Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 16 ನವೆಂಬರ್ 2020 (09:23 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮೇಲಧಿಕಾರಿಗಳ ಅಸಡ್ಡೆ ಧೋರಣೆ ನಿಮ್ಮ ತಾಳ್ಮೆಗೆಡಿಸಲಿದೆ. ಹಿರಿಯರ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಆರ್ಥಿಕವಾಗಿ ಬಾಕಿ ಹಣ ಸಂದಾಯವಾಗಲಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಿ.
 
ವೃಷಭ: ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ.ಉದ್ಯೋಗ ಕ್ಷೇತ್ರದಲ್ಲಿ ಬಿಡುವಿನ ದಿನದ ಖುಷಿ ಅನುಭವಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ.
 
ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ತೋರಿಬಂದೀತು. ಮಾನಸಿಕವಾಗಿ ನಿಮಗೆ ಬಾಧೆ ನೀಡುವ ವಿಚಾರದ ಕುರಿತು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ.
 
ಕರ್ಕಟಕ: ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಅನಿರೀಕ್ಷಿತ ಅನಾಹುತದ ಭಯವಿದೆ. ಎಚ್ಚರಿಕೆಯಿಂದ ಕೆಲಸ ಮಾಡಿ. ವಾಹನ ಖರೀದಿ ಯೋಗ ಸದ್ಯದಲ್ಲೇ ನನಸಾಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ತಾಳ್ಮೆಯಿರಲಿ.
 
ಸಿಂಹ: ನಯವಾದ ಮಾತುಗಾರಿಕೆಯಿಂದ ಎದುರಿಗಿದ್ದವರ ಮನಸ್ಸು ಗೆಲ್ಲುವಿರಿ. ಆದರೆ ನಿಮ್ಮ ಕೆಲವೊಂದು ನಿರ್ಧಾರಗಳು ಪ್ರೀತಿ ಪಾತ್ರರಿಗೆ ಇಷ್ಟವಾಗದೇ ಹೋದೀತು. ಹಳೆಯ ಮಿತ್ರರನ್ನು ಭೇಟಿಯಾದ ಸಂತಸ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.
 
ಕನ್ಯಾ: ನೀವು ಅಂದುಕೊಂಡಿದ್ದ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಸೆಯಾದೀತು. ದೂರ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ದೇವತಾ ಪ್ರಾರ್ಥನೆ ಮರೆಯದಿರಿ.
 
ತುಲಾ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಬಯಸಿದ ಸಂಬಂಧಗಳು ಹುಡುಕಿಕೊಂಡು ಬರಲಿವೆ. ನೂತನ ದಂಪತಿಗಳ ನಡುವೆ ಹೊಂದಾಣಿಕೆ ಕೊರತೆ ಕಂಡುಬಂದೀತು. ಕೆಲಸ ಕಾರ್ಯಗಳಲ್ಲಿ ತಾಳ್ಮೆ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.
 
ವೃಶ್ಚಿಕ: ವೃತ್ತಿರಂಗದಲ್ಲಿ ನಿಮಗೆ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗಲಿದೆ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ದೂರವಾಗಿ ಅಂದುಕೊಂಡ ಕೆಲಸಗಳನ್ನು ನೆರವೇರಿಸಲಿದ್ದೀರಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಎಚ್ಚರಿಕೆಯಿರಲಿ.
 
ಧನು: ನೀವು ಇದುವರೆಗೆ ನಂಬಿಕೊಂಡಿದ್ದವರಿಂದಲೇ ನಿಮಗೆ ವಂಚನೆಯಾದೀತು. ಯಾರನ್ನೂ ಅತಿಯಾಗಿ ಅವಲಂಬಿಸುವುದು ಬೇಡ. ಸಂಗಾತಿಯ ಸಹಕಾರ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ.
 
ಮಕರ: ಬೇರೆಯವರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋದರೆ ತೊಂದರೆ ತಪ್ಪಿದ್ದಲ್ಲ. ಕೋರ್ಟು ಕಚೇರಿ ವ್ಯಾಜ್ಯಗಳಲ್ಲಿ ತೀರ್ಪು ನಿಮ್ಮ ಪರವಾಗಲಿದೆ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು, ಎಚ್ಚರಿಕೆಯಿರಲಿ.
 
ಕುಂಭ: ಇಂದು ಅನಿವಾರ್ಯವಾಗಿ ದೂರ ಸಂಚಾರ ಮಾಡಲಿದ್ದು, ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕಾಗುತ್ತದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಹಿರಿಯರಿಗೆ ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.
 
ಮೀನ: ನಿರುದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ. ಮಹಿಳೆಯರಿಗೆ ಕಳೆದು ಹೋದ ವಸ್ತು ಮರಳಿ ಪಡೆದ ಸಂತಸ ಸಿಗಲಿದೆ. ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ದಿನ ಪಂಚಾಂಗ ಹೀಗಿದೆ!