Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
  • facebook
  • twitter
  • whatsapp
share
ಮಂಗಳವಾರ, 24 ನವೆಂಬರ್ 2020 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬೇರೆಯವರು ಕಷ್ಟಕ್ಕೆ ಸ್ಪಂದಿಸಲು ಹೋಗಿ ನೀವು ಕಷ್ಟಕ್ಕೆ ಸಿಲುಕಿಕೊಳ್ಳುವ ಪರಿಸ್ಥಿತಿ ಬಂದೀತು. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಬಾಕಿ ಹಣ ಪಾವತಿಯಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ.

ವೃಷಭ: ಮಾನಸಿಕವಾಗಿ ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಕಂಡುಬಂದೀತು. ನಿಮ್ಮ ಕಷ್ಟಕ್ಕೆ ಬೇರೆಯವರು ಜತೆಯಾಗಲಿದ್ದಾರೆ. ಅನಗತ್ಯ ಚಿಂತೆ ಬೇಡ. ಹಿರಿಯರಿಗೆ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಮಿಥುನ: ಇಷ್ಟು ದಿನ ಕಾಯುತ್ತಿದ್ದ ಫಲಿತಾಂಶ ಇಂದು ನಿಮ್ಮ ಪಾಲಿಗೆ ಶುಭಕರವಾಗಿ ಬರಲಿದೆ. ನಿರುದ್ಯೋಗಿಗಳು ಉದ್ಯೋಗ ಸಂದರ್ಶನಕ್ಕೆ ಪರ ಊರಿಗೆ ಪ್ರಯಾಣ ಮಾಡುವರು. ನೂತನ ದಂಪತಿಗಳಿಗೆ ಸದ್ಯದಲ್ಲೇ ಸಂತಾನ ಫಲ ಯೋಗವಿದೆ.

ಕರ್ಕಟಕ: ಇದುವರೆಗೆ ಕಷ್ಟಪಟ್ಟು ಗಳಿಸಿದ ಹಣವನ್ನು ಸರಿಯಾದ ರೀತಿಯಲ್ಲಿ ಬಳಸಲು ಯೋಜನೆ ಮಾಡಿಕೊಳ್ಳುವಿರಿ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕೊಂಚ ಕಡಿಮೆಯಾಗಲಿದೆ.

ಸಿಂಹ: ಕಷ್ಟದಲ್ಲಿರುವ ಸಂಬಂಧಿಕರಿಗೆ ಕೈಲಾದ ಸಹಾಯ ಮಾಡಲಿದ್ದೀರಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ಆದರೆ ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳು ಕೀರ್ತಿ ಸಂಪಾದಿಸುವರು.

ಕನ್ಯಾ: ನಿಮ್ಮ ಕೆಲವೊಂದು ನಿರ್ಧಾರಗಳು ಹಿರಿಯರ ಅಸಮಾಧಾನಕ್ಕೆ ಕಾರಣವಾದೀತು. ಪ್ರೇಮ ಸಂಬಂಧಗಳು ಮನೆಯವರ ಎದುರು ಬಹಿರಂಗವಾದೀತು. ತಾಂತ್ರಿಕ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆ ಕಂಡುಬರಲಿದೆ.

ತುಲಾ: ಅಧಿಕ ಧನ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಕಿರು ಓಡಾಟ ನಡೆಸುವಿರಿ.

ವೃಶ್ಚಿಕ: ವ್ಯಾವಹಾರಿಕವಾಗಿ ನಷ್ಟ ಅನುಭವಿಸಲು ಮಾನಸಿಕವಾಗಿ ಸಿದ್ಧರಾಗಿ. ಕ್ರಿಯಾತ್ಮಕವಾಗಿ ಯೋಚನೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ಮೇಲಧಿಕಾರಿಗಳನ್ನು ಎದುರು ಹಾಕಿಕೊಳ್ಳುವ ದುಸ್ಸಾಹಸ ಮಾಡಬೇಡಿ.

ಧನು: ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರಲಿದ್ದು, ಮನಸ್ಸಿಗೆ ಕೊಂಚ ಸಮಾಧಾನವಾಗಲಿದೆ. ಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮನಸ್ಸಿಗೆ ಇಷ್ಟವಾಗುವವರ ಬಳಿ ನಿಮ್ಮ ಮನದಾಳದ ಮಾತು ಹೇಳಿಕೊಳ್ಳಲಿದ್ದೀರಿ.

ಮಕರ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮಾನಸಿಕವಾಗಿ ಖುಷಿಕೊಡುವ ಕೆಲಸಗಳನ್ನು ಮಾಡುವಿರಿ. ಕೃಷಿಕರಿಗೆ ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು.

ಕುಂಭ: ಯಾವುದೇ ಕೆಲಸಕ್ಕೆ ಹೊರಟರೂ ವಿಘ್ನಸಂತೋಷಿಗಳು ಇದ್ದೇ ಇರುತ್ತಾರೆ. ಎಲ್ಲವನ್ನೂ ಎದುರಿಸಿಕೊಂಡು ಹೋಗುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ. ಸ್ವಂತ ವ್ಯಾಪಾರ, ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರೆ ಅದರಿಂದ ಉತ್ತಮ ಫಲ ಸದ್ಯದಲ್ಲೇ ನಿರೀಕ್ಷಿಸಬಹದು.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿದಾಯಕ ವಾತಾವರಣ ಕಂಡುಬರಲಿದೆ. ನಿಮ್ಮಿಂದ ನಾಲ್ಕು ಜನರಿಗೆ ಉಪಯೋಗವಾಗುವಂತಹ ಕೆಲಸ ಮಾಡಲಿದ್ದೀರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:
  • facebook
  • twitter
  • whatsapp

Follow Webdunia Hindi

ಮುಂದಿನ ಸುದ್ದಿ

webdunia
ದಿನ ಪಂಚಾಂಗ ಹೀಗಿದೆ!