿಕವಾಗಿ ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ನೂತನ ದಂಪತಿಗಳಿಗೆ ಹೊಂದಾಣಿಕೆಯ ಕೊರತೆ ಕಂಡುಬಂದೀತು. ತಾಳ್ಮೆ, ಸಂಯಮದಿಂದ ಎಲ್ಲವನ್ನೂ ನಿಭಾಯಿಸಿ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಲಿವೆ.

ಕನ್ಯಾ: ದೂರ ಪ್ರಯಾಣದಿಂದ ದೇಹಾಯಾಸವಾದೀತು. ಮಕ್ಕಳ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರಲಿದೆ. ಸಂಗಾತಿಯ ಸಹಕಾರ ಸಿಗುವುದರಿಂದ ಚಿಂತೆ ಬೇಡ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ತುಲಾ: ಮನೆಯವರ ಹಿತದೃಷ್ಟಿಯಿಂದ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಸ್ವಯಂ ಉದ್ಯೋಗಿಗಳಿಗೆ ಮುನ್ನಡೆಯ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಮುನ್ನಡೆಗೆ ಪೂರಕವಾದ ಅವಕಾಶಗಳು ದೊರೆಯಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಯೋಗ್ಯ ವಯಸ್ಕರಿಗೆ ಸದ್ಯದಲ್ಲೇ ಕಂಕಣ ಬಲ ಕೂಡಿಬರಲಿದೆ.

ಧನು: ದೇಹಾರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡುಬರಲಿದೆ. ಮಕ್ಕಳ ಸಹಕಾರದಿಂದ ಮನಸ್ಸಿಗೆ ಸಂತಸವಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕುವುದು ಉತ್ತಮ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ಅನಗತ್ಯವಾಗಿ ಚಿಂತೆ ಮಾಡುತ್ತಾ ಮಾನಸಿಕ ಆರೋಗ್ಯ ಹಾಳುಮಾಡಿಕೊಳ್ಳಬೇಡಿ. ಕೆಳ ಹಂತದ ನೌಕರರಿಗೆ ಸದ್ಯದಲ್ಲೇ ಬಡ್ತಿ ಯೋಗವಿದೆ. ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಕಾಡೀತು. ಹಿರಿಯರಿಗೆ ಅಭಿಪ್ರಾಯಗಳಿಗೆ ಬೆಲೆಕೊಡಿ.

ಕುಂಭ: ಸಂಗಾತಿಯ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ದಾಂಪತ್ಯದಲ್ಲಿ ತಾಳ್ಮೆ, ಸಹನೆ ಅಗತ್ಯ. ಸಂತಾನ ಹೀನ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಕೆಲಸ ಕಾರ್ಯಗಳಲ್ಲಿ ಮುನ್ನಡೆಯಿರಲಿದ್ದು, ಓಡಾಟ ನಡೆಸಬೇಕಾಗುತ್ತದೆ.

ಮೀನ: ಮಹಿಳೆಯರು ಮನೆಗೆ ಬರಲಿರುವ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ವ್ಯಾಪಾರಿ ವರ್ಗದವರಿಗೆ ನಂಬಿಕಸ್ಥರಿಂದಲೇ ವಂಚನೆಗೊಳಗಾಗುವ ಭೀತಿ ಎದುರಾಗಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ