ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 2 ಡಿಸೆಂಬರ್ 2020 (09:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಯೋಚಿಸಿ ಮುಂದಡಿಯಿಡುವುದರಿಂದ ಹಿಂದೆ ಮಾಡಿದ ತಪ್ಪುಗಳು ಪುನಾವರ್ತನೆಯಾಗುವ ಸಾಧ್ಯತೆ ಕಡಿಮೆಯಾಗಲಿದೆ. ವಿಶೇಷ ವ್ಯಕ್ತಿಗಳ ಭೇಟಿಯಿಂದ ಹೊಸ ಯೋಜನೆಗಳು ಹೊಳೆಯಲಿವೆ. ದೇವರ ಪ್ರಾರ್ಥನೆ ಮರೆಯದಿರಿ.

ವೃಷಭ: ನಿಮ್ಮ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಳ್ಳುವವರಿರುತ್ತಾರೆ. ಎಚ್ಚರಿಕೆಯಿಂದ ಹೆಜ್ಜೆಯಿಡಿ. ನೆರೆಹೊರೆಯವರ ಚಾಡಿಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಹಿರಿಯರಿಗೆ ಆರೋಗ್ಯ ಸಂಬಂಧೀ ಚಿಂತೆ ಕಾಡಲಿದೆ.

ಮಿಥುನ: ಹಿಂದೆ ಮಾಡಿದ ಒಳ್ಳೆಯ ಕೆಲಸಗಳ ಪುಣ್ಯ ಇಂದು ಸಿಗಲಿದೆ. ಮೆಚ್ಚಿನ ವ್ಯಕ್ತಿಗಳ ಭೇಟಿ ಮನಸ್ಸಿಗೆ ಖುಷಿ ನೀಡಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಮನಸೋ ಇಚ್ಛೆ ಖರ್ಚು ವೆಚ್ಚ ಮಾಡುವುದಕ್ಕೆ ಮಿತಿ ಹೇರಿದರೆ ಉತ್ತಮ.

ಕರ್ಕಟಕ: ನಿಮ್ಮ ಧಾರಾಳತನ ಸಂಗಾತಿಯ ಅಸಮಾಧಾನಕ್ಕೆ ಗುರಿಯಾದೀತು. ಅತಿಯಾಗಿ ಯಾರನ್ನೂ ನಂಬಲು ಹೋಗಬೇಡಿ. ಕೃಷಿಕರಿಗೆ ಬೆಳೆ ನಷ್ಟವಾಗುವ ಭೀತಿ ಕಾಡಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಿಂದ ಲಾಭವಾದೀತು.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಇಷ್ಟಮಿತ್ರರೊಂದಿಗೆ ಪ್ರವಾಸಾದಿ ಸಂತೋಷ ಸಿಗಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ.

ಕನ್ಯಾ: ಅನಗತ್ಯ ವಿಚಾರಗಳಿಗೆ ತಲೆಕಡಿಸಿಕೊಳ್ಳುವುದನ್ನು ಬಿಡಿ. ನಿಮ್ಮ ಮೆಚ್ಚಿನ ವ್ಯಕ್ತಿಗಳಿಂದ ಅನಿರೀಕ್ಷಿತ ಉಡುಗೊರೆಗಳು ಸಿಗಲಿವೆ. ಹೊಸ ಉದ್ಯೋಗಾವಕಾಶಗಳು ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಮಕ್ಕಳಿಂದ ಸಂತಸ ಸಿಗುವುದು.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಸಹಕಾರಿಯಾದ ವಾತಾವರಣವಿರಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗ ಭದ್ರತೆ ಸಿಗಲಿದೆ. ಚಿಂತೆ ಬೇಡ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.

ವೃಶ್ಚಿಕ: ಮಹಿಳೆಯರಿಗೆ ತವರಿನ ಸಂಬಂಧಿಕರನ್ನು ಭೇಟಿಯಾಗುವ ಯೋಗವಿದೆ. ವ್ಯಾಪಾರ, ವ್ಯವಹಾರದಲ್ಲಿ ನಿಮ್ಮ ಲೆಕ್ಕಾಚಾರಗಳು ತಲೆಕೆಳಗಾದೀತು. ಭವಿಷ್ಯಕ್ಕಾಗಿ ಇಂದೇ ತಯಾರಿ ನಡೆಸಿ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಧನು: ಮನಸ್ಸಿಗೆ ಹಿಡಿಸಿದ ಕೆಲಸ ಮಾಡುವುದರಿಂದ ನಿಮಗೂ ನೆಮ್ಮದಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಆರ್ಥಿಕವಾಗಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಎಂದೋ ಅಂದುಕೊಂಡಿದ್ದ ಕೆಲಸಗಳನ್ನು ಇಂದು ಜಾರಿಗೆ ತರಲಿದ್ದೀರಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಿಘ್ನಗಳಿಗೆ ಎದೆಗುಂದಬೇಡಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿದ್ದರೆ ಉತ್ತಮ.

ಕುಂಭ: ಬಹಳ ದಿನಗಳ ನಂತರ ಪ್ರೀತಿ ಪಾತ್ರರನ್ನು ಭೇಟಿಯಾದ ಸಂತಸ ನಿಮ್ಮದಾಗಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಶ್ರದ್ಧೆ, ಕೆಲಸದ ವೈಖರಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರವಾಗಲಿದೆ. ಗೃಹಿಣಿಯರಿಗೆ ಚಿನ್ನಾಭರಣ ಖರೀದಿ ಯೋಗ ಕೂಡಿಬರಲಿದೆ.

ಮೀನ: ವೃತ್ತಿರಂದಲ್ಲಿ ಏರುಪೇರು ಕಂಡುಬರಲಿದೆ. ಎಲ್ಲವನ್ನೂ ಎದುರಿಸುವ ಮಾನಸಿಕ ಸ್ಥೈರ್ಯ ಬೆಳೆಸಿಕೊಳ್ಳಬೇಕು. ಕೌಟುಂಬಿಕವಾಗಿ ಪ್ರೀತಿ ಪಾತ್ರರ ಆಸರೆ, ಸಾಂತ್ವನ ಸಿಗಲಿದೆ. ನೂತನ ದಂಪತಿಗಳಿಗೆ ಸದ್ಯದಲ್ಲೇ ಸಂತಾನ ಫಲ ಸೂಚನೆ ದೊರೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ಮುಂದಿನ ಸುದ್ದಿ
Show comments