ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಯಾರ ಮೇಲೂ ಅತಿಯಾದ ಅವಲಂಬನೆ ಬೇಡ. ನಿಮ್ಮ ಕರ್ತವ್ಯದ ಬಗ್ಗೆ ಮಾತ್ರ ಗಮನಹರಿಸಿ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ನೆಮ್ಮದಿಯಾಗಲಿದೆ. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ.
ವೃಷಭ: ಮಕ್ಕಳ ವಿಚಾರದಲ್ಲಿ ಕೆಲವೊಂದು ದೃಢ ನಿರ್ಧಾರ ಕೈಗೊಳ್ಳಲಿದ್ದೀರಿ. ನೂತನ ದಂಪತಿಗಳಿಗೆ ಪ್ರವಾಸ ಯೋಗವಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.
ಮಿಥುನ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ದೂರದೂರಿಗೆ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ. ಅಮೂಲ್ಯವಾದ ವಸ್ತುಗಳನ್ನು ಜೋಪಾನವಾಗಿಡುವ ಹೊಣೆಗಾರಿಕೆ ನಿಮ್ಮ ಮೇಲಿರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.
ಕರ್ಕಟಕ: ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಅಡೆತಡೆಗಳು ನಿವಾರಣೆಯಾಗಲಿವೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ತಿಳಿದು ಮುನ್ನಡೆಯುವುದು ಒಳ್ಳೆಯದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಸಿಂಹ: ಕುಟುಂಬದಲ್ಲಿ ಆಪ್ತೇಷ್ಟರಿಗೆ ಆರೋಗ್ಯ ಸಮಸ್ಯೆಯುಂಟಾಗಲಿದ್ದು, ಚಿಂತೆಗೆ ಕಾರಣವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮಂದಗತಿಯಲ್ಲಿ ಕಾರ್ಯ ನಡೆಯಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಅನಿರೀಕ್ಷಿತ ಘಟನೆಗಳು ನಿಮ್ಮ ಜೀವನಕ್ಕೆ ತಿರುವು ನೀಡಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.
ತುಲಾ: ಹೊಸ ಉದ್ಯೋಗಕ್ಕಾಗಿ ಪ್ರಯತ್ನಪಡುವವರಿಗೆ ಸದ್ಯದಲ್ಲೇ ಶುಭ ಸುದ್ದಿ ಕಾದಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಗಳಿಸಲಿದ್ದೀರಿ. ಅವಿವಾಹಿತರಿಗೆ ಸದ್ಯದಲ್ಲೇ ಕಂಕಣ ಬಲ ಕೂಡಿಬರುವುದು. ಕ್ರಯ-ವಿಕ್ರಯ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.
ವೃಶ್ಚಿಕ: ಅಸಾಧ‍್ಯವೆಂದು ಕೂತಿದ್ದ ಕೆಲಸಗಳು ಇಂದು ತನ್ನಿಂತಾನೇ ನೆರವಾಗಲಿದೆ. ಹಳೆಯ ಮಿತ್ರರನ್ನು ಭೇಟಿಯಾದ ಸಂತಸ ನಿಮ್ಮದಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಬಹುದಿನಗಳ ಕನಸು ನನಸು ಮಾಡಿಕೊಳ್ಳಲಿದ್ದೀರಿ.
ಧನು: ಬಯಸಿದ್ದೊಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ನಿಮ್ಮದಾಗಲಿದೆ. ಆರ್ಥಿಕವಾಗಿ ನಾನಾ ರೀತಿಯ ತಾಪತ್ರಯಗಳು ಎದುರಾದೀತು. ಹಾಗಿದ್ದರೂ ಕೌಟುಂಬಿಕವಾಗಿ ಸಂತೋಷಕ್ಕೆ ಕೊರತೆಯಿರದು. ಚಿಂತೆ ಬೇಡ.
ಮಕರ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸವಾಗಲಿದೆ. ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವೃತ್ತಿರಂಗದಲ್ಲಿ ನಿಮಗೆ ಅನುಕೂಲಕರವಾದ ವಾತಾವರಣವಿರಲಿದೆ. ತಾಳ್ಮೆಯಿರಲಿ.
ಕುಂಭ: ಏನೇ ತೊಂದರೆಯಿದ್ದರೂ ನಿಮ್ಮ ಪಾಲಿಗೆ ಬರಬೇಕಾದ್ದು ಬಂದೇ ಬರುತ್ತದೆ. ಅನಗತ್ಯವಾಗಿ ಚಿಂತೆಗಳಿಗೆ ಕಡಿವಾಣ ಹಾಕಿ. ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು.
ಮೀನ: ಅನಿವಾರ್ಯವಾಗಿ ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ. ನಿಮ್ಮ ಸತತ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ.