Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 26 ನವೆಂಬರ್ 2020 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಅವಕಾಶವಿದ್ದರೂ ಉದಾಸೀನ ಪ್ರವೃತ್ತಿ ತೋರಿಬರಲಿದೆ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಚಿಂತೆಯಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ನಿಮ್ಮ ಖಾಸಗಿ ದಬುಕಿನಲ್ಲಿ ಮೂಗು ತೂರಿಸುವವರನ್ನು ನಿರ್ಲ್ಷ್ಯಕ್ಷಿಸುವುದೇ ಉತ್ತಮ. ನಿಮ್ಮ ಮನಸ್ಸಿಗೆ ಹಿಡಿಸಿದವರ ಜತೆ ಸುಂದರ ಕ್ಷಣ ಕಳೆಯಲಿದ್ದಾರೆ. ಅಧಿಕಾರಿ ವರ್ಗದವರಿಗೆ ಸ್ಥಾನಪಲ್ಲಟ ಭೀತಿಯಿರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ಶುಭ ಮಂಗಲ ಕಾರ್ಯಕ್ಕಾಗಿ ಓಡಾಟ ನಡೆಸಲಿದ್ದೀರಿ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ. ಆರ್ಥಿಕವಾಗಿ ಧನ ಗಳಿಕೆಗೆ ಉತ್ತಮ ದಾರಿ ತೋರಿಬರಲಿದೆ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ಕಿರು ಓಡಾಟ ನಡೆಸುವಿರಿ.

ಕರ್ಕಟಕ: ಆತ್ಮವಿಶ್ವಾಸದ ಕೊರತೆಯಿಂದ ಹೊಸ ನಿರ್ಧಾರ ಕೈಗೊಳ್ಳಲು ಹಿಂದೇಟು ಹಾಕಲಿದ್ದೀರಿ. ಸ್ವಯಂ ವ್ಯಾಪಾರಿಗಳಿಗೆ ಲಾಭಕರ ದಿನಗಳು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಕೌಟುಂಬಿಕವಾಗಿ ನಿಮಗೆ ಅನುಕೂಲಕರವಲ್ಲದ ಪರಿಸ್ಥಿತಿಯಿರಲಿದ್ದು, ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕಾರ್ಯನಿಮಿತ್ತ ದೂರ ಸಂಚಾರದಿಂದ ದೇಹಾಯಾಸವಾದೀತು. ಹಿರಿಯರಿಗೆ ಲಾಭಾಪೇಕ್ಷೆಯಿಲ್ಲದೇ ಮಾಡುವ ಕೆಲಸದಿಂದ ನೆಮ್ಮದಿ ಸಿಗಲಿದೆ.

ಕನ್ಯಾ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಆದರೆ ಮಹಿಳೆಯರಿಂದ ಅಪವಾದದ ಭೀತಿಯಿದೆ. ಎಚ್ಚರಿಕೆಯಿಂದಿರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಅನಗತ್ಯ ಚಿಂತೆ ಬೇಡ.

ತುಲಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗದೇ ಮನಸ್ಸಿಗೆ ಬೇಸರವಾದೀತು. ಪೋಷಕರ ಮನಸ್ಸಿಗೆ ನೋವುಂಟುಮಾಡಬೇಡಿ. ಕಳೆದು ಹೋದ ವಸ್ತು ಮರಳಿ ಪಡೆಯಲು ಪ್ರಯತ್ನ ನಡೆಸುವಿರಿ. ಇಷ್ಟದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಸಂಗಾತಿಯು ನಿಮ್ಮ ಬಹುದಿನಗಳ ಬೇಡಿಕೆ ಈಡೇರಿಸಲಿದ್ದಾರೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕೊಂಚ ಕಡಿವಾಣ ಹಾಕುವುದು ಉತ್ತಮ. ಗೃಹ ಸಂಬಂಧೀ ಕೆಲಸಗಳಿಗೆ ಅಡಚಣೆಗಳು ತೋರಿಬಂದೀತು. ನಿಧಾನವಾಗಿ ಯೋಚಿಸಿ ಹೆಜ್ಜೆಯಿಡಿ.

ಧನು: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ಸಂಗಾತಿಯ ಮನಸ್ಸೂ ಹಾಳುಮಾಡಬೇಡಿ. ದಾಂಪತ್ಯದಲ್ಲಿ ಹೊಂದಾಣಿಕೆ ಮುಖ್ಯ. ಮಾತಿನ ಮೇಲೆ ಕೊಂಚ ನಿಗಾ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷವಾಗದಂತೆ ಎಚ್ಚರಿಕೆವಹಿಸಿ.

ಮಕರ: ಕಾರ್ಯರಂಗದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಮನೋಭಾವನೆಗಳನ್ನು ಹತೋಟಿಯಲ್ಲಿಡುವುದು ಮುಖ್ಯ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ ಒದಗಿಬರಲಿದೆ.

ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗವಿದೆ. ಕೌಟುಂಬಿಕವಾಗಿ ಸುಖ ಶಾಂತಿಗೆ ಕೊರತೆಯಿರದು. ಆದರೆ ಮಕ್ಕಳ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ಮೀನ: ಬಹಳ ದಿನಗಳ ನಂತರ ನಿಮ್ಮ ಇಷ್ಟದ ವ್ಯಕ್ತಿಗಳನ್ನು ಭೇಟಿಯಾದ ಖುಷಿ ಸಿಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments